
ಮಡಿಕೇರಿ ಮಾ.30 NEWS DESK : ಬೇಸಿಗೆ ಕಾಲದಲ್ಲಿ ಸಾರ್ವಜನಿಕರು ನೀರಿನ ಅಭಾವದಿಂದ ಬಳಲಬಾರದು ಎಂಬ ಸದುದ್ದೇಶದಿಂದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ರೂ.28 ಲಕ್ಷದಲ್ಲಿ ಪೊನ್ನಂಪೇಟೆ ಭಾಗದಲ್ಲಿ ಅಗತ್ಯ ಇರುವ ಸಾರ್ವಜನಿಕರಿಗೆ ತುರ್ತು ನೀರಿನ ಸೌಲಭ್ಯ ಕಲ್ಪಿಸಲು ಟ್ಯಾಂಕರ್ ವಾಹನವನ್ನು ವ್ಯವಸ್ಥೆ ಮಾಡಿದ್ದಾರೆ. ಪೊನ್ನಂಪೇಟೆಯಲ್ಲಿ ನೀರಿನ ಟ್ಯಾಂಕರ್ ಅನ್ನು ಉದ್ಘಾಟಿಸಿ, ತೀವ್ರ ಬೇಸಿಗೆಯಿಂದ ನೀರಿನ ಅಭಾವ ತಲೆದೋರಿದ್ದು, ಸಾರ್ವಜನಿಕರಿಗೆ ನೀರಿನ ಅಭಾವ ಆಗದಂತೆ ನೋಡಿಕೊಳ್ಳಲು ಈ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದರು. ಈ ಸಂದರ್ಭ ಬ್ಲಾಕ್ ಅಧ್ಯಕ್ಷರಾದ ಮಿದೇರಿರ ನವೀನ್, ಮಹಿಳಾ ಅಧ್ಯಕ್ಷರಾದ ಆಶಾ ಪೂಣಚ್ಚ, ಪಂಚಾಯಿತಿ ಅಧ್ಯಕ್ಷರು ಅಣ್ಣಿರ ಹರೀಶ್, ಉಪಾಧ್ಯಕ್ಷರು ಆಲಿರ ರಶೀದ್, ಮಾಜಿ ಮಹಿಳಾ ಅಧ್ಯಕ್ಷರು ಭಾರತಿ, ಸುನಿತಾ, ಅನಿತಾ, ತಾಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಜುನೈದ್, ಹಿರಿಯರು ಮುಕಳೇರ ಕುಶಾಲಪ್ಪ, ಜಿಮ್ಮಿ ಅಣ್ಣಯ್ಯ, ಕೊಲ್ಲಿರ ಬೋಪಣ್ಣ, ಅಜ್ಜಿಕುಟ್ಟಿರ ಪೊನ್ನು, ಪಮ್ಮು, ಗಿರೀಶ್, ಮನು, ಮಚ್ಚಾಮಾಡ ಮನು, ಸಿದ್ದು ನಾಚಪ್ಪ, ಅನಿಶ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.









