
ಕುಶಾಲನಗರ, ಮಾ.23 NEWS DESK : ಕರ್ನಾಟಕ ಸರ್ಕಾರದ ಸಮಗ್ರ ಶಿಕ್ಷಣ – ಕರ್ನಾಟಕದ ರಾಜ್ಯ ನಿರ್ದೇಶನಾಲಯದ ನಿರ್ದೇಶನದಂತೆ ರಾಜ್ಯದ 34 ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್) ಗಳಲ್ಲಿ ಜಿಲ್ಲಾ ವೃತ್ತಿಪರ ಶಿಕ್ಷಣ ಹಾಗೂ ವೃತ್ತಿ ಮಾರ್ಗದರ್ಶನ (ಕೆರಿಯರ್) ಘಟಕವನ್ನು ಸ್ಥಾಪಿಸಲಾಗುತ್ತಿದೆ ಎಂದು ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್) ಯ ಪ್ರಾಂಶುಪಾಲರು ಆದ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಪದನಿಮಿತ್ತ ಉಪನಿರ್ದೇಶಕರು(ಅಭಿವೃದ್ದಿ) ರಾಮಚಂದ್ರ ರಾಜೇ ಅರಸ್ ತಿಳಿಸಿದರು. ಕೂಡಿಗೆ ಡಯಟ್ ಸಂಸ್ಥೆಯಲ್ಲಿ ಜಿಲ್ಲಾ ವೃತ್ತಿಪರ ಶಿಕ್ಷಣ ಹಾಗೂ ವೃತ್ತಿ ಮಾರ್ಗದರ್ಶನ ಘಟಕವನ್ನು ಆರಂಭಿಸಲಾಗುತ್ತಿದ್ದು ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ವಿದ್ಯಾರ್ಥಿಗಳಿಗೆ ಅವರ ಆಸಕ್ತಿ ಮತ್ತು ಸಾಮರ್ಥ್ಯಕ್ಕೆ ಅನುಗುಣವಾಗಿ ಮುಂದಿನ ವೃತ್ತಿ ಜೀವನದ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡಲು ಇದೇ ಮಾರ್ಚ್ 27 ರಂದು ಬೆಳಗ್ಗೆ 10.00 ಗಂಟೆಯಿಂದ ಕೂಡಿಗೆ ಸಂಸ್ಥೆಯ ಆವರಣದಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ ಹಾಗೂ ವೃತ್ತಿ ಮಾರ್ಗದರ್ಶನ (ಕೆರಿಯರ್)ಮೇಳವನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದರು.
ಕೂಡಿಗೆ ಡಯಟ್ ನಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ ಹಾಗೂ ವೃತ್ತಿ ಮಾರ್ಗದರ್ಶನ (ಕೆರಿಯರ್)ಮೇಳದ ಪ್ರಚಾರ ಸಾಮಾಗ್ರಿ ಹಾಗೂ ಮಾಹಿತಿ ಪತ್ರ ಬಿಡುಗಡೆಗೊಳಿಸಿದ ನಂತರ ನಡೆಸಿದ ಪತ್ರಿಕಾ ಗೊಷ್ಠಿಯಲ್ಲಿ ಶಿಕ್ಷಣ ಪ್ರದರ್ಶನ ಹಾಗೂ ವೃತ್ತಿ ಮಾರ್ಗದರ್ಶನ (ಕೆರಿಯರ್)ಮೇಳದ ಪ್ರಕಟನೆ ಹಾಗೂ ರೂಪುರೇಷೆ ಕುರಿತು ಮಾಹಿತಿ ನೀಡಿದರು. ವಿದ್ಯಾರ್ಥಿಗಳಿಗೆ ಮುಂದಿನ ಶಿಕ್ಷಣ ಹಾಗೂ ವೃತ್ತಿ ಆಯ್ಕೆ ಕುರಿತು ಸಮಗ್ರ ಮಾಹಿತಿಯನ್ನು ಒದಗಿಸುವ ಉದ್ದೇಶದಿಂದ ಕೂಡಿಗೆ ಜಿಲ್ಲಾ ಮತ್ತು ತರಬೇತಿ ಸಂಸ್ಥೆ(ಡಯಟ್) ಜಿಲ್ಲಾ ಮಟ್ಟದ ವೃತ್ತಿ ದಿಕ್ಸೂಚಿ, ವೃತ್ತಿ ಶಿಕ್ಷಣ ಪ್ರದರ್ಶನ ಮತ್ತು ವೃತ್ತಿ ಮಾರ್ಗದರ್ಶನ ಕೆರಿಯರ್ ಮೇಳ 2026 ವನ್ನು ಮಾರ್ಚ್ 27 ರಂದು( ಶುಕ್ರವಾರ ) ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ ಏರ್ಪಡಿಸಲಾಗಿದೆ. ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕರ ಕಛೇರಿಯಿಂದ ನೀಡಿರುವ ಸುತ್ತೋಲೆ ಅನ್ವಯ ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿಪರ ಮತ್ತು ವೃತ್ತಿ ಮಾರ್ಗದರ್ಶನ ಘಟಕ ಸ್ಥಾಪಿಸಲಾಗುತ್ತಿದ್ದು ಈ ಘಟಕದ ಮೂಲಕ ವಿದ್ಯಾರ್ಥಿಗಳಿಗೆ ನಿರಂತರವಾಗಿ ವೃತ್ತಿ ಮಾರ್ಗದರ್ಶನ ನೀಡಲಾಗುವುದು ಎಂದು ಪ್ರಾಂಶುಪಾಲರು ರಾಮಚಂದ್ರ ರಾಜೇ ಅರಸ್ ತಿಳಿಸಿದರು. ಈ ವೃತ್ತಿ ಮಾರ್ಗದರ್ಶನ ಮೇಳದಲ್ಲಿ 10 ನೇ ತರಗತಿ ಮತ್ತು 12 ನೇ ತರಗತಿ ನಂತರದ ಶಿಕ್ಷಣ ಮಾರ್ಗಗಳು, ಜೊತೆಗೆ ಸಿ.ಇ.ಟಿ, ನೀಟ್, ಜೆ.ಇ.ಇ. ಪರೀಕ್ಷೆ ಮುಂತಾದ ಕೋರ್ಸ್ಗಳ ಪ್ರವೇಶ ಪರೀಕ್ಷೆಗಳ ಕುರಿತು ಮಾಹಿತಿ ಹಾಗೂ ಮಾರ್ಗದರ್ಶನ ನೀಡಲಾಗುತ್ತದೆ. ಜಿಲ್ಲೆಯ ವಿವಿಧ ಸರ್ಕಾರಿ ಇಲಾಖೆಗಳು, ಬ್ಯಾಂಕ್ ಗಳು ಮತ್ತು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳ ಮಳಿಗೆ (ಸ್ಟಾಲ್)ಗಳನ್ನು ಸ್ಥಾಪಿಸಿ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಉನ್ನತ ಶಿಕ್ಷಣ ಮತ್ತು ವೃತ್ತಿ ಸಂಬಂಧಿಸಿದ ಮಾಹಿತಿಯನ್ನು ಒದಗಿಸಲಾಗುತ್ತದೆ ಎಂದು ತಿಳಿಸಿದರು.
ಈ ಮೇಳದಲ್ಲಿ ಆಸುಪಾಸಿನ ಹಲವಾರು ಸರ್ಕಾರಿ ಹಾಗೂ ಖಾಸಗಿ ವೃತ್ತಿ ಶಿಕ್ಷಣ ಕಾಲೇಜುಗಳು ಮತ್ತು ಸರ್ಕಾರಿ ವಿವಿಧ ಇಲಾಖೆಗಳು ಹಾಗೂ ಬ್ಯಾಂಕ್ ಗಳು ಭಾಗವಹಿಸಲಿದ್ದು ತಜ್ಞರಿಂದ ವಿದ್ಯಾರ್ಥಿಗಳಿಗೆ ಮುಂದಿನ ಭವಿಷ್ಯದ ಬಗ್ಗೆ ಸೂಕ್ತ ತಿಳುವಳಿಕೆ ಮತ್ತು ವಿವಿಧ ಇಲಾಖೆಗಳ ವಿದ್ಯಾರ್ಥಿವೇತನ ಬ್ಯಾಂಕ್ ಗಳಿಂದ ಲಭ್ಯವಾಗುವ ಶಿಕ್ಷಣ ಸಾಲ ಸೌಲಭ್ಯಗಳು ಇತ್ಯಾದಿ ಮಾಹಿತಿ ಬಗ್ಗೆ ಸಂಪೂರ್ಣ ವಿವರ ಲಭ್ಯವಾಗುದರ ಜೊತೆಗೆ ವಿದ್ಯಾರ್ಥಿಗಳಿಗೆ ಈ ಕುರಿತ ತರಬೇತಿಗಳು ಲಭ್ಯವಾಗಲಿವೆ ಎಂದು ಪ್ರಾಂಶುಪಾಲರು ರಾಮಚಂದ್ರ ರಾಜೇ ಅರಸ್ ವಿವರಿಸಿದರು. 9 ರಿಂದ 12 ನೇ ತರಗತಿ ವರೆಗೆ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಸೇರಿದಂತೆ ವೃತ್ತಿಪರ ಕೋಸ್ ðಗಳ ವಿದ್ಯಾರ್ಥಿಗಳು, ಅವರ ಪೋಷಕರು, ಮಹಿಳೆಯರು ಹಾಗೂ ಸಾರ್ವಜನಿಕರು ಈ ವೃತ್ತಿ ಮೇಳಕ್ಕೆ ಆಗಮಿಸಿ ಇದರ ಪ್ರಯೋಜನ ಪಡೆಯಲು ಕೋರಲಾಗಿದೆ. ಈ ವೃತ್ತಿ ಮೇಳದಲ್ಲಿ ಭಾಗವಹಿಸುವವರಿಗೆ ಮಧ್ಯಾಹ್ನದ ಉಪಹಾರದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಪ್ರಾಂಶುಪಾಲರು ರಾಮಚಂದ್ರ ರಾಜೇ ಅರಸ್ ತಿಳಿಸಿದರು. ವೃತ್ತಿಮೇಳದಲ್ಲಿ ಜಿಲ್ಲಾ ನೋಡಲ್ ಬ್ಯಾಂಕ್ ನ ನಿವೃತ್ತ ಮೆನೇಜರ್
ಆರ್ ಕೆ.ಬಾಲಚಂದ್ರ, ಡಾ ಎನ್.ಎಸ್.ಸತೀಶ್,ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ರೇಖಾ ಗಣಪತಿ, ಕುಶಾಲನಗರ ಡಿಪ್ಲೋಮ ಕಾಲೇಜಿನ ಪ್ರೆಸ್ ಮೆಂಟ್ ಅಧಿಕಾರಿ ಪ್ರಸನ್ನ, ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ್ , ಮಡಿಕೇರಿ ಐಟಿಐ ಕಾಲೇಜಿನ ತರಬೇತಿ ಅಧಿಕಾರಿ ಸಿ.ಕೆ.ಇಂದ್ರೇಶ್ ಸೇರಿದಂತೆ ಕೂಡಿಗೆ ಸೈನಿಕ ಶಾಲೆಯ ಅಧಿಕಾರಿಗಳು ಸೇರಿದಂತೆ ಇತರ ಸಂಪನ್ಮೂಲ ವ್ಯಕ್ತಿಗಳಿಂದ ವಿವಿಧ ವಿಷಯಗಳ ಕುರಿತು ಮಾಹಿತಿ ನೀಡಲಾಗುವುದು ಎಂದು ಅರಸ್ ತಿಳಿಸಿದರು. ಸಮಿತಿಯ ಕಾರ್ಯದರ್ಶಿ ಎಚ್.ಎಚ್.ಸತೀಶ್, ಡಿಡಿಪಿಐ ಕಛೇರಿಯ ಉಪ ಯೋಜನಾ ಸಮನ್ವಯಾಧಿಕಾರಿ( ಡಿವೈಪಿಸಿ ) ಸೌಮ್ಯ ಪೊನ್ನಪ್ಪ, ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ್, ಮಡಿಕೇರಿ ಬಿ.ಆರ್.ಸಿ. ,ಎಸ್.ಶರ್ಮಿಳಾ, ಡಯಟ್ ಸಂಸ್ಥೆಯ ಹಿರಿಯ ಉಪನ್ಯಾಸಕಿ ಬಿ.ಎನ್.ಪುಷ್ಪ, ಉಪನ್ಯಾಸಕರಾದ ವಿ.ವಿಜಯ್, ಕೆ.ಎಸ್.ನಳಿನಾಕ್ಷಿ, ಪಿ.ಪಿ.ಗಾಯತ್ರಿ, ಕೂಡ್ಲೂರು ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ಸೋಮವಾರಪೇಟೆ ಸರ್ಕಾರಿ ಪಿಯೂ ಕಾಲೇಜಿನ ಪ್ರಾಂಶುಪಾಲ ಬಿ.ಎಂ.ಬೆಳ್ಳಿಯಪ್ಪ, ಮಡಿಕೇರಿ ಐಟಿಐ ಕಾಲೇಜಿನ ತರಬೇತಿ ಅಧಿಕಾರಿ ಸಿ.ಕೆ.ಇಂದ್ರೇಶ್, ಆಲೂರುಸಿದ್ಧಾಪುರ ಐ.ಟಿ.ಐ.ಕಾಲೇಜಿನ ಜೆ.ಟಿ.ಓ.ಎ.ತೇಜಸ್ವಿನಿ , ಕುಶಾಲನಗರ ಸ್ಕೌಟ್, ಗೈಡ್ಸ್ ಸಂಸ್ಥೆಯ ಕಾರ್ಯದರ್ಶಿ ಎಂ.ಎಸ್.ಗಣೇಶ್ ಇದ್ದರು. ಈ ವೃತ್ತಿ ಮೇಳ ಹಾಗೂ ಮಳಿಗೆಯನ್ನು ತೆರೆಯುವ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಹೆಚ್.ಹೆಚ್.ಸತೀಶ್ (ಮೊ:9449910016: 9449910016) ಹಾಗೂ ವಿ. ವಿಜಯ್ ಉಪನ್ಯಾಸಕರು (ಮೊ:8105360463:
8105360463) ಇವರನ್ನು ಸಂರ್ಪಕಿಸಬಹುದು.









