

ಮಡಿಕೇರಿ NEWS DESK ಮಾ.17 : ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್ (ರಿ) ಜಾನಪದ ಸಂಭ್ರಮ-2026 ‘ರತ್ನ ಶ್ರೀ’ ರಾಜ್ಯಮಟ್ಟದ ಪ್ರಶಸ್ತಿಗೆ ಕೂರ್ಗ್ ಬ್ಲಡ್ ಫೌಂಡೇಶನ್ ಕರ್ನಾಟಕ (ರಿ) ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ *ಸಮೀರ್ ಎಂ* ಮಡಿಕೇರಿ ಆಯ್ಕೆಯಾಗಿದ್ದಾರೆ. ರಕ್ತದ ವ್ಯವಸ್ಥೆ ಮಾಡುವುದು ಹಾಗೂ ಹಲವಾರು ಕ್ಷೇತ್ರದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಸಮೀರ್ ಅವರಿಗೆ 22-3- 2026 ರಂದು ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.









