
ಮಡಿಕೇರಿ NEWS DESK ಮಾ.15 : ಇದೇ ಮಾಚ್೯ 16 ರಂದು ಸೋಮವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮಡಿಕೇರಿಯ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಸುಂಟಿಕೊಪ್ಪದ ಸ್ವಸ್ಥ ವಿಶೇಷ ಶಿಕ್ಷಣ ಮತ್ತು ಪುನರ್ವಸತಿ ಕೇಂದ್ರದ ವತಿಯಿಂದ ಇದೇ ಮೊದಲ ಬಾರಿಗೆ ಕೊಡಗಿನಲ್ಲಿ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ ಆಯೋಜಿತವಾಗಿದೆ. ಕ್ರೀಡಾಕೂಟದಲ್ಲಿ 150 ವಿಶೇಷ ಕ್ರೀಡಾಥಿ೯ಗಳು ಪಾಲ್ಗೊಳ್ಳಲಿದ್ದಾರೆ ಎಂದು ಸುಂಟಿಕೊಪ್ಪದ ಸ್ವಸ್ಥ ವಿಶೇಷ ಶಿಕ್ಷಣ ಮತ್ತು ಪುನರ್ವಸತಿ ಕೇಂದ್ರದ ನಿರ್ದೇಶಕರಾದ ಆರತಿ ಸೋಮಯ್ಯ ತಿಳಿಸಿದ್ದಾರೆ.








