Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನ ವಿವಿಧೆಡೆ ಗುಡುಗು, ಸಿಡಿಲು ಸಹಿತ ಮಳೆ : ಮರ ಬಿದ್ದು ಸಂಚಾರ ವ್ಯತ್ಯಯ : ಹೊತ್ತಿ ಉರಿದ ತೆಂಗಿನ ಮರ*
  • *ಸಹಾಯ ಧನ ಮತ್ತು ವಸತಿಗಾಗಿ ಒತ್ತಾಯಿಸಿ ಎಸ್‌ಡಿಟಿಯು ಮನವಿ*
  • *ಮಂದಗತಿಯಲ್ಲಿ ಸಾಗುತ್ತಿರುವ ಅಮೃತ್ ಕಾಮಗಾರಿ : ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀವ್ರ ಅಸಮಾಧಾನ*
  • *ಪೊಲೀಸ್ ವಸತಿ ಗೃಹ, ಸಮುದಾಯ ಭವನಗಳಿಗೆ ಕೊಡಗು ಎಸ್‌ಪಿ ಬಿಂದುಮಣಿ ಭೇಟಿ : ಪರಿಶೀಲನೆ*
  • *ಏ.1 ರಂದು ನಾಪೋಕ್ಲುವಿನಲ್ಲಿ ಹಿಂದೂ ಜನಜಾಗೃತಿ ಸಮಾವೇಶ*
  • *ಮಾ.31ರಂದು ಜನರಲ್ ಕೆ.ಎಸ್.ತಿಮ್ಮಯ್ಯ ಅವರ 120ನೇ ಜನ್ಮ ದಿನಾಚರಣೆ*
  • *ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಬಿ.ಕೆ.ಪ್ರಶಾಂತ್ ಆಯ್ಕೆ*
  • *ಶ್ರೀ ತಿರುನೆಲ್ಲಿ ಪೆಮ್ಮಯ್ಯ ದೇವಾಲಯಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ವಿಶೇಷ ಪೂಜೆ ಸಲ್ಲಿಕೆ*
  • *ಸೋಮವಾರಪೇಟೆಯಲ್ಲಿ ಸಂಭ್ರಮದ ರಾಮೋತ್ಸವ*
  • *ಮೂರ್ನಾಡು : ಮಾ.29 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೂಡಿಗೆ : ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ವೃತ್ತಿ ಮೇಳ ಸಹಕಾರಿ : ಸಿಇಓ ಆನಂದ್ ಪ್ರಕಾಶ್ ಮೀನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೂಡಿಗೆ : ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ವೃತ್ತಿ ಮೇಳ ಸಹಕಾರಿ : ಸಿಇಓ ಆನಂದ್ ಪ್ರಕಾಶ್ ಮೀನ*

ಮಾರ್ಚ್ 28, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕೂಡಿಗೆ ಮಾ.28 NEWS DESK : ವಿದ್ಯಾರ್ಥಿಗಳಿಗೆ ಶಿಕ್ಷಣದ ನಂತರದ ಸರಿಯಾದ ವೃತ್ತಿ ಮಾರ್ಗವನ್ನು ಆರಿಸಿಕೊಳ್ಳಲು ಮತ್ತು ಉದ್ಯೋಗಾಕಾಂಕ್ಷಿಗಳಿಗೆ ಸೂಕ್ತ ಉದ್ಯೋಗ ಕಂಡುಕೊಳ್ಳಲು ವೃತ್ತಿ ಶಿಕ್ಷಣ ಮತ್ತು ಪ್ರದರ್ಶನ ಮೇಳ ಆಯೋಜನೆ ಮಾಡಿ ಮಾಹಿತಿ ನೀಡುತ್ತಿರುವುದು
ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗಲಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೊಡಗು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ಹಹಕಾಧಿಕಾರಿ ಆನಂದ್ ಪ್ರಕಾಶ್ ಮೀನ ಕರೆ ನೀಡಿದರು. ಸಮಗ್ರ ಶಿಕ್ಷಣ-ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆಯ
ಸಂಯುಕ್ತ ಆಶ್ರಯದಲ್ಲಿ ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಯಲ್ಲಿ ಜಿಲ್ಲಾ ವೃತ್ತಿಪರ ಮತ್ತು ವೃತ್ತಿ ಮಾರ್ಗದರ್ಶನ ಘಟಕದ ವತಿಯಿಂದ ಕೂಡಿಗೆ ಡಯಟ್ ಸಂಸ್ಥೆ ಆವರಣದಲ್ಲಿ “ನನ್ನ ವೃತ್ತಿ ನನ್ನ ಆಯ್ಕೆ” ಎಂಬ ಶೀರ್ಷಿಕೆಯಡಿ ಏರ್ಪಡಿಸಿದ್ದ ವೃತ್ತಿ ಶಿಕ್ಷಣ ಪ್ರದರ್ಶನ ಮತ್ತು ಕೆರಿಯರ್ ಮೇಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಈ ವೃತ್ತಿಮೇಳದ ಮಾಹಿತಿಯನ್ನು ಪ್ರತಿಯೊಬ್ಬ ವಿದ್ಯಾರ್ಥಿಗಳು ಸದುಪಯೋಗ ಪಡೆಸಿಕೊಂಡು ತಮ್ಮ ಉತ್ತಮ ಜೀವನ ರೂಪಿಸಿಕೊಳ್ಳ ಬೇಕು ಎಂದರು. ಈ ವೃತ್ತಿಮೇಳದಲ್ಲಿ ಸರ್ಕಾರಿ ವಿವಿಧ ಇಲಾಖೆಗಳು ಹಾಗೂ ಬ್ಯಾಂಕ್ ಗಳು ಭಾಗವಹಿಸಲಿದ್ದು ತಜ್ಞರಿಂದ ವಿದ್ಯಾರ್ಥಿಗಳಿಗೆ ಮುಂದಿನ ಭವಿಷ್ಯದ ಬಗ್ಗೆ ಸೂಕ್ತ ತಿಳುವಳಿಕೆ ಮತ್ತು ವಿವಿಧ ಇಲಾಖೆಗಳಿಂದ ಸಿಗುವ ಮಾಹಿತಿಗಳು, ಬ್ಯಾಂಕ್ ಗಳಿಂದ ಲಭ್ಯವಾಗುವ ಶಿಕ್ಷಣ ಸಾಲ ಸೌಲಭ್ಯಗಳು ಇತ್ಯಾದಿ ಮಾಹಿತಿ ಬಗ್ಗೆ ಸಂಪೂರ್ಣ ವಿವರ ಲಭ್ಯವಾಗುವುದರ ಜೊತೆಗೆ ವಿದ್ಯಾರ್ಥಿಗಳಿಗೆ ಈ ಕುರಿತ ತರಬೇತಿಗಳು ಲಭ್ಯವಾಗಲಿವೆ ಎಂದು ಸಿಇಓ ಮೀನ ತಿಳಿಸಿದರು. ವಿದ್ಯಾರ್ಥಿಗಳು ತಮ್ಮ‌ ಮುಂದಿನ‌ ಶಿಕ್ಷಣದ ಆಯ್ಕೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಹೆಚ್ಚಿನ ಆಸಕ್ತಿ ಬೆಳೆಸಿಕೊಂಡು
ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು. ಪೋಷಕರು ಕೂಡ ತಮ್ಮ ಮಕ್ಕಳ ಅಭಿರುಚಿಗೆ ತಕ್ಕಂತಹ ಓದಿಗೆ ಪ್ರೋತ್ಸಾಹ ನೀಡಬೇಕು’ ಎಂದು ಹೇಳಿದರು.
ವೃತ್ತಿಮೇಳದ ಅಂಗವಾಗಿ ಮಳಿಗೆಗಳಲ್ಲಿ ವಿವಿಧ ಇಲಾಖೆ/ ಸಂಸ್ಥೆಗಳಿಂದ ಏರ್ಪಡಿಸಿರುವ ಪ್ರದರ್ಶನದ ಬಗ್ಗೆ ಸಿಇಓ ಮೀನ ಪ್ರಶಂಸೆ ವ್ಯಕ್ತಪಡಿಸಿದರು.
ವೃತ್ತಿಪರ ಉದ್ದೇಶ ಮತ್ತು ವೃತ್ತಿ ಮಾರ್ಗದರ್ಶನ ಮೇಳದ ಉದ್ದೇಶ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದ ಡಯಟ್ ಸಂಸ್ಥೆಯ ಪ್ರಾಂಶುಪಾಲರೂ ಆದ ಪದನಿಮಿತ್ತ ಉಪ ನಿರ್ದೇಶಕ( ಅಭಿವೃದ್ಧಿ) ರಾಮಚಂದ್ರರಾಜೇ ಅರಸ್, ವಿದ್ಯಾರ್ಥಿಗಳು 10ನೇ ಮತ್ತು ಪಿಯುಸಿ ನಂತರ ಮುಂದೇನು ಹಾಗೂ ವೃತ್ತಿಪರ ಕೋರ್ಸ್ ಗಳ ಆಯ್ಕೆಗೆ ಸಂಬಂಧಿಸಿದಂತೆ ಸೂಕ್ತ ತರಬೇತಿ ಮತ್ತು‌ ಮಾರ್ಗದರ್ಶನ ನೀಡಲು ಸರ್ಕಾರ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಘಟಕವನ್ನು ಆರಂಭಿಸಲಾಗಿದ್ದು, ಈ ಘಟಕದ ವತಿಯಿಂದ ವೃತ್ತಿ ಮಾರ್ಗದರ್ಶನ ಮಾಹಿತಿ ನೀಡಲಾಗುತ್ತಿದೆ ಎಂದರು. ‘ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ಹಾಗೂ ಹೆಚ್ಚಿನ ಅವಕಾಶ ಕಲ್ಪಿಸಲು ಪ್ರೌಢಶಾಲೆ ಹಾಗೂ ಪದವಿಪೂರ್ವ ಹಂತದ‌‌ ವಿದ್ಯಾರ್ಥಿಗಳಿಗೆ ಮುಂದಿನ ಶಿಕ್ಷಣ, ವಿದ್ಯಾರ್ಥಿ ವೇತನ ಮತ್ತು ಉದ್ಯೋಗ ಅವಕಾಶಗಳ ಸಮಗ್ರ ಮಾಹಿತಿ ಮತ್ತು ಮಾರ್ಗದರ್ಶನವನ್ನು ಈ ಮೇಳದಲ್ಲಿ‌ ನೀಡಲಾಗುವುದು’ ಎಂದರು. ಈ ವೃತ್ತಿಪರ ಮೇಳದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ವಿದ್ಯಾರ್ಥಿಗಳಿಗೆ ಅವರ ಆಸಕ್ತಿ ಮತ್ತು ಸಾಮರ್ಥ್ಯಕ್ಕೆ ಅನುಗುಣವಾಗಿ ಮುಂದಿನ ವೃತ್ತಿ ಜೀವನದ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡಲಾಗುತ್ತಿದೆ ಎಂದು ರಾಮಚಂದ್ರರಾಜೇ ಅರಸ್ ತಿಳಿಸಿದರು. ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪಿ.ಆರ್.ವಿಜಯ್ ಮಾತನಾಡಿ, ಇಂತಹ ವೃತ್ತಿಪರ ಮೇಳಗಳು ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಸಹಕಾರಿಯಾಗಿದೆ ಎಂದರು. ವಿದ್ಯಾರ್ಥಿಗಳಿಗೆ ವೃತ್ತಿ ಆಯ್ಕೆ ಹಾಗೂ ಬ್ಯಾಂಕ್ ಉದ್ಯೋಗ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಜಿಲ್ಲಾ ಲೀಡ್ ಬ್ಯಾಂಕ್ ನ ನಿವೃತ್ತ ಪ್ರಬಂಧಕ ಆರ್.ಕೆ.ಬಾಲಚಂದ್ರ ಮಾಹಿತಿ ನೀಡಿದರು.
ವಿದ್ಯಾರ್ಥಿಗಳು ಸರ್ಕಾರಿ‌ ನೌಕರಿ ಸಿಗುವ ಕೋರ್ಸ್‌ಗಳು ಮಾತ್ರವಲ್ಲದೆ ಸ್ವಯಂ ಉದ್ಯೋಗ ಸ್ಥಾಪಿಸಿ ಇತರರಿಗೆ ನೌಕರಿ ಕೊಡುವಂತಹ ವೃತ್ತಿಪರ ಕೋರ್ಸ್‌ಗಳನ್ನೂ ಓದಬೇಕು’ ಎಂದರು. ಕುಶಾಲನಗರ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಸಿವಿಲ್ ವಿಭಾಗದ ಮುಖ್ಯಸ್ಥ ಡಾ ಎನ್.ಎಸ್.ಸತೀಶ್, ವಿದ್ಯಾರ್ಥಿಗಳಿಗೆ ಸಿಇಟಿ, ನೀಟ್ ಹಾಗೂ ಜೆಇಇ ಪರೀಕ್ಷೆಯ ಪ್ರವೇಶ ಹಾಗೂ ವೃತ್ತಿ ಮಾರ್ಗದರ್ಶನದ ಬಗ್ಗೆ ಮಾಹಿತಿ ನೀಡಿದರು. ಡಯಟ್ ಸಂಸ್ಥೆಯ ಹಿರಿಯ ಉಪನ್ಯಾಸಕ ಎಚ್.ಎಚ್.ಸತೀಶ್,ವೃತ್ತಿಮೇಳದ ಉದ್ದೇಶ ನೀಡಿದರು. ಡಿವೈಪಿಸಿಗಳಾದ ಸೌಮ್ಯ ಪೊನ್ನಪ್ಪ, ಎಂ.ಕೃಷ್ಣಪ್ಪ, ಬಿಇಓಗಳಾದ ಎಂ.ಕೃಷ್ಣಪ್ಪ, ಆರ್.ಪಿ.ಮಹೇಶ್, ಡಯಟ್ ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಎನ್.ವಿ.ಸ್ವಾಮಿ, ಬಿ.ಎನ್.ಪುಷ್ಪ, ಆರ್. ಹೇಮಂತರಾಜ್, ಉಪನ್ಯಾಸಕರಾದ ವಿ.ವಿಜಯ್, ಕೆ.ಎಸ್.ನಳಿನಾಕ್ಷಿ, ಜಗದೀಶ್, ಗೀತಾ, ಗಾಯತ್ರಿ, ಬಿ ಆರ್ ಸಿ ಎಂ.ವಿ.ಮಂಜೇಶ್, ಜಿಲ್ಲಾ ಉದ್ಯೋಗಾಧಿಕಾರಿ ಸಿ.ಆರ್.ಮಂಜುನಾಥ್,
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಚ್.ಕೆ.ಶಾಂತಿ, ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ಮಡಿಕೇರಿ ಐ.ಟಿ.ಐ. ಸಂಸ್ಥೆಯ ತರಬೇತಿಯ ಸಂಯೋಜಕ ಸಿ.ಕೆ.ಇಂದ್ರೇಶ್, ಸಿಪಾಯಿ ಅಕ್ಷಯ್ ಕೆ.ಎಸ್., ಕೂಡಿಗೆ ವೈದ್ಯಾಧಿಕಾರಿ ಡಾ ಪೂರ್ಣ ಇತರರು ಇದ್ದರು.
ಶಿಕ್ಷಕ ಎಸ್.ಪಿ.ಪರಮೇಶ್ ನಿರ್ವಹಿಸಿದರು. ಶಿಕ್ಷಕ ಬಸವರಾಜ್ ಬಡಿಗೇರ್ ಗೀತೆ ಹಾಡಿದರು. :: ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ :: ಕುಶಾಲನಗರ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಸಿವಿಲ್ ವಿಭಾಗದ ಮುಖ್ಯಸ್ಥ ಡಾ ಎನ್.ಎಸ್.ಸತೀಶ್ , ಸಿಇಟಿ, ನೀಟ್ ಮತ್ತು ಜೆಇಇ ಪ್ರವೇಶ ಪರೀಕ್ಷೆ ಹಾಗೂ ತಾಂತ್ರಿಕ ಕೋರ್ಸ್ ಗಳ ಕುರಿತು, ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ್ , ಉದ್ಯೋಗಾವಕಾಶಗಳ ಕುರಿತು, ಮಡಿಕೇರಿ ಐ.ಟಿ.ಐ. ಸಂಸ್ಥೆಯ ತರಬೇತಿಯ ಸಂಯೋಜಕ ಸಿ.ಕೆ.ಇಂದ್ರೇಶ್ , ಐ.ಟಿ.ಐ. ವೃತ್ತಿಪರ ಕೋರ್ಸ್ ಗಳ ಬಗ್ಗೆ ಮಾಹಿತಿ ನೀಡಿದರು. ಇಂಡಿಯನ್ ಮಿಲಿಟರಿ ಅಕಾಡೆಮಿಗೆ ಆಯ್ಕೆಯಾಗಿರುವ ಸಿಪಾಯಿ ಅಕ್ಷಯ್ ಕೆ.ಎಸ್. ಸೇನಾ ಅಧಿಕಾರಿಗಳ ಹುದ್ದೆಗೆ ಸೇರುವ ಕೋರ್ಸ್ ಗಳ ಬಗ್ಗೆ ಮಾಹಿತಿ ನೀಡಿದರು. ವೃತ್ತಿಮೇಳದಲ್ಲಿ ವಿವಿಧ ಇಲಾಖೆ/ ಸಂಸ್ಥೆಗಳಿಂದ 15 ಮಳಿಗೆಗಳಲ್ಲಿ ವಿವಿಧ ವೃತ್ತಿಪರ ಕೋರ್ಸ್ ಗಳ ಬಗ್ಗೆ ಮಾಹಿತಿ ನೀಡಲಾಯಿತು. ಮೇಳದಲ್ಲಿ ವಿವಿಧ ಶಾಲಾ- ಕಾಲೇಜು ವಿದ್ಯಾರ್ಥಿಗಳು, ಮಹಿಳೆಯರು , ಪೋಷಕರು ಸೇರಿದಂತೆ 600 ಕ್ಕೂ ಹೆಚ್ಚು ಮಂದಿ ಭಾಗವಹಿಸಿ ಮೇಳದ ಸದುಪಯೋಗ ಪಡೆದುಕೊಂಡರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನ ವಿವಿಧೆಡೆ ಗುಡುಗು, ಸಿಡಿಲು ಸಹಿತ ಮಳೆ : ಮರ ಬಿದ್ದು ಸಂಚಾರ ವ್ಯತ್ಯಯ : ಹೊತ್ತಿ ಉರಿದ ತೆಂಗಿನ ಮರ*

ಮಾರ್ಚ್ 28, 2026

*ಸಹಾಯ ಧನ ಮತ್ತು ವಸತಿಗಾಗಿ ಒತ್ತಾಯಿಸಿ ಎಸ್‌ಡಿಟಿಯು ಮನವಿ*

ಮಾರ್ಚ್ 28, 2026

*ಮಂದಗತಿಯಲ್ಲಿ ಸಾಗುತ್ತಿರುವ ಅಮೃತ್ ಕಾಮಗಾರಿ : ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀವ್ರ ಅಸಮಾಧಾನ*

ಮಾರ್ಚ್ 28, 2026

*ಸಹಾಯ ಧನ ಮತ್ತು ವಸತಿಗಾಗಿ ಒತ್ತಾಯಿಸಿ ಎಸ್‌ಡಿಟಿಯು ಮನವಿ*

ಮಾರ್ಚ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.28 : ಮಧ್ಯ ಪ್ರಾಚ್ಯ ಯುದ್ಧದ ಕಾರಣದಿಂದ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ನ ಸರಬರಾಜಿನಲ್ಲಿ…

*ಮಂದಗತಿಯಲ್ಲಿ ಸಾಗುತ್ತಿರುವ ಅಮೃತ್ ಕಾಮಗಾರಿ : ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀವ್ರ ಅಸಮಾಧಾನ*

ಮಾರ್ಚ್ 28, 2026

*ಪೊಲೀಸ್ ವಸತಿ ಗೃಹ, ಸಮುದಾಯ ಭವನಗಳಿಗೆ ಕೊಡಗು ಎಸ್‌ಪಿ ಬಿಂದುಮಣಿ ಭೇಟಿ : ಪರಿಶೀಲನೆ*

ಮಾರ್ಚ್ 28, 2026

*ಏ.1 ರಂದು ನಾಪೋಕ್ಲುವಿನಲ್ಲಿ ಹಿಂದೂ ಜನಜಾಗೃತಿ ಸಮಾವೇಶ*

ಮಾರ್ಚ್ 28, 2026

*ಮಾ.31ರಂದು ಜನರಲ್ ಕೆ.ಎಸ್.ತಿಮ್ಮಯ್ಯ ಅವರ 120ನೇ ಜನ್ಮ ದಿನಾಚರಣೆ*

ಮಾರ್ಚ್ 28, 2026

*ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಬಿ.ಕೆ.ಪ್ರಶಾಂತ್ ಆಯ್ಕೆ*

ಮಾರ್ಚ್ 28, 2026

*ಶ್ರೀ ತಿರುನೆಲ್ಲಿ ಪೆಮ್ಮಯ್ಯ ದೇವಾಲಯಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ವಿಶೇಷ ಪೂಜೆ ಸಲ್ಲಿಕೆ*

ಮಾರ್ಚ್ 28, 2026

*ಸೋಮವಾರಪೇಟೆಯಲ್ಲಿ ಸಂಭ್ರಮದ ರಾಮೋತ್ಸವ*

ಮಾರ್ಚ್ 28, 2026

*ಮೂರ್ನಾಡು : ಮಾ.29 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಮಾರ್ಚ್ 28, 2026

*ಗೋಣಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸಮಿತಿಗಳ ರಚನೆ ಮತ್ತು ನಿರ್ವಹಣೆ ತರಬೇತಿ*

ಮಾರ್ಚ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.