
ಕುಶಾಲನಗರ ಮಾ.24 NEWS DESK : ತೊರೆನೂರು ಸಂಜೀವಿನಿ ಒಕ್ಕೂಟ ವತಿಯಿಂದ ತೊರೆನೂರು ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಸಂಜೀವಿನಿ ಸಂತೆ ಮೇಳ ನಡೆಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷೆ ರೂಪ ಮಹೇಶ್ ಮಾತಾನಾಡಿ, ಗ್ರಾಮಾಂತರ ಪ್ರದೇಶಗಳಲ್ಲಿ ಸಂತೆ ಮೇಳಗಳು ನಡೆಯುವ ಮೂಲಕ ಮಹಿಳೆಯರು ಅರ್ಥಿಕ ವ್ಯವಹಾರ ಜ್ಞಾನದ ಜೊತೆಯಲ್ಲಿ ಆರ್ಥಿಕವಾಗಿ ಮುಂದುವರೆಯಲು ಅನುಕೂಲವಾಗುವುದು ಎಂದರು. ಕುಶಾಲನಗರ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ಕೆ.ಎಸ್ ಕೃಷ್ಣೆಗೌಡ ಮಾತಾನಾಡಿ, ಸಂಜೀವಿನಿ ಯೋಜನೆಯ ಅಡಿಯಲ್ಲಿ ತಮ್ಮ ಮನೆಗಳಲ್ಲಿ ಗೃಹೋಪಯೋಗಿ ವಸ್ತುಗಳು, ಕರಕುಶಲ ವಸ್ತುಗಳ ತಯಾರಿಕೆಗೆ ಯೋಜನೆಯ ಸವಲತ್ತುಗಳನ್ನು ಪಡೆದುಕೊಳ್ಳಬೇಕು. ಇದರ ಮೂಲಕ ಮಹಿಳೆಯರು ಸ್ವಾವಲಂಬಿ ಬದುಕಿಗೆ ಪೂರಕವಾಗುವುದು ಎಂದು ತಿಳಿಸಿದರು. ಜಿಲ್ಲಾ ಕೆ.ಡಿ.ಪಿ. ಸದಸ್ಯ ಜಗದೀಶ್ ಮಾತಾನಾಡಿ, ಮಹಿಳೆಯರು ಸ್ವ ಉದ್ಯೋಗಿಗಳಾಗಲು ಇಂತಹ ಯೋಜನೆಯು ಸಹಕಾರಿಯಾಗುವುದರ ಮೂಲಕ ತಮ್ಮ ಜವಾಬ್ದಾರಿ ಹೆಚ್ಚಳಕ್ಕೆ ಅನುಕೂಲವಾಗುವುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಈ ಸಂದರ್ಭ ತೊರೆನೂರು ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಮಹಾದೇವಮ್ಮ, ಉಪಾಧ್ಯಕ್ಷೆ ವಿಮಲಾ, ಗ್ರಾಮ ಪಂಚಾಯತಿ ಮಾಜಿ ಸದಸ್ಯೆ ನಿಂಗಮ್ಮ, ಸಹಕಾರ ಸಂಘದ ನಿರ್ದೇಶಕ ರವಿಚಂದ್ರ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶ್ಯಾಮ್, ಕಾರ್ಯದರ್ಶಿ ಹರಿಣಿ, ಖಜಾಂಚಿ ವೀಣಾ, ಸಂಜೀವಿನಿ ಯೋಜನೆಯ ತಾಲ್ಲೂಕು ಮಟ್ಟದ ಜಯಂತ್, ಭವ್ಯ, ಸಂಜೀವಿನಿ ಒಕ್ಕೂಟದ ಎಂ.ಬಿ.ಕೆ.ಸುಮಲತಾ, ಎಲ್.ಸಿ.ಆರ್.ಪಿ.ರಮ್ಯ, ಪಶುಸಕಿ ಸೌಮ್ಯ, ಕೃಷಿಸಕಿ ಸುಮಲತಾ ಸೇರಿದಂತೆ ಸ್ವಸಹಾಯ ಸಂಘದ ಸದಸ್ಯರು, ವಿವಿಧ ಸಂಘಟನೆಯ ಗುಂಪುಗಳ ಮಹಿಳೆಯರು ಭಾಗವಹಿಸಿದರು.









