ಕೊಡಗು ಜಿಲ್ಲೆಯಲ್ಲಿನ ಮಾನವ ವನ್ಯಜೀವಿ ಸಂಘರ್ಷ ಕುರಿತು ಅರಣ್ಯ ಜೀವಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ ಖಂಡ್ರೆ ರವರ ನೇತೃತ್ವದಲ್ಲಿ ಇಲಾಖಾ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆಯಿತು. ಈ ಸಭೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕೊಡಗು ಜಿಲ್ಲೆಯಲ್ಲಿ ಆನೆದಾಳಿ ಹಾಗೂ ವನ್ಯ ಜೀವಿಗಳಿಂದ ಸ್ಥಳೀಯ ನಿವಾಸಿಗಳು ಬಲಿಯಾದ ವಿಚಾರದ ಬಗ್ಗೆ ಗಂಭೀರ ಚರ್ಚೆ ನಡೆಸಲಾಯಿತು. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು. ಈ ಸಭೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್ ಪೊನ್ನಣ್ಣ, ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.








