Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಏ.2 ರಂದು ಸೋಮವಾರಪೇಟೆ ತಾ.ಪಂ.ಕೆಡಿಪಿ ಸಭೆ*
  • *ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*
  • *ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*
  • *ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*
  • *ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*
  • *ಕೋಟ್ಪಾ ಕಾಯ್ದೆ ಉಲ್ಲಂಘನೆ : 1800 ರೂ.ದಂಡ*
  • *ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ*
  • *ಅಡುಗೆ ಅನಿಲದ ಕೊರತೆ : ಕೇಂದ್ರ ವಿರುದ್ಧ ಕುಶಾಲನಗರದಲ್ಲಿ ಪ್ರತಿಭಟನೆ*
  • *ಕನ್ನಡ ಸಾಹಿತ್ಯ ಸುದೀರ್ಘವಾದ ಕಾಲದಿಂದ ಜೀವಂತಿಕೆ ಉಳಿಸಿಕೊಂಡು ಬೆಳೆಯುತ್ತಿರುವ ಸಾಹಿತ್ಯ : ಪ್ರೊ.ಡಿ.ಕೆ.ಸರಸ್ವತಿ*
  • *ಸೋಮವಾರಪೇಟೆ : ಹೋಟೆಲ್ ಹಾಗೂ ಬೇಕರಿಗಳಿಗೆ ಆಹಾರ ನಿರೀಕ್ಷಕರ ಭೇಟಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕನ್ನಡ ಸಾಹಿತ್ಯ ಸುದೀರ್ಘವಾದ ಕಾಲದಿಂದ ಜೀವಂತಿಕೆ ಉಳಿಸಿಕೊಂಡು ಬೆಳೆಯುತ್ತಿರುವ ಸಾಹಿತ್ಯ : ಪ್ರೊ.ಡಿ.ಕೆ.ಸರಸ್ವತಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕನ್ನಡ ಸಾಹಿತ್ಯ ಸುದೀರ್ಘವಾದ ಕಾಲದಿಂದ ಜೀವಂತಿಕೆ ಉಳಿಸಿಕೊಂಡು ಬೆಳೆಯುತ್ತಿರುವ ಸಾಹಿತ್ಯ : ಪ್ರೊ.ಡಿ.ಕೆ.ಸರಸ್ವತಿ*

ಮಾರ್ಚ್ 17, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.17 NEWS DESK : ದತ್ತಿ ಉಪನ್ಯಾಸಗಳು ಕನ್ನಡ ಸಾಹಿತ್ಯದ ಶ್ರೀಮಂತಿಕೆಯನ್ನು ಪರಿಚಯಿಸುವುದರೊಂದಿಗೆ ಹೊಸ ವಿಚಾರಗಳನ್ನು ತಿಳಿಸಿ ಕನ್ನಡ ತನವನ್ನು ಬೆಳೆಸುವ ಕಾರ್ಯ ಮಾಡುತ್ತದೆ ಎಂದು ಸ.ಪ್ರ.ದ ಕಾಲೇಜಿನ ಪ್ರಾಂಶುಪಾಲೆ ಪ್ರೊ.ಡಿ.ಕೆ.ಸರಸ್ವತಿ ಅಭಿಪ್ರಾಯ ವ್ಯಕ್ತಪಡಿಸಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು  ಸಂಯುಕ್ತ ಆಶ್ರಯದಲ್ಲಿ  ಕಾಲೇಜಿನಲ್ಲಿ ಆಯೋಜಿಸಲಾಗಿದ್ದ  ದಿ.ಸಾಹಿತಿ ಮುಲ್ಲೇಂಗಡ ಬೇಬಿ ಚೋಂದಮ್ಮ ಹಾಗೂ ಮಂಡೇಪಂಡ ಅಕ್ಕಮ್ಮ ಗಣಪತಿ ಸ್ಮರಣಾರ್ಥ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕನ್ನಡ ಭಾಷೆಯು ಇಂದು ಜಾತಿ, ಧರ್ಮ ಹಾಗೂ ಗಡಿಯನ್ನು ಮೀರಿ ಬೆಳೆದಿದೆ. ಇದಕ್ಕೆ ಒಂದು ಮುಖ್ಯ ಕಾರಣವೆಂದರೆ ಕನ್ನಡ ಸಾಹಿತ್ಯ ಪರಿಷತ್ತು. ತನ್ಮೂಲಕ ಕನ್ನಡ ನಾಡು, ನುಡಿ, ಸಂಸ್ಕೃತಿ, ಕಲೆ, ಸಾಹಿತ್ಯವನ್ನು ನಿರಂತರವಾಗಿ ಪೋಷಿಸುತ್ತ ವಿವಿಧ ಕಾರ್ಯಕ್ರಮ ಮೂಲಕ ಮುಂದಿನ ತಲೆಮಾರಿಗೆ ಕನ್ನಡದ ಶ್ರೇಷ್ಠತೆಯನ್ನು ಪರಿಚಿಸುವಂತಹ ಕೆಲಸವನ್ನು ಮಾಡುತ್ತಿದೆ . ಕನ್ನಡ ಭಾಷೆ ಮತ್ತು ಸಾಹಿತ್ಯದ ಬಗ್ಗೆ ಹೇಳುವುದಾದರೆ 10ನೇ ಶತಮಾನದಿಂದ ಹಿಡಿದು ಇಂದಿನವರೆಗೂ ಕನ್ನಡ ಸಾಹಿತ್ಯವೆಂಬುದು ಸುಧೀರ್ಘವಾಗಿ ಜೀವಂತಿಕೆಯನ್ನು ಉಳಿಸಿಕೊಂಡು ಬೆಳವಣಿಗೆಯನ್ನು ಕಾಣುತ್ತಾ ಬಂದಿದೆ. ಅದರಲ್ಲಿಯೂ ಹಳೆಯ ಸಾಹಿತ್ಯಗಳಲ್ಲಿ ಕನ್ನಡ ನಾಡು, ನುಡಿ, ಸಂಸ್ಕೃತಿ, ಕನ್ನಡಿಗರ ಶೌರ್ಯ, ಗುಣ ಮುಂತಾದವುಗಳ ವರ್ಣನೆ ಹೆಮ್ಮೆ ತರುವಂತಹದ್ದು. ಕನ್ನಡ ಸಾಹಿತ್ಯ ಸಮ್ಮೇಳನಗಳು, ಕವಿಗೋಷ್ಠಿ ಹಾಗೂ ಇನ್ನಿತರ ಕಾರ್ಯಕ್ರಮಗಳು ನಡೆದು ಕನ್ನಡ ಭಾಷೆಯು ಇನ್ನೂ ಬೆಳವಣಿಗೆಯನ್ನು ಕಾಣುವುದರೊಂದಿಗೆ ಕನ್ನಡ ಭಾಷೆಯು ತನ್ನ ಅಸ್ಮಿತೆಯನ್ನು ಕನ್ನಡಿಗರಿಗೆ ತೋರಿಸಲಿ ಎಂದರು. ಕೊಡಗಿನ ಮಹಿಳಾ ಸಾಹಿತಿಗಳು ಎಂಬ ವಿಷಯದ ಕುರಿತು ಉಪನ್ಯಾಸವನ್ನು ನೀಡಿದ ನಿವೃತ್ತ ಶಿಕ್ಷಕಿ ಹೆಚ್.ಜಿ.ಸಾವಿತ್ರಿ ಕೊಡಗಿನಲ್ಲಿ ಕೊಡಗಿನ ಗೌರಮ್ಮನಿಂದ ಹಿಡಿದು ಇಂದಿನವರೆಗೂ ಕೃತಿಗಳನ್ನು ರಚಿಸಿದಂತಹ ಪ್ರಮುಖ ಕವಿಯತ್ರಿಗಳು ಹಾಗೂ ಅವರಿಂದ ರಚಿಸಲ್ಪಟ್ಟ ಕೃತಿಗಳನ್ನು ಪರಿಚಯಿಸುವುದರೊಂದಿಗೆ ಮಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಮಟ್ಟದಲ್ಲಿ ಮಹಿಳೆಯರಿಂದ ಸಾಹಿತ್ಯ ಕೃತಿಗಳು ರಚನೆಯಾಗಲಿ ಎಂದು ಆಶಿಸಿದರು. ವಿರಾಜಪೇಟೆ ಕಾವೇರಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಬಿ.ಬಿ.ಸುನಿಲ್ ಕುಮಾರ್ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ನವರ ಜೀವನ ಸಾಧನೆ ಎಂಬ ವಿಷಯದ ಕುರಿತು ಉಪನ್ಯಾಸವನ್ನು ನೀಡಿದರು. ಕೊಡಗು ಜಿಲ್ಲಾ ಸಾಹಿತ್ಯ ಪರಿಷತ್ ನ ಅಧ್ಯಕ್ಷರಾದ ಎಂ.ಪಿ.ಕೇಶವ ಕಾಮತ್  ಅವರು ಮಾತನಾಡಿ, ವಿದ್ಯಾರ್ಥಿಗಳು ಬಾಲ್ಯದಿಂದಲೇ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಪುಸ್ತಕಗಳು, ವೃತ್ತ ಪತ್ರಿಕೆಗಳನ್ನು ಓದುವುದರಿಂದ ಹೊಸ ವಿಚಾರಗಳನ್ನು ತಿಳಿದುಕೊಳ್ಳಲು ಸಾಧ್ಯ. ಯಾವುದೇ ಕಾರ್ಯಕ್ರಮ , ಸ್ಪರ್ಧೆಯಾದರು ಅದರಲ್ಲಿ ಭಾಗವಹಿಸುವ ಗುಣವನ್ನು ಬೆಳೆಸಿಕೊಳ್ಳಬೇಕು. ಇಂದು ಸೋತರೆ ನಾಳೆ ಗೆಲ್ಲುವ ಛಲ ಬೆಳೆಯುತ್ತದೆ. ವಿದ್ಯಾರ್ಥಿಗಳ ತಮ್ಮ ಪ್ರತಿಭೆ ಅನಾವರಣಕ್ಕೆ ಸಿಗುವ ಪ್ರತಿಯೊಂದು ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದರು. ಕಾರ್ಯಕ್ರಮವನ್ನು ಉದ್ದೇಶಿಸಿ ದತ್ತಿದಾನಿ ಮುಲ್ಲೇಂಗಡ ಮಧೂಶ್ ಪೂವಯ್ಯ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಿ.ರಾಜೇಶ್ ಪದ್ಮನಾಭ ಅಧ್ಯಕ್ಷೀಯ ನುಡಿಗಳನ್ನಾಡಿದರು. ವೇದಿಕೆ ಕಾರ್ಯಕ್ರಮದ ನಂತರ ಕನ್ನಡ ವಿಷಯದಲ್ಲಿ 100ಕ್ಕೆ 100 ಹಾಗೂ ಅಧಿಕ ಅಂಕ ಪಡೆದ ಪದವಿ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಬಹುಮಾನ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ವೇದಿಕೆಯ ಮೇಲೆ ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನ ಗೌ.ಕೋಶಾಧಿಕಾರಿ ಶಬರೀಶ್ ಶೆಟ್ಟಿ, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಸಹ ಕಾರ್ಯದರ್ಶಿ ಮಂಜುನಾಥ್ ಕನ್ನಡ ಉಪನ್ಯಾಸಕರದ ಕೆ. ಹರಿಣಿ , ಹರೀಶ್ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು .


 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಏ.2 ರಂದು ಸೋಮವಾರಪೇಟೆ ತಾ.ಪಂ.ಕೆಡಿಪಿ ಸಭೆ*

ಮಾರ್ಚ್ 17, 2026

*ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*

ಮಾರ್ಚ್ 17, 2026

*ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*

ಮಾರ್ಚ್ 17, 2026

*ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*

ಮಾರ್ಚ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮಾ.17 NEWS DESK : ವಿರಾಜಪೇಟೆ ಸಮೀಪದ ಪ್ರಕೃತಿಯ ಸೊಬಗಿನ ನಡುವೆ ‘ಮಳೆ ದೇವರು’ಎಂದು ಹೆಸರುವಾಸಿಯಾಗಿರುವ ಮಲೆ ಮಹದೇಶ್ವರ…

*ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*

ಮಾರ್ಚ್ 17, 2026

*ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*

ಮಾರ್ಚ್ 17, 2026

*ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ಕೋಟ್ಪಾ ಕಾಯ್ದೆ ಉಲ್ಲಂಘನೆ : 1800 ರೂ.ದಂಡ*

ಮಾರ್ಚ್ 17, 2026

*ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ಅಡುಗೆ ಅನಿಲದ ಕೊರತೆ : ಕೇಂದ್ರ ವಿರುದ್ಧ ಕುಶಾಲನಗರದಲ್ಲಿ ಪ್ರತಿಭಟನೆ*

ಮಾರ್ಚ್ 17, 2026

*ಕನ್ನಡ ಸಾಹಿತ್ಯ ಸುದೀರ್ಘವಾದ ಕಾಲದಿಂದ ಜೀವಂತಿಕೆ ಉಳಿಸಿಕೊಂಡು ಬೆಳೆಯುತ್ತಿರುವ ಸಾಹಿತ್ಯ : ಪ್ರೊ.ಡಿ.ಕೆ.ಸರಸ್ವತಿ*

ಮಾರ್ಚ್ 17, 2026

*ಸೋಮವಾರಪೇಟೆ : ಹೋಟೆಲ್ ಹಾಗೂ ಬೇಕರಿಗಳಿಗೆ ಆಹಾರ ನಿರೀಕ್ಷಕರ ಭೇಟಿ*

ಮಾರ್ಚ್ 17, 2026

*ಶ್ರೀ ಚೈತನ್ಯ ಮಠಪುರ ಮುತ್ತಪ್ಪ ದೇವಸ್ಥಾನಕ್ಕೆ ಬೃಹತ್ ಗಾತ್ರದ ಸ್ಟೀಲ್ ಪಾತ್ರೆಯ ಕೊಡುಗೆ*

ಮಾರ್ಚ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.