Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*
  • *ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*
  • *ಅಖಿಲ ಅಮ್ಮ ಕೊಡವ ಸಮಾಜದ ಅಭಿವೃದ್ಧಿಗೆ ಶಾಸಕ ಎ.ಎಸ್.ಪೊನ್ನಣ್ಣರಿಂದ ಚೆಕ್ ವಿತರಣೆ*
  • *ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‍ಎಸ್‍ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ : ಆಧುನಿಕತೆಯ ಭರದಲ್ಲಿ ಸಂಸ್ಕಾರಗಳು ಕಣ್ಮರೆಯಾಗುತ್ತಿರುವುದು ವಿಷಾದನೀಯ : ವಿನೋದ್ ಮೂಡಗದ್ದೆ*
  • *ಗೋಣಿಕೊಪ್ಪ : ವಿದ್ಯಾರ್ಥಿಗಳು ಶಿಕ್ಷಕರನ್ನು ಗೌರವಿಸಿ : ಜಗದೀಶ್ ಜೋಡುಬೀಟಿ*
  • *ಗೋಣಿಕೊಪ್ಪ ಸೀನಿಯರ್ ಚೇಂಬರ್ “ಇಂಟರ್‌ನ್ಯಾಷನಲ್” ಸಂಸ್ಥೆಗೆ ಪ್ರಶಸ್ತಿಯ ಗರಿ*
  • *ವನ್ಯಜೀವಿಗಳ ಉಪಟಳ ತಡೆಗೆ ಆಗ್ರಹ : ಅರಣ್ಯ ಭವನಕ್ಕೆ ಬಿಜೆಪಿ ಮುತ್ತಿಗೆ ಯತ್ನ : ಹೆದ್ದಾರಿ ತಡೆದು ಪ್ರತಿಭಟನೆ*
  • *ಬಸವಣ್ಣ ಹಾಗೂ ಅಕ್ಕಮಹಾದೇವಿ ಕುರಿತು ಅವಹೇಳನ : ಕಿಡಿಗೇಡಿಯ ಬಂಧನಕ್ಕೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಆಗ್ರಹ*
  • *ಕಾಡಾನೆ ದಾಳಿ : ಸರಕಾರದ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ : ತೇಲಪಂಡ ಶಿವಕುಮಾರ್ ನಾಣಯ್ಯ ಅಸಮಾಧಾನ*
  • *ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‍ಎಸ್‍ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ : ಆಧುನಿಕತೆಯ ಭರದಲ್ಲಿ ಸಂಸ್ಕಾರಗಳು ಕಣ್ಮರೆಯಾಗುತ್ತಿರುವುದು ವಿಷಾದನೀಯ : ವಿನೋದ್ ಮೂಡಗದ್ದೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‍ಎಸ್‍ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ : ಆಧುನಿಕತೆಯ ಭರದಲ್ಲಿ ಸಂಸ್ಕಾರಗಳು ಕಣ್ಮರೆಯಾಗುತ್ತಿರುವುದು ವಿಷಾದನೀಯ : ವಿನೋದ್ ಮೂಡಗದ್ದೆ*

ಮಾರ್ಚ್ 13, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಮಾ.13 NEWS DESK : ಪೂರ್ವಜರು ಪ್ರಕೃತಿಯೊಂದಿಗೆ ಒಡನಾಟದೊಂದಿಗೆ ಬಾಳಿ ಬದುಕು ಕಂಡಿದ್ದರು. ಸುಖಿ ಜೀವನ ನಡೆಸುತ್ತಿದ್ದರು. ಇದೀಗ ಆಧುನಿಕತೆ ಎಲ್ಲಡೆ ಪಸರಿಸಿ ಪೂರ್ವಜರು ನಡೆಸಿಕೊಂಡು ಬಂದ ಜೀವನ ಪದ್ಧತಿಯು ಕಣ್ಮರೆಯಾಗುತ್ತಿರುವುದನ್ನು ನಾವು ಮನ ಕಾಣುತ್ತಿದ್ದೇವೆ ಎಂದು ಮಡಿಕೇರಿ ಆಕಾಶವಾಣಿಯ ಉದ್ಘೋಷಕ  ವಿನೋದ್ ಮೂಡಗದ್ದೆ ಅವರು ವಿಷಾದ ವ್ಯಕ್ತಪಡಿಸಿದರು. ಕೊಡಗು ವಿಶ್ವವಿದ್ಯಾನಿಲಯ, ರಾಷ್ಟ್ರೀಯ ಸೇವಾ ಯೋಜನೆ ಘಟಕ, ಸಂತ ಅನ್ನಮ್ಮ ಪದವಿ ಕಾಲೇಜು ವಿರಾಜಪೇಟೆ ಆಶ್ರಯದಲ್ಲಿ ಕಲ್ತೋಡು ನಾಂಗಾಲ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ 06 ದಿನಕಾಲ ವಾರ್ಷಿಕ ವಿಶೇಷ ಶಿಬಿರ ಆಯೋಜನೆಗೊಂಡಿತ್ತು. ಸಮಾರೋಪ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಸಮಾರಂಭ ಉದ್ದೇಶಿಸಿ ಮಾತನಾಡಿದ ವಿನೋದ್ ಅವರು ಸೇವೆ ಎಂಬುದು ಜೀವನದ ಅವಿಭಾಜ್ಯ ಅಂಗ ಎಂದು ಪರಿಗಣಿಸುವಂತಾಗಬೇಕು. ಸೇವಾ ಮನೋಭಾವ ಮತ್ತು ಪರಿಸರ ಜಾಗೃತಿ ವಿದ್ಯಾರ್ಥಿಗಳ ಜೀವನದಲ್ಲಿ ಜಾಗೃತವಾಗಬೇಕು ಎನ್ನುವ ಸದುದ್ದೇಶದಿಂದ ಗಾಂಧಿಜೀ ಅವರ ತತ್ವ ಸಿದ್ದಾಂತ ಜೀವಂತವಾಗಿರಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕ ಅರಂಭಿಸಿತು. ಶಿಬಿರವು ಒಂದು ವಾರಕ್ಕೆ ಮಾತ್ರ ಸೀಮಿತವಾಗದೇ ಜೀವನದ ಪ್ರತಿಯೊಂದು ಹಂತಗಳಲ್ಲೂ ಅಳವಡಿಸಿಕೊಳ್ಳಬೇಕು. ವಿಜ್ಞಾನ ಎಷ್ಟೇ ಮುಂದುವರೆದಿದ್ದರು ಪರಿಸರ ಮುನಿಸಿದಲ್ಲಿ ಸರ್ವ ನಾಶಕ್ಕೆ ನಾಂದಿಯಾಗುವುದು ಶಥಸಿದ್ದ, ಪರಿಸರವನ್ನು ಉಳಿಸಿಕೊಂಡು ವಿಜ್ಞಾನವನ್ನು ಬೆಳಸುವುದು ಸೂಕ್ತ. ಗ್ರಾಮೀಣ ಭಾಗದಲ್ಲಿ ಕೂಡು ಕುಟುಂಭದಿಂದ ಕೃಷಿ ಪದ್ದತಿಗಳು ಜೀವಂತವಾಗಿರಿಸಿತು. ಆದರೆ ಪ್ರಸ್ತುತ ಕುಟುಂಭಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗಿ ಕೃಷಿಯತ್ತ ಮುಖ ಮಾಡುವವರ ಸಂಖ್ಯೆ ವಿರಳವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಶಾಲಾ ಸ್ಥಳ ದಾನಿಗಳು ಕೃಷಿಕರಾದ ಕುಪ್ಪಂಡ ಗೋಪಾಲ್ ಬೋಪಯ್ಯ ಅವರು ಮಾತನಾಡಿ, ಆಧುನಿಕತೆ ಮತ್ತು ಹಣ ಮಾಡುವ ಚಿಂತನೆಯಿಂದಾಗಿ ಮಕ್ಕಳು ತಮ್ಮ ಪೋಷಕರನ್ನು ಮರೆಯುವ ಹಂತಕ್ಕೆ ತಲುಪಿದೆ. ಜೀವನದಲ್ಲಿ ಎಲ್ಲದನ್ನು ಪಡೆಯಲು ಅವಕಾಶವಿದೆ. ಆದರೆ ತಂದೆ ತಾಯಿಯನ್ನು ಪಡೆಯಲು ಅಸಾಧ್ಯ. ಜೀವನ ನಡೆಸಲು ಮಾತ್ರ ಶಿಕ್ಷಣ ಸೀಮಿತವಾಗಬೇಕು ವಿನ: ವಿನಾಶಕ್ಕೆ ಉಪಯೋಗವಾಗಬಾರದು. ಗ್ರಾಮ ಭಾಗದಲ್ಲಿ ಶಿಬಿರವನ್ನು ಆಯೋಜನೆ ಮಾಡಿರುವುದನ್ನು ಶ್ಲಾಘಸಿದರು. ಸೆಂಟ್ ಆನ್ಸ್ ಪದವಿ ಕಾಲೇಜಿನ  ಎನ್.ಎಸ್.ಎಸ್ ಘಟಕದ ಶಿಬಿರಾಧಿಕಾರಿಗಳಾದ ಬಿ.ಎನ್ .ಶಾಂತಿಭೂಷಣ್ ಅವರು ಶಿಬಿರದ ವರದಿಯನ್ನು ವಾಚಿಸಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಸಂತ ಅನ್ನಮ್ಮ ಪದವಿ ಕಾಲೇಜಿನ ಪ್ರಾಂಶುಪಾಲರಾದ ತೃಪ್ತಿ ಬೋಪಣ್ಣ ಮತ್ತು ಸ.ಹಿ.ಪ್ರಾ. ಶಾಲೆಯ ಮುಖ್ಯೋಪಾದ್ಯಯರಾದ ಫ್ಯಾನ್ಸಿ ಲೋಬೋ ಅವರು ಮಾತನಾಡಿದರು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ಆಶಾ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕುಪ್ಪಂಡ ಗೋಪಾಲ್ ಬೋಪಯ್ಯ, ಆಶಾ,
ಫ್ಯಾನ್ಸಿ ಲೋಬೋ ಹಾಗೂ ಬಿ.ಎನ್ .ಶಾಂತಿ ಭೂಷಣ್ ಅವರುಗಳನ್ನು ಸನ್ಮಾನಿಸಲಾಯಿತು. ಬಳಿಕ ಶಿಬಿರಾರ್ಥಿಗಳು ಶಿಬಿರದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಎನ್.ಎಸ್.ಎಸ್.ಘಟಕದ ಶಿಬಿರಾರ್ಥಿಗಳು, ಸಂತ ಅನ್ನಮ್ಮ ಪದವಿ ಕಾಲೇಜಿನ ಉಪನ್ಯಾಸಕರು, ಸ.ಹಿ.ಪ್ರಾ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು ಹಾಜರಿದ್ದರು. ಸಂತ ಅನ್ನಮ್ಮ ಪದವಿ ಕಾಲೇಜಿನ ಕನ್ನಡ ಉಪನ್ಯಾಸಕರಾದ ಪ್ರತಿಮಾ ರೈ ಸ್ವಾಗತಿಸಿದರು, ಶಿಬಿರದ ನಾಯಕ ಮುತ್ತಪ್ಪ ವಂದಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*

ಮಾರ್ಚ್ 13, 2026

*ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*

ಮಾರ್ಚ್ 13, 2026

*ಅಖಿಲ ಅಮ್ಮ ಕೊಡವ ಸಮಾಜದ ಅಭಿವೃದ್ಧಿಗೆ ಶಾಸಕ ಎ.ಎಸ್.ಪೊನ್ನಣ್ಣರಿಂದ ಚೆಕ್ ವಿತರಣೆ*

ಮಾರ್ಚ್ 13, 2026

*ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*

ಮಾರ್ಚ್ 13, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.13 NEWS DESK : ಶಿಕ್ಷಣವೇ ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುತ್ತದೆ. ಶಿಕ್ಷಣ ಪಡೆದ ಮಹಿಳೆ ಕುಟುಂಬದ ಅಭಿವೃದ್ಧಿಗೆ…

*ಅಖಿಲ ಅಮ್ಮ ಕೊಡವ ಸಮಾಜದ ಅಭಿವೃದ್ಧಿಗೆ ಶಾಸಕ ಎ.ಎಸ್.ಪೊನ್ನಣ್ಣರಿಂದ ಚೆಕ್ ವಿತರಣೆ*

ಮಾರ್ಚ್ 13, 2026

*ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‍ಎಸ್‍ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ : ಆಧುನಿಕತೆಯ ಭರದಲ್ಲಿ ಸಂಸ್ಕಾರಗಳು ಕಣ್ಮರೆಯಾಗುತ್ತಿರುವುದು ವಿಷಾದನೀಯ : ವಿನೋದ್ ಮೂಡಗದ್ದೆ*

ಮಾರ್ಚ್ 13, 2026

*ಗೋಣಿಕೊಪ್ಪ : ವಿದ್ಯಾರ್ಥಿಗಳು ಶಿಕ್ಷಕರನ್ನು ಗೌರವಿಸಿ : ಜಗದೀಶ್ ಜೋಡುಬೀಟಿ*

ಮಾರ್ಚ್ 13, 2026

*ಗೋಣಿಕೊಪ್ಪ ಸೀನಿಯರ್ ಚೇಂಬರ್ “ಇಂಟರ್‌ನ್ಯಾಷನಲ್” ಸಂಸ್ಥೆಗೆ ಪ್ರಶಸ್ತಿಯ ಗರಿ*

ಮಾರ್ಚ್ 13, 2026

*ವನ್ಯಜೀವಿಗಳ ಉಪಟಳ ತಡೆಗೆ ಆಗ್ರಹ : ಅರಣ್ಯ ಭವನಕ್ಕೆ ಬಿಜೆಪಿ ಮುತ್ತಿಗೆ ಯತ್ನ : ಹೆದ್ದಾರಿ ತಡೆದು ಪ್ರತಿಭಟನೆ*

ಮಾರ್ಚ್ 13, 2026

*ಬಸವಣ್ಣ ಹಾಗೂ ಅಕ್ಕಮಹಾದೇವಿ ಕುರಿತು ಅವಹೇಳನ : ಕಿಡಿಗೇಡಿಯ ಬಂಧನಕ್ಕೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಆಗ್ರಹ*

ಮಾರ್ಚ್ 13, 2026

*ಕಾಡಾನೆ ದಾಳಿ : ಸರಕಾರದ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ : ತೇಲಪಂಡ ಶಿವಕುಮಾರ್ ನಾಣಯ್ಯ ಅಸಮಾಧಾನ*

ಮಾರ್ಚ್ 13, 2026

*ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.