
ಸೋಮವಾರಪೇಟೆ ಮಾ.18 NEWS DESK : ಕಾರ್ಮಿಕ ಇಲಾಖಾ ವತಿಯಿಂದ ಕೊಡಗು ಜಿಲ್ಲೆಯಲ್ಲಿ ನೊಂದಾಯಿತ ಕಟ್ಟಡ ಕಾರ್ಮಿಕರಿಗಾಗಿ ಪೂರ್ವಭಾವಿ ಕಲಿಕಾ ಗುರುತಿಸುವಿಕೆ ತರಬೇತಿ ಕಾರ್ಯಾಗಾರ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಅರ್ಹ ಫಲಾನುಭವಿಗಳನ್ನು ಗುರುತಿಸಿ, ಕೆಲಸದ ಸ್ಥಳಗಳಲ್ಲಿ ಪಾಲಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ಸುರಕ್ಷತಾ ನಿಯಮಗಳ ಬಗ್ಗೆ ತರಬೇತುದಾರರಾದ ಕಾರ್ತಿಕ್, ದರ್ಶನ್ ಮತ್ತು ಪ್ರದೀಪ್ ಅವರು ಮಾಹಿತಿ ನೀಡಿದರು. ಜೊತೆಗೆ ಕಾರ್ಮಿಕ ಇಲಾಖೆಯ ವಿವಿಧ ಯೋಜನೆಗಳು ಮತ್ತು ಸೌಲಭ್ಯಗಳ ಕುರಿತು ಅರಿವು ಮೂಡಿಸಲಾಯಿತು. ಈ ಸಂದರ್ಭ ಕಾರ್ಮಿಕರಿಗೆ ಸುರಕ್ಷತಾ ಕಿಟ್‍ಗಳನ್ನು ವಿತರಿಸಲಾಯಿತು. ಹಿರಿಯ ಕಾರ್ಮಿಕ ನಿರೀಕ್ಷಕರಾದ ಎಸ್. ಶಶಿಧರ್ ಅವರು ಮಾತನಾಡಿ, ನೈಜ ಅರ್ಹ ಕಟ್ಟಡ ಕಾರ್ಮಿಕರು ಕಡ್ಡಾಯವಾಗಿ ನೋಂದಣಿ ಮಾಡಿಕೊಂಡು ಮಂಡಳಿಯ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಚೇರಿಯ ಎಕ್ಸಿಕ್ಯೂಟಿವ್ ಪ್ರಸನ್ನ, ಕಚೇರಿ ಸಿಬ್ಬಂದಿ ವಾಣಿ ಹಾಗೂ ಸೋಮವಾರಪೇಟೆ ತಾಲ್ಲೂಕು ಕಾರ್ಮಿಕ ಇಲಾಖೆಯ ಸಿಬ್ಬಂದಿಗಳು ಭಾಗವಹಿಸಿದ್ದರು.









