Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
  • *ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*
  • *ಮುಖ್ಯಮಂತ್ರಿಗಳ ಕಾರ್ಯದರ್ಶಿ ನಕುಲ್ ಗೆ  ಕುಶಾಲನಗರದಲ್ಲಿ ಸನ್ಮಾನ*
  • *ಚೆಟ್ಟಳ್ಳಿ ಪ್ರೌಡಶಾಲೆಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ಗೌರವ ನಮನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*
ಇತ್ತೀಚಿನ ಸುದ್ದಿಗಳು ಕರ್ನಾಟಕ

*”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*

ಮಾರ್ಚ್ 11, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮೈಸೂರು, ಮಾ.11 NEWS DESK : ದೇಶದ ಆರ್ಥಿಕತೆ ಕೊಡುಗೆಗಳನ್ನು ನೀಡಲು ಪ್ರಮುಖ ಪಾತ್ರ ವಹಿಸುವ ನಗರಗಳ ಅಭಿವೃದ್ಧಿಗೆ ಒತ್ತು ನೀಡಲು ಮುಂದಾಗಿರುವ ಕೇಂದ್ರ ಸರ್ಕಾರ ಈಗ ಮೈಸೂರಿಗೂ ವಿಶೇಷ ಕೊಡುಗೆ ನೀಡಲು ನಿರ್ಧರಿಸಿದೆ. ಮೈಸೂರನ್ನು “ನಗರ ಆರ್ಥಿಕ ವಲಯ” ಯೋಜನೆಗೆ ಸೇರ್ಪಡೆಗೊಳಿಸಲು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರಿಗೆ ಮನವಿ ಸಲ್ಲಸಿದ್ದಾರೆ. ನವದೆಹಲಿಯಲ್ಲಿ ವಿತ್ತ ಸಚಿವರನ್ನು ಭೇಟಿ ಮಾಡಿದ ಸಂಸದ ಯದುವೀರ್‌ ಒಡೆಯರ್‌, ಬಜೆಟ್‌ನಲ್ಲಿ ಘೋಷಣೆ ಮಾಡಿರುವ “ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ನಗರವನ್ನೂ ಸೇರ್ಪಡೆ ಮಾಡಬೇಕು. ಸಾಂಸ್ಕೃತಿಕ ರಾಜಧಾನಿಯಾಗಿರುವ ಮೈಸೂರು ವಿಶ್ವಮಟ್ಟದಲ್ಲಿ ಖ್ಯಾತಿ ಪಡೆದುಕೊಂಡಿದೆ. ಅದನ್ನು ಇನ್ನಷ್ಟು ಮೇಲ್ದರ್ಜೆಗೇರಿಸಲು ಈ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು. :: ಹಣಕಾಸು ಸಚಿವರಿಗೆ ಮನವಿ ಸಲ್ಲಿಕೆ ::  ಈ ಕುರಿತು ಮಾಹಿತಿ ನೀಡಿರುವ ಸಂಸದ ಯದುವೀರ್‌ ಒಡೆಯರ್‌, ನಗರ ಆರ್ಥಿಕ ವಲಯಕ್ಕೆ ಮೈಸೂರನ್ನು ಸೇರಿಸಬೇಕು ಎಂದು ಹಣಕಾಸು ಸಚಿವರಿಗೆ ಮನವಿ ಸಲ್ಲಿಸಲಾಗಿತ್ತು. ಬುಧವಾರ ಮತ್ತೊಮ್ಮೆ ಈ ಕುರಿತು ಮನವಿ ಸಲ್ಲಿಸಿದಾಗ, ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ತಿಳಿಸಿದರು. ಈ ಯೋಜನೆಗೆ ಮೈಸೂರು ಸೇರ್ಪಡೆಯಾದರೆ ಎಲ್ಲ ರೀತಿಯ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಅವಕಾಶ ದೊರೆಯುತ್ತದೆ ಎಂದರು. ಮೈಸೂರು ಈಗಾಗಲೇ ಶ್ರೀಮಂತ ಪಾರಂಪರೆ ಹಾಗೂ ಪರಿಸರವನ್ನು ಹೊಂದಿದೆ. ಅದಕ್ಕೆ ಯಾವುದೇ ಧಕ್ಕೆಯಾಗದಂತೆ, ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳಲು ಮುಂದಾಗಲಿದ್ದೇವೆ ಎಂದು ಸಂಸದರು ತಿಳಿಸಿದರು. :: ಎಲ್ಲ ವರ್ಗದವರ ಅಭಿಪ್ರಾಯ ಸಂಗ್ರಹ ::  ಮೈಸೂರು ಅಭಿವೃದ್ಧಿ ಕುರಿತು ಎಲ್ಲ ಕ್ಷೇತ್ರದ ತಜ್ಞರು, ನಾಯಕರು ಹಾಗೂ ಮುಖಂಡರು, ಸಾರ್ವಜನಿಕರೊಂದಿಗೆ ಸಭೆ ನಡೆಸಿ ಸಲಹೆ-ಸೂಚನೆ, ಅಭಿಪ್ರಾಯ ಸಂಗ್ರಹಿಸಿ ಸೂಕ್ತ ಯೋಜನೆ ರೂಪಿಸಲಾಗುವುದು ಎಂದು ಯದುವೀರ್‌ ವಿವರಿಸಿದರು. ಐದು ಲಕ್ಷಕ್ಕಿಂತ ಹೆಚ್ಚಿನ ಜನಸಂಖ್ಯೆ ಇರುವ ಎರಡು ಮತ್ತು ಮೂರನೇ ಸ್ತರದ ನಗರಗಳು, ತೀರ್ಥಕ್ಷೇತ್ರಗಳಲ್ಲಿ ಅತ್ಯಾಧುನಿಕ ಮೂಲಸೌಕರ್ಯ ಸುಧಾರಣೆಯನ್ನೂ ಕೈಗೊಳ್ಳಲಾಗುತ್ತದೆ. ಹಲವು ಬಾರಿ ಮನವಿ ಮಾಡಿದ್ದರಿಂದ ನಿರ್ಮಲಾ ಸೀತಾರಾಮನ್‌ ಅವರು ಮೈಸೂರನ್ನು ಈ ಯೋಜನೆಗೆ ಸೇರಿಸಲು ಭರವಸೆ ನೀಡಿದ್ದಾರೆ ಎಂದರು. ಈ ಯೋಜನೆಗಳು ಆವಿಷ್ಕಾರ ಮತ್ತು ಅವಕಾಶಗಳ ಹೆಬ್ಬಾಗಿಲು ತೆರೆಯಲಿವೆ. ನಮ್ಮ ನಗರವನ್ನು ಇನ್ನಷ್ಟು ಸುಂದರಗೊಳಿಸಲು, ಅಭಿವೃದ್ಧಿಗೊಳಿಸಲು ಈಗ ಅವಕಾಶ ದೊರೆಯುತ್ತದೆ. ಅದನ್ನು ಎಲ್ಲರೂ ಸೇರಿ ಸದ್ವಿನಿಯೋಗಗೊಳಿಸೋಣ. ಈ ನಿಟ್ಟಿನಲ್ಲಿ ಎಲ್ಲರೂ ಪಕ್ಷಾತೀತವಾಗಿ ಕೈ ಜೋಡಿಸೋಣ, ಮೈಸೂರನ್ನು ಜಗದ್ವಿಖ್ಯಾತಿಗೊಳಿಸೋಣ ಎಂದು ಸಂಸದ ಯದುವೀರ್‌ ಒಡೆಯರ್‌ ತಿಳಿಸಿದರು. :: ಏನಿದು ನಗರ ಆರ್ಥಿಕ ವಲಯ :: 
ನಗರಾಭಿವೃದ್ಧಿಯ ವೇಗವನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಈಗಾಗಲೇ ಬೆಂಗಳೂರು, ಸೂರತ್‌, ವಾರಾಣಸಿ, ವಿಶಾಖಪಟ್ಟಣಂ, ಭುವನೇಶ್ವರ್‌, ಪುರಿ, ಕಟಕ್‌, ಕೊಯಮತ್ತೂರು, ಈರೋಡ್‌, ತಿರುಪ್ಪುರ್‌ ಒಳಗೊಂಡಂತೆ ನಗರ ಆರ್ಥಿಕ ವಲಯ ಯೋಜನೆ ರೂಪಿಸಲಾಗಿದೆ. ಪ್ರತಿ ವಲಯಕ್ಕೆ ವಾರ್ಷಿಕ ಐದು ಸಾವಿರ ಕೋಟಿ ರೂಪಾಯಿ ಅನುದಾನ ಒದಗಿಸಲಾಗುತ್ತಿದೆ. ಈ ಹಣದಲ್ಲಿ ನಗರ ಅಭಿವೃದ್ಧಿ ಕೈಗೊಳ್ಳಲು ಬಳಸಲಾಗುತ್ತದೆ. ಖಾಸಗಿ-ಸರ್ಕಾರ ಸಹಭಾಗಿತ್ವದಲ್ಲಿ ಈ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುತ್ತದೆ. ಇದರೊಂದಿಗೆ *ಪ್ರಾದೇಶಿಕ ಮೆಡಿಕಲ್‌ ಹಬ್‌” ಯೋಜನೆ ಕೂಡ ಅನುಷ್ಠಾನಕ್ಕೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ಈಶಾ ಔಟ್‌ರೀಚ್ ಸಹಕಾರ ಮತ್ತು ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತಿರುವ ನಾಪೋಕ್ಲುವಿನ ಪೊನ್ನಾಡ್ ರೈತ ಉತ್ಪಾದಕ…

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026

*ಮುಖ್ಯಮಂತ್ರಿಗಳ ಕಾರ್ಯದರ್ಶಿ ನಕುಲ್ ಗೆ  ಕುಶಾಲನಗರದಲ್ಲಿ ಸನ್ಮಾನ*

ಆಗಷ್ಟ್ 23, 2026

*ಚೆಟ್ಟಳ್ಳಿ ಪ್ರೌಡಶಾಲೆಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 23, 2026

*ಕತ್ತಲೆಕಾಡು ವಿನಾಯಕ ಸೇವಾ ಟ್ರಸ್ಟ್‌ ವತಿಯಿಂದ 20ನೇ ವರ್ಷದ ಗೌರಿ ಗಣೇಶೋತ್ಸವ – ಹಲವು ಕಾರ್ಯಕ್ರಮಗಳ ಆಕರ್ಷಣೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.