Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 
  • *ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*
  • *ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಾ.27 ರಂದು ಕೂಡಿಗೆಯಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ, ವೃತ್ತಿ ಮಾರ್ಗದರ್ಶನ*
  • *ಏ.7 ರಿಂದ 30 ರವರೆಗೆ ಬೇಸಿಗೆ ತರಬೇತಿ ಶಿಬಿರ*
  • *ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*
  • *ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*
  • *ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*
  • *ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ*
  • *ಕಾಸ್ಮೋಪಾಲಿಟನ್ ಕ್ಲಬ್ ಅಧ್ಯಕ್ಷರಾಗಿ ರತನ್ ತಮ್ಮಯ್ಯ ಆಯ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*

ಮಾರ್ಚ್ 23, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಮಾ.23 NEWS DESK : ಕೊಡಗು ಕ್ರಿಶ್ಚಿಯನ್ ಅಸೋಸಿಯೇಷನ್ ಸಹಯೋಗದಲ್ಲಿ ಕೂರ್ಗ್ ಕ್ಲಿಫ್ ರೆಸಾರ್ಟ್‍ನಲ್ಲಿ ನಡೆದ ಕ್ಲಿಫ್ ಆಫ್ ಗ್ರೇಸ್ ಎಂಬ ಕಾರ್ಯಕ್ರಮ ನಡೆಯಿತು. ಆರ್ಥಿಕ ಸ್ಥಿತಿಯಲ್ಲಿ ಹಿಂದುಳಿದ ರೋಗಿಗಳಿಗೆ ನಗದು ರೂಪದಲ್ಲಿ ಸಹಾಯ ಮಾಡುವುದು ಹಾಗೂ ಅವಶ್ಯಕತೆ ಇದ್ದವರಿಗೆ ವೈದ್ಯಕೀಯ ಸಲಕರಣೆಗಳನ್ನು ಒದಗಿಸಿಕೊಡುವ ನಿಟ್ಟಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ದಕ್ಷಿಣ ಕೊಡಗಿಗೆ ಸೇರಿದ 15 ಚರ್ಚ್‍ನ ತಲಾ ಒಬ್ಬೊಬ್ಬ ಫಲಾನುಭವಿಗಳಿಗೆ ಮೂರು ಲಕ್ಷ ರೂಪಾಯಿಗಳನ್ನು ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಚೆಪ್ಪುಡಿರ ಅರುಣ್ ಮಾಚಯ್ಯ ಅವರು, ಧರ್ಮ ಯಾವುದೇ ಆಗಿರಲಿ, ದಾನ ಧರ್ಮ ಮಾಡುವ ಮೂಲಕ ಇತರರಿಗೆ ನೆರವಾಗಬೇಕು. ವೈದ್ಯಕೀಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಕ್ರೈಸ್ತ ಮಿಷಿನರಿಗಳ ಸೇವೆ ಅಪಾರ ಎಂದು ನುಡಿದರು. ಕೊಡಗು ಡಿಸಿಸಿ ಹಾಗೂ ಗ್ಯಾರಂಟಿ ಅನುಷ್ಠಾನದ ಅಧ್ಯಕ್ಷರಾದ ಟಿ.ಎಂ.ಧರ್ಮಜ ಉತ್ತಪ್ಪ ಮಾತನಾಡಿ, ಇದು ಇತರರಿಗೆ ಮಾದರಿಯಾಗುವಂತಹ ಕಾರ್ಯಕ್ರಮ ಎಂದ ಅವರು, ತಮ್ಮ ಹೋರಾಟ ಜೀವನವನ್ನು ಹಾಗೂ ಕೈಗೊಂಡ ಯಶಸ್ಸನ್ನು ಸ್ಮರಿಸಿದರು. ಸೆಂಟ್ ಆನ್ಸ್ ಕಾಲೇಜಿನ ಪ್ರಾಂಶುಪಾಲರು ಹಾಗೂ ಅಮ್ಮತಿ ಧರ್ಮ ಕೇಂದ್ರದ ಧರ್ಮ ಗುರುಗಳಾದ ಮದಲೈ ಮುತ್ತು ಮಾತನಾಡಿ, ಈ ತರಹದ ಅನೇಕ ಒಳ್ಳೆಯ ಕಾರ್ಯಕ್ರಮಗಳನ್ನು ಕೊಡಗು ಕ್ರಿಶ್ಚಿಯನ್ ಅಸೋಸಿಯೇಷನ್ ಸಂಘಟನೆ ನಡೆಸುತ್ತಿದ್ದು, ಸಂಘಟನೆ ಮುಂದೆ ಮತ್ತಷ್ಟು ಒಳ್ಳೆಯ ಕಾರ್ಯಕ್ರಮಗಳನ್ನು ನಡೆಸಿಕೊಟ್ಟು ತೀರ ಕಷ್ಟದಲ್ಲಿರುವವರಿಗೆ ನೆರವಾಗಲಿ ಎಂದು ನುಡಿದರು. ಕಾರ್ಯಕ್ರಮದ ರೂವಾರಿಗಳು ಹಾಗೂ ದಾನಿಗಳು ಆದಂತಹ ಕೂರ್ಗ್ ಕ್ಲಿಪ್ ರೆಸಾರ್ಟ್‍ನ ಮಾಲೀಕರಾದ ಟಿ.ಜಾನ್ ಥಾಮಸ್ ಮಾತನಾಡಿ, ದೇವರು ಕೊಟ್ಟಿದ್ದನ್ನು ಇತರರಿಗೆ ಹಂಚುವಲ್ಲಿ ಸಂತಸವಿದೆ ಎಂದು ನುಡಿದರಲ್ಲದೆ, ಮುಂದಿನ ದಿನಗಳಲ್ಲಿ ಇದನ್ನು ಕೊಡಗಿನ ಎಲ್ಲಾ ಚರ್ಚ್‍ಗಳಿಗೂ ವಿಸ್ತರಿಸುವುದಾಗಿ ತಿಳಿಸಿದರು. ಕೊಡಗು ಕ್ರಿಶ್ಚಿಯನ್ ಅಸೋಸಿಯೇಷನ್ ಅಧ್ಯಕ್ಷ ಎ.ಜೆ.ಬಾಬು ಮಾತನಾಡಿ ಕಾರ್ಯಕ್ರಮಕ್ಕೆ ದಾನದ ರೂಪದಲ್ಲಿ ರೋಗಿಗಳಿಗೆ ನೆರವಾದ ಕೂರ್ಗ್ ಕ್ಲಿಫ್ ರೆಸಾಟ್ರ್ನ ಮಾಲೀಕರ ಸೇವೆ ಹಾಗೂ ಈ ಕಾರ್ಯಕ್ರಮದ ರೂಪರೇಷೆಗಳನ್ನು ಸಿದ್ಧಪಡಿಸಿದ ಅಂತೋನಿ ರಾಬಿನ್ ಅವರ ಶ್ರಮ ಸಾರ್ಥಕತೆ ಪಡೆದುಕೊಂಡಿದೆ. ಕಾರ್ಯಕ್ರಮಕ್ಕೆ ಕೊಡಗು ಕ್ರಿಶ್ಚನ್ ಅಸೋಸಿಯೇಷನ್ ಸಹಭಾಗಿತ್ವದಲ್ಲಿ ನಡೆಯುತ್ತಿರುವುದು ನಮ್ಮ ಸಂಘಕ್ಕೆ ಹೆಮ್ಮೆ ಎಂದು ತಿಳಿಸಿದರು. ವಂದನೀಯ ಡೀನ್ ಧರ್ಮ ಗುರುಗಳಾದ ಜೇಮ್ಸ್ ಡೊಮಿನಿಕ್ ಮಾತನಾಡಿ, ಫಲಾನುಭವಿಗಳ ಮುಖದಲ್ಲಿ ಮಂದಹಾಸ ಮೂಡಿಸಿದ ಈ ಕಾರ್ಯಕ್ರಮದ ಆಯೋಜಕರು ಹಾಗೂ ದಾನಿಗಳಿಗೆ ಒಳಿತಾಗಬೇಕು. ತಪಸ್ಸು ಕಾಲದಲ್ಲಿ ಈ ತರಹದ ಕಾರ್ಯಕ್ರಮಗಳು ಇನ್ನು ಹೆಚ್ಚು ಮೂಡಿ ಎಲ್ಲಾ ಕ್ರೈಸ್ತರಿಗೂ ಮಾದರಿಯಾಗಬೇಕು ಎಂದರು. ಸಿದ್ದಾಪುರ ಸೇಂಟ್ ಮೇರಿಸ್ ದೇವಾಲಯದ ಧರ್ಮ ಗುರುಗಳಾದ ಜೋಸೆಫ್ ವಲಿಯಪರಂಬಿಲ್ ಅವರು, ಆರ್ಥಿಕವಾಗಿ ಅತ್ಯಂತ ದುರ್ಬಲರಾಗಿರುವ ಜನರಿಗೆ ಅಗತ್ಯವಿರುವ ನಿವೇಶನ ಅಥವಾ ಮನೆಗಳನ್ನು ಕಲ್ಪಿಸಿಕೊಡಲು ಸರ್ಕಾರದ ನೆರವಿನೊಂದಿಗೆ ಯೋಜನೆ ರೂಪಿಸಿ ಎಂದು ಕೇಳಿಕೊಂಡರು. ಕಾರ್ಯಕ್ರಮದಲ್ಲಿ ಇತರ ಧರ್ಮ ಕೇಂದ್ರಗಳಿಂದ ಧರ್ಮ ಗುರುಗಳು, ಕನ್ಯಾ ಸ್ತ್ರೀಯರು, ಫಲಾನುಭವಿಗಳು ಹಾಗೂ ಕೊಡಗು ಕ್ರಿಶ್ಚಿಯನ್ ಅಸೋಸಿಯೇೀಷನ್ ಪದಾಧಿಕಾರಿಗಳು, ವಿಲ್ಸನ್, ರೀಟಾ ಆಂಟೋನಿ, ಬಿಂದುಸಾರ ಹಾಜರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 

ಮಾರ್ಚ್ 23, 2026

*ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮಾರ್ಚ್ 23, 2026

*ಮಾ.27 ರಂದು ಕೂಡಿಗೆಯಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ, ವೃತ್ತಿ ಮಾರ್ಗದರ್ಶನ*

ಮಾರ್ಚ್ 23, 2026

*ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*

ಮಾರ್ಚ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮಾ.23 NEWS DESK : ಕೊಡಗು ಕ್ರಿಶ್ಚಿಯನ್ ಅಸೋಸಿಯೇಷನ್ ಸಹಯೋಗದಲ್ಲಿ ಕೂರ್ಗ್ ಕ್ಲಿಫ್ ರೆಸಾರ್ಟ್‍ನಲ್ಲಿ ನಡೆದ ಕ್ಲಿಫ್ ಆಫ್…

*ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮಾರ್ಚ್ 23, 2026

*ಮಾ.27 ರಂದು ಕೂಡಿಗೆಯಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ, ವೃತ್ತಿ ಮಾರ್ಗದರ್ಶನ*

ಮಾರ್ಚ್ 23, 2026

*ಏ.7 ರಿಂದ 30 ರವರೆಗೆ ಬೇಸಿಗೆ ತರಬೇತಿ ಶಿಬಿರ*

ಮಾರ್ಚ್ 23, 2026

*ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*

ಮಾರ್ಚ್ 23, 2026

*ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*

ಮಾರ್ಚ್ 23, 2026

*ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*

ಮಾರ್ಚ್ 23, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ*

ಮಾರ್ಚ್ 23, 2026

*ಕಾಸ್ಮೋಪಾಲಿಟನ್ ಕ್ಲಬ್ ಅಧ್ಯಕ್ಷರಾಗಿ ರತನ್ ತಮ್ಮಯ್ಯ ಆಯ್ಕೆ*

ಮಾರ್ಚ್ 23, 2026

*ಅಡುಗೆ ಅನಿಲ ಬೆಲೆ ಏರಿಕೆ ವಿರೋಧಿಸಿ ಮಡಿಕೇರಿ ನಗರ ಕಾಂಗ್ರೆಸ್ ನಿಂದ ಪ್ರತಿಭಟನೆ*

ಮಾರ್ಚ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.