ಸೋಮವಾರಪೇಟೆ, NEWS DESK ಮಾ.18 : ಜಮೀನು ತೆರವು ಕಾರ್ಯಾಚರಣೆ ಸಂದರ್ಭ ಅರಣ್ಯಾಧಿಕಾರಿಗಳು ಹಾಗೂ ರೈತರ ನಡುವೆ ಮಾತಿನ ಚಕಮಕಿ ನಡೆದ ಘಟನೆ ಇಂದು ಮಸಗೊಡು ಗ್ರಾಮದಲ್ಲಿ ನಡೆದಿದೆ.
ಮಸಗೋಡು ಗ್ರಾಮದಲ್ಲಿ 2.50 ಎಕರೆ ಜಾಗವನ್ನು ಅರಣ್ಯ ಇಲಾಖೆಯವರು ಜೆಸಿಬಿಯಿಂದ ತೆರವುಗೊಳಿಸಲು ಯತ್ನಿಸಿದಾಗ ರೈತ ಹೋರಾಟ ಸಮಿತಿ ಹಾಗೂ ರೈತ ಸಂಘದ ಪದಾಧಿಕಾರಿಗಳು ಸ್ಥಳಕ್ಕೆ ಧಾವಿಸಿ ಅರಣ್ಯ ಇಲಾಖೆಯವರಿಗೆ ಘೇರಾವು ಹಾಕಿದರು.

ರೈತರ ಪ್ರತಿಭಟನೆಗೆ ಮಣಿದ ಅರಣ್ಯ ಇಲಾಖೆ ತೆರವು ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತು.
ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಬರುವವರೆಗೂ ಕದಲುವುದಿಲ್ಲವೆಂದು ರೈತರು ಸ್ಥಳದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.







