
ಕುಶಾಲನಗರ NEWS DESK ಮಾ.17 : ಕುಶಾಲನಗರದ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ಕಾರ್ಯವೈಖರಿಯನ್ನು ಮೆಚ್ಚಿ ಕುಶಾಲನಗರದ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯು ಗೋಡೆ ಗಡಿಯಾರವನ್ನು ಕೊಡುಗೆಯಾಗಿ ನೀಡಿದೆ. ವ್ಯವಸ್ಥಾಪಕ ರಾಮರಾವ್ ಅವರು ಚೇಂಬರ್ ಕಚೇರಿಯಲ್ಲಿ ಚೇಂಬರ್ ಅಧ್ಯಕ್ಷ ಕೆ.ಎಸ್.ನಾಗೇಶ್ ಹಾಗೂ ಪದಾಧಿಕಾರಿಗಳಿಗೆ ಗಡಿಯಾರವನ್ನು ಹಸ್ತಾಂತರಿಸಿದರು. ನಂತರ ಮಾತನಾಡಿದ ಅವರು ಕುಶಾಲನಗರದ ಚೇಂಬರ್ ಆಫ್ ಕಾಮರ್ಸ್ ಸದಾ ಉತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವರ್ತಕರ ಪರವಾಗಿ ಕಾರ್ಯನಿರ್ವಹಿಸುತ್ತಿರುವುದನ್ನು ನಾವು ಗಮನಿಸಿದ್ದೇವೆ. ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಸೇವೆಯನ್ನು ಮಾಡಲು ಒಳ್ಳೆಯ ಸಮಯ ಬರಲಿ ಎಂದು ಗಡಿಯಾರ ನೀಡಿದ್ದೇವೆ ಎಂದರು. ಗಡಿಯಾರ ಸ್ವೀಕರಿಸಿ ಮಾತನಾಡಿದ ಕೆ.ಎಸ್.ನಾಗೇಶ್, ಇಂತಹ ವಿಶಾಲ ಹೃದಯದ ದಾನಿಗಳಿಂದ ಸೇವೆ ಮಾಡುವ ಸ್ಫೂರ್ತಿ ಹೆಚ್ಚಾಗುತ್ತದೆ ಎಂದು ಕೃತಜ್ಞತೆ ಸಲ್ಲಿಸಿದರು. ಚೇಂಬರ್ ಆಫ್ ಕಾಮರ್ಸ್ ನ ಕಾರ್ಯದರ್ಶಿ ಚಿತ್ರ ರಮೇಶ್, ಪದಾಧಿಕಾರಿಗಳಾದ ಎಸ್.ಕೆ.ಸತೀಶ್, ಪಿ.ಎಂ.ಮೋಹನ್, ವಿಮಲ್ ಜೈನ್, ಪೈಯಾಜ್ ಅಹಮದ್ ಮತ್ತಿತ್ತರು ಹಾಜರಿದ್ದರು.








