
ಮಡಿಕೇರಿ NEWS DESK ಮಾ.10 : ಕಾಡಾನೆ ದಾಳಿಯಿಂದ ದುರದೃಷ್ಟವಶಾತ್ ಮೃತಪಟ್ಟ ಜಲಜಾಕ್ಷಿ ಅವರ ಬಾಳೆಗುಂಡಿ ಹಾಡಿ ನಿವಾಸಕ್ಕೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರು ಭೇಟಿ ನೀಡಿ ಅಂತಿಮ ದರ್ಶನ ಪಡೆದರು. ಮೃತ ಜಲಜಾಕ್ಷಿ ಅವರ ಕುಟುಂಬದ ಸದಸ್ಯರುಗಳಿಗೆ ಸಾಂತ್ವನ ಹೇಳಿದ ಶಾಸಕರು ಮೊದಲ ಹಂತದ ಪರಿಹಾರ ರೂ.5 ಲಕ್ಷ ರೂಪಾಯಿಗಳ ಚೆಕ್ ನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದರು. ನಂತರ ಮಾತನಾಡಿದ ಶಾಸಕರು ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ. ಈ ಹಿನ್ನೆಲೆಯಲ್ಲಿ ದಾಳಿ ಮಾಡಿದ ಕಾಡಾನೆ ಸೆರೆಗೆ ತಕ್ಷಣ ಕಾರ್ಯಪ್ರವೃತ್ತವಾಗುಂತೆ ಅರಣ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಆನೆ- ಮಾನವ ಸಂಘರ್ಷ ತಡೆಗೆ ಶಾಶ್ವತ ಪರಿಹಾರ ಸೂಚಿಸಲು ತಿಳಿಸಲಾಗಿದೆ ಎಂದರು.









