
ಮಡಿಕೇರಿ NEWS DESK ಮಾ.10 : ಮಡಿಕೇರಿ- ಮುಕ್ಕೋಡ್ಲು- ಹಮ್ಮಿಯಾಲ ನಡುವೆ ಸಂಚರಿಸುತ್ತಿದ್ದ ಬಸ್ ನಿಯಮಿತವಾಗಿ ಬಾರದೆ ಇರುವುದರಿಂದ ಗ್ರಾಮಸ್ಥರು ಸಮಸ್ಯೆ ಎದುರಿಸುತ್ತಿದ್ದರು.
ಮಡಿಕೇರಿಯ ಕೆಎಸ್‌ಆರ್‌ಟಿಸಿ ಡಿಪೋ ಅಧಿಕಾರಿಗಳಿಗೆ ಅನೇಕ ಬಾರಿ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಇದರಿಂದ ಬೇಸತ್ತ ಗ್ರಾಮಸ್ಥರು ನೇರವಾಗಿ ಶಾಸಕ ಡಾ.ಮಂತರ್ ಗೌಡ ಅವರಿಗೆ ದೂರು ಸಲ್ಲಿಸಿದರು. ಇದಕ್ಕೆ ತಕ್ಷಣ ಸ್ಪಂದಿಸಿದ ಶಾಸಕರು ಮಡಿಕೇರಿ ಕೆಎಸ್‌ಆರ್‌ಟಿಸಿ ಡಿಪೋದಲ್ಲಿ ಹಮ್ಮಿಯಾಲ ಗ್ರಾಮಸ್ಥರ ಸಮ್ಮುಖದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಮಡಿಕೇರಿ- ಮುಕ್ಕೋಡ್ಲು- ಹಮ್ಮಿಯಾಲ ಭಾಗದ ಸಾರಿಗೆ ಸಮಸ್ಯೆಯನ್ನು ತಕ್ಷಣ ಬಗೆಹರಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಇದೀಗ ಗ್ರಾಮದ ಜನರ ಬೇಡಿಕೆಯಂತೆ ಮಡಿಕೇರಿ – ಮುಕ್ಕೋಡ್ಲು- ಹಮ್ಮಿಯಾಲ ನಡುವಿನ ಬಸ್ ವ್ಯವಸ್ಥೆಯನ್ನು ಕಾರ್ಯರೂಪಕ್ಕೆ ತರಲಾಗಿದೆ.









