
ಮಡಿಕೇರಿ ಮಾ.28 NEWS DESK : ನವ ದೆಹಲಿಯಲ್ಲಿ ನಡೆದ ಅಖಿಲ ಭಾರತ ನಾಗರೀಕ ಸೇವೆಗಳ ನೌಕರರ ರಾಷ್ಟ್ರ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯ ಶಾಸ್ತ್ರೀಯ ನೃತ್ಯ ವಿಭಾಗದಲ್ಲಿ ಸೋಮವಾರಪೇಟೆ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಮಿಲನ ಕೆ ಭರತ್ ಬೆಳ್ಳಿ ಪದಕ ಪಡೆದಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಇವರಿಗೆ ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ನಿರ್ದೇಶಕರಾದ ನವಪ್ರೀತ್ ಕೌರ್ ಬಹುಮಾನ ವಿತರಿಸಿರು. ವಿರಾಜಪೇಟೆಯ ಗುರು ವಿದ್ವಾನ್ ರಾಜೇಶ್ ಆಚಾರ್ಯರವರ ಮಾರ್ಗದರ್ಶನದಲ್ಲಿ ಮಿಲನರವರು ನೃತ್ಯ ಪ್ರದರ್ಶನ ನೀಡಿದ್ದರು.








