
ಮಡಿಕೇರಿ NEWS DESK ಮಾ.28 : ಪೊಲೀಸ್ ಇಲಾಖೆಯ ದಕ್ಷ ಸೇವೆಗಾಗಿ 2025ನೇ ಸಾಲಿನ ಮುಖ್ಯಮಂತ್ರಿಗಳ ಪದಕಕ್ಕೆ ಕೊಡಗಿನ ಪೊಲೀಸ್ ವೃತ್ತ ನಿರೀಕ್ಷಕ ಶಿವರಾಜ್ ಆರ್.ಮುಧೋಳ್ ಹಾಗೂ ಎಎಸ್‌ಐ ಜೋಷಿ ಕುಟ್ಟಪ್ಪ ಪಾತ್ರರಾಗಿದ್ದಾರೆ. ಇದೇ ಏ.2ರಂದು ಬೆಂಗಳೂರಿನಲ್ಲಿ ನಡೆಯುವ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಪದಕ ಪ್ರದಾನ ಮಾಡಲಿದ್ದಾರೆ. ಪೊಲೀಸ್ ವೃತ್ತ ನಿರೀಕ್ಷಕ ಶಿವರಾಜ್ ಆರ್. ಮುಧೋಳ್ ಅವರು ಗೋಣಿಕೊಪ್ಪಲಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಜೋಷಿ ಕುಟ್ಟಪ್ಪ ಅವರು ಮಡಿಕೇರಿಯ ಕೊಡಗು ಜಿಲ್ಲಾ ಪೊಲೀಸ್ ಇಲಾಖೆಯ ನಿಸ್ತಂತು ನಿಯಂತ್ರಣ ಕೊಠಡಿ (ಕಂಟ್ರೋಲ್ ರೂಂ)ಯಲ್ಲಿ ಎಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.








