
ಮಡಿಕೇರಿ ಮಾ.30 NEWS DESK : ಮಾಯಮುಡಿಯಲ್ಲಿ ಆಯೋಜನೆಗೊಂಡ ಎಂಪಿಎಲ್ ಸೀಸನ್ 1 ಕ್ರಿಕೆಟ್ ಪಂದ್ಯಾವಳಿಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಉದ್ಘಾಟಿಸಿದರು. ಮಾಯಮುಡಿ ಶಾಲಾ ಮೈದಾನದಲ್ಲಿ ಆಯೋಜನೆಗೊಂಡ ಕ್ರಿಕೆಟ್ ಪಂದ್ಯಾವಳಿಗೆ ಬ್ಯಾಟ್ ಬಿಸುವ ಮೂಲಕ ಚಾಲನೆ ನೀಡಿ, ಶುಭ ಕೋರಿದರು. ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಚೆಪ್ಪುಡೀರ ಅರುಣ್ ಮಾಚಯ್ಯ, ಬ್ಲಾಕ್ ಅಧ್ಯಕ್ಷರಾದ ಮಿದೇರಿರ ನವೀನ್, ತಾಲೂಕು ಪ್ರಚಾರ ಸಮಿತಿಯ ಅಧ್ಯಕ್ಷರಾದ ಟಾಟು ಮೊಣ್ಣಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಬಾನಂಡ ಪ್ರತ್ಯು, ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷರಾದ ಆಲಿರ ರಶೀದ್, ಪಕ್ಷದ ಪ್ರಮುಖರು ಅಜ್ಜಿಕುಟ್ಟಿರ ಪೊನ್ನು, ಯಸ್ವಿನ್,ಸಿದ್ದು ನಾಚಪ್ಪ, ಮಚ್ಚಮಾಡ ಮನು,ಅಜ್ಜಿಕುಟ್ಟಿರ ಗಿರೀಶ್, ಮನು, ಹಾಗೂ ಕಾರ್ಯಕ್ರಮ ಆಯೋಜಕರು, ಪ್ರಮುಖರು ಉಪಸ್ಥಿತರಿದ್ದರು.









