Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
  • *ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*
  • *ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*
  • *ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*
  • *ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*
  • *ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*
  • *ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*
  • *ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*
  • *ಅನಾರೋಗ್ಯದಿಂದ ಅಭಿ ಸಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.9 NEWS DESK : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ, ನೀರು, ಕಾಡು, ಪರಿಸರಗಳನ್ನು ಪೂಜಿಸುವುದು ಮತ್ತು ವೀರ ಪರಂಪರೆ ಇವು ಕೊಡಗಿನ ಸಂಸ್ಕೃತಿ ಎಂದು ಕೊಡಗು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಧೋಶ್ ಪೂವಯ್ಯ ನುಡಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಪೊನ್ನಂಪೇಟೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಗೋಣಿಕೊಪ್ಪಲು ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ ನಡೆದ 2025-26ನೇ ಸಾಲಿನ ದಿ.ಇರುವೈಲು ರಘುರಾಮ ಅಸ್ರಣ್ಣ ಮತ್ತು ಲೀಲಾ ಅಸ್ರಣ್ಣ ಜ್ಞಾಪಕಾರ್ಥ ದತ್ತಿ ಕಾರ್ಯಕ್ರಮದ ಆಶಯದಂತೆ ಕೊಡಗಿನ ಸಾಂಸ್ಕೃತಿಕ ಚಿಂತನೆ ಕುರಿತು ಉಪನ್ಯಾಸ ನುಡಿದರು. ಕೊಡಗಿನ ಬೇರೆ ಬೇರೆ ಜನಾಂಗಗಳು ತಮ್ಮದೇ ಆದ ರೀತಿಯಲ್ಲಿ ಜನಪದ ಹಾಡು ಮತ್ತು ನೃತ್ಯಗಳ ಮೂಲಕ ಕೊಡಗಿನ ಸಂಸ್ಕೃತಿಗೆ ಕೊಡುಗೆ ನೀಡಿದ್ದಾರೆ. ಕೊಡವ ಜನಾಂಗದ ದುಡಿಕೊಟ್ಟ್ ಪಾಟ, ಬಾಳೋಪಾಟ, ಮಂಗಲಪಾಟ, ದೇವಡಪಾಟ, ಬೆಂದುಪಾಟ, ಕೊಡಗಿನ ಜಾನಪದ ನೃತ್ಯಗಳಾದ ಉಮ್ಮತ್ತಾಟ್, ಬೊಳ್ಕಾಟ್, ಕತ್ತಿಯಾಟ್, ಪುತರಿ ಕೋಲಾಟ್ ಮುಂತಾದ ಸಮರಕಲೆಗಳು, ಅರೆ ಭಾಷೆ ಜನಾಂಗದವರ ಸೋಬಾನೆ ಹಾಡು, ಒಕ್ಕಲಿಗ ಜನಾಂಗದ ಸಿಡಿಯಾಟ್, ಸುಗ್ಗಿ ಕುಣಿತ,ಯಾರವ ಮತ್ತು ಕುರುಬರ ಹಾಡು ಮತ್ತು ನೃತ್ಯಗಳು ಅಲ್ಲದೆ ಹೊರ ಜಿಲ್ಲೆಗಳಿಂದ ಬಂದು ನೆಲೆ ನಿಂತಿರುವ ಹಲವಾರು ಜನಾಂಗಗಳು ಕೊಡಗಿನ ಸಾಂಸ್ಕೃತಿಕ ಲೋಕಕ್ಕೆ ಕೊಡುಗೆಗಳನ್ನು ನೀಡಿದೆ. ರಂಗಭೂಮಿ ಮತ್ತು ಜನಪದ ರಂಗಭೂಮಿ, ಸಿನೆಮಾ ಕೂಡ ಕೊಡಗಿನ ಸಾಂಸ್ಕೃತಿಕ ಲೋಕಕ್ಕೆ ತನ್ನದೇ ಆದ ಕೊಡುಗೆಗಳನ್ನು ನೀಡಿದೆ ಎಂದರು. ಪ್ರಾಸ್ತಾವಿಕವಾಗಿ ಮಾತನಾಡಿದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೇಶವ ಕಾಮತ್ ಅವರು ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಶೈಕ್ಷಣಿಕೇತರ ವಿಷಯಗಳನ್ನು ಅಭಿವೃದ್ಧಿ ಗೊಳಿಸುವ ಕಾರ್ಯಕ್ರಮಗಳನ್ನು ನಡೆಸುವುದೇ ಸಾಹಿತ್ಯ ಪರಿಷತ್ತಿನ ದತ್ತಿ ಕಾರ್ಯಕ್ರಮಗಳ ಧ್ಯೇಯ ಎಂದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಗೋಣಿಕೊಪ್ಪಲು ಪ್ರೌಢಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ಪಿ.ಕೆ.ಚಿನ್ನಪ್ಪ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತು ನಮ್ಮ ಶಾಲೆಯ ವಿದ್ಯಾರ್ಥಿಗಳಿಗ ಕೊಡಗಿನ ಸಂಸ್ಕೃತಿಯ ಪರಿಚಯ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಸಂತೋಷದ ವಿಚಾರ ಎಂದರು. ದತ್ತಿದಾನಿಗಳ ಆಶಯದಂತೆ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲೆಯ 2024-25 ನೇ ಸಾಲಿನ 10ನೇ ತರಗತಿಯ ಕನ್ನಡ ಮಾಧ್ಯಮ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಸೋಮವಾರಪೇಟೆ ತಾಲೂಕಿನ ನೀಡ್ತಾ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಕು. ಜೆ ಎಸ್ ಪೂರ್ವಿಕ ರವರನ್ನು ಗೌರವಿಸಲಾಯಿತು. ಗೋಣಿಕೊಪ್ಪಲು ಪ್ರೌಢಶಾಲೆಯ ಆಡಳಿತ ಮಂಡಳಿಯ ಕಾರ್ಯದರ್ಶಿ ಕುಪ್ಪಂಡ ಗಣೇಶ ತಿಮ್ಮಯ್ಯ, ಶಾಲೆಯ ಪ್ರಾಂಶುಪಾಲ ಕೃಷ್ಣ ಚೈತನ್ಯ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪೊನ್ನಂಪೇಟೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು, ಗೋಣಿಕೊಪ್ಪಲು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ  ಕುಲ್ಲಚಂಡ ಪ್ರಮೋದ್ ಗಣಪತಿ ಮಾತನಾಡಿ, ವಿದ್ಯಾರ್ಥಿಗಳಿಗೆ ನಾಡು ನುಡಿಯ ಪರಿಚಯದ ಜೊತೆಗೆ ಸಾಮಾನ್ಯ ಜ್ಞಾನದ ಕುರಿತು ಅಭ್ಯಾಸ ಮಾಡುವ ಅವಶ್ಯಕತೆ ಇದೆ. ವಿದ್ಯಾರ್ಥಿಗಳು ಮೊಬೈಲ್ ನಿಂದ ಹೊರಬಂದು ಗ್ರಂಥಾಲಯದ ಕಡೆಗೆ ಮುಖ ಮಾಡಬೇಕು ಎಂದರು. ಕಾರ್ಯಕ್ರಮದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನಿರ್ದೇಶಕ ಟಿ.ಆರ್.ವಿನೋದ್ ಪೂರ್ವಿಕಾ ಅವರ ಪೋಷಕರಾದ ಸುರೇಶ್ ಮತ್ತು ಲೀಲಾ ಉಪಸ್ಥಿತರಿದ್ದರು.  ಕಾರ್ಯಕ್ರಮವನ್ನು ಗೋಣಿಕೊಪ್ಪಲು ಪ್ರೌಢಶಾಲೆಯ ವಿದ್ಯಾರ್ಥಿಗಳು ನಾಡಗೀತೆ ಹಾಡಿದರು. ಅಧ್ಯಾಪಕರು ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.9 NEWS DESK : ನಗರಸಭೆಯ 2026-27ನೇ ಸಾಲಿನ ಆಯವ್ಯಯ ಮಂಜೂರಾತಿಗೆ ಮಾರ್ಚ್, 11 ರಂದು ಬೆಳಗ್ಗೆ 11.30…

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 2026

*ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*

ಮಾರ್ಚ್ 9, 2026

*ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*

ಮಾರ್ಚ್ 9, 2026

*ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*

ಮಾರ್ಚ್ 9, 2026

*ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*

ಮಾರ್ಚ್ 9, 2026

*ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*

ಮಾರ್ಚ್ 9, 2026

*ಅನಾರೋಗ್ಯದಿಂದ ಅಭಿ ಸಾವು*

ಮಾರ್ಚ್ 9, 2026

*ಕಾಡಾನೆ ಹಾವಳಿ ನಿಯಂತ್ರಿಸಲು ಸರ್ಕಾರ ವಿಫಲ : ಕೂಡಲೇ ಕೊಡಗಿಗೆ ಅರಣ್ಯ ಸಚಿವರು ಭೇಟಿ ನೀಡಲಿ : ಎಡಿಕೇರಿ ಪ್ರಸನ್ನ ಒತ್ತಾಯ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.