
ಮಡಿಕೇರಿ ಮಾ.17 NEWS DESK : ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಪುರುಷ ಹಾಗೂ ಮಹಿಳೆಯರಿಗೆ 12 ದಿನಗಳ ಅವಧಿಯ ಉಚಿತ ಫಾಸ್ಟ್ ಫುಡ್ (ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿ ಶಿಬಿರವನ್ನು ಏಪ್ರಿಲ್ 4 ರಿಂದ ಪ್ರಾರಂಭಿಸಲಾಗುತ್ತಿದೆ. ಈ ಶಿಬಿರದಲ್ಲಿ ಪಾನಿ ಪೂರಿ, ಬೇಲ್ ಪೂರಿ, ದಹಿ ಪೂರಿ, ಸೇವ್ ಪೂರಿ, ಚಾಟ್ ಮಸಾಲ, ಕಚೋರಿ, ಗೋಬಿ ಮಂಚೂರಿ, ಪ್ರೈಡ್ ರೈಸ್, ಸಮೋಸ ಇನ್ನಿತರೆ ಚಾಟ್ಸ್‍ಗಳ ತಯಾರಿಕೆಯ ಬಗ್ಗೆ ತರಬೇತಿ ನೀಡಲಾಗುವುದು.
ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 49 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷ ಹಾಗೂ ಮಹಿಳೆಯರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾμÉ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು. ಆಸಕ್ತಿಯುಳ್ಳ ಶಿಬಿರಾರ್ಥಿಗಳು ಮಾರ್ಚ್, 27 ರ ಬೆಳಗ್ಗೆ 9.30 ಗಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ತರಬೇತಿಗೆ ವಿದ್ಯಾರ್ಹತೆಗಳೊಂದಿಗೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗಬೇಕಾಗಿ ಸೂಚಿಸಲಾಗಿದೆ. ಸಂದರ್ಶನಕ್ಕೆ ಹಾಜರಾಗಲು ಅಸಾಧ್ಯವಾದಲ್ಲಿ ಮಾರ್ಚ್, 27 ರೊಳಗೆ ಸಂಸ್ಥೆಯನ್ನು ದೂರವಾಣಿ ಸಂಖ್ಯೆ 8970476050, 9591514754, 6363139123, 9686248369, 9505894247 ಗಳಿಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.








