ಮಡಿಕೇರಿ, NEWS DESK ಮಾ.31:-ರಾಷ್ಟ್ರೀಯ ಹೆದ್ದಾರಿ 275 ರಸ್ತೆ ನಿರ್ಮಾಣಕ್ಕೆ ಭೂ ಸ್ವಾಧೀನ ಪ್ರಕ್ರಿಯೆ ಪ್ರಾರಂಭವಾಗಿದು,್ದ ಈ ಸಂಬಂಧ ಕುಶಾಲನಗರ ಬಸವನಹಳ್ಳಿ ಸರ್ಕಾರಿ ಮತ್ತು ಖಾಸಗಿ ಸ್ಥಳಗಳಲ್ಲಿರುವ ಮರಗಳನ್ನು ತೆರವುಗೊಳಿಸಲು ವಿಶೇಷ ಭೂ ಸ್ವಾಧೀನಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರ, ರಾಷ್ಟ್ರೀಯ ಹೆದ್ದಾರಿ-275 (ಮೈಸೂರು-ಮಡಿಕೇರಿ ವಿಭಾಗ) ಮೈಸೂರು ಇವರು ಕೋರಿದ್ದಾರೆ.
ಕುಶಾಲನಗರ ವಲಯ ವ್ಯಾಪ್ತಿಯ ಬಸವನಹಳ್ಳಿ ಗ್ರಾಮದ ಖಾಸಗಿ ಮತ್ತು ಸರ್ಕಾರಿ ಜಾಗದಲ್ಲಿ ಕಾಮಗಾರಿಗೆ ಅಡಚಣೆಯಾದ 199 ಬೀಟೆ ಮತ್ತು ಇತರೆ ಜಾತಿಯ ಮರಗಳನ್ನು ಕಡಿದು ಸರ್ಕಾರಿ ನಾಟಾ ಸಂಗ್ರಹಾಲಯಕ್ಕೆ ಸಾಗಿಸಲು ಹಾಗೂ ಮೆದು ಜಾತಿಯ ಮರಗಳನ್ನು ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡಲು ವಲಯ ಅರಣ್ಯಾಧಿಕಾರಿ, ಕುಶಾಲನಗರ ವಲಯ, ಕುಶಾಲನಗರ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಸೋಮವಾರಪೇಟೆ ಉಪ ವಿಭಾಗ, ಸೋಮವಾರಪೇಟೆ ಇವರು ವರದಿ ಸಲ್ಲಿಸಿದ್ದಾರೆ.
ಆದ್ದರಿಂದ, ಸಾರ್ವಜನಿಕರು ಈ ಬಗ್ಗೆ ಆಕ್ಷೇಪಣೆಗಳು ಇದ್ದಲ್ಲಿ ಏಪ್ರಿಲ್ 15 ರ ಒಳಗಾಗಿ ಉಪ ಅರಣ್ಯ ಸಂರಕ್ಷಣಾಧಿಕಾರಿ, ಮಡಿಕೇರಿ ವಿಭಾಗ, ಮಡಿಕೇರಿ ಇವರಿಗೆ ಲಿಖಿತ ಮೂಲಕ ಆಕ್ಷೇಪಣೆ ಸಲ್ಲಿಸಬೇಕಾಗಿ ಈ ಮೂಲಕ ತಿಳಿಸಿದೆ. ನಿಗಧಿತ ಅವಧಿಯಲ್ಲಿ ಆಕ್ಷೇಪಣೆ ಬಾರದಿದ್ದಲ್ಲಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು ಎಂದು ಮಡಿಕೇರಿ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್ ಅವರು ತಿಳಿಸಿದ್ದಾರೆ.
Breaking News
- *ಪವಿತ್ರ ತೀರ್ಥೋದ್ಭವ : ಅಗತ್ಯ ಸಿದ್ಧತೆಗೆ ಶಾಸಕ ಎ.ಎಸ್.ಪೊನ್ನಣ್ಣ ಸೂಚನೆ*

- *ಗೋಣಿಕೊಪ್ಪದಲ್ಲಿ ಗೌರಿ-ಗಣೇಶೋತ್ಸವ : ಗಮನ ಸೆಳೆದ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮ*
- *ಗೋಣಿಕೊಪ್ಪದಲ್ಲಿ ಗೌರಿ-ಗಣೇಶೋತ್ಸವ : ಗಮನ ಸೆಳೆದ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮ*
- *ಎಂಜಿನಿಯರ್‌ಗಳಿಗೆ ‘Er.’ ಪೂರ್ವಪ್ರತ್ಯಯ ಬಳಕೆಗೆ ಕರ್ನಾಟಕ ಸರ್ಕಾರದ ಅನುಮತಿ*
- *ಕ.ಸಾ.ಪ. ವತಿಯಿಂದ ಶಿರಂಗಾಲ ಕಾಲೇಜಿನಲ್ಲಿ ಮುಲ್ಲೇಂಗಡ ಬೇಬಿ ಚೋಂದಮ್ಮ ದತ್ತಿ ಉಪನ್ಯಾಸ; ಕಥೆಗಾರ್ತಿ ಕೊಡಗಿನ ಗೌರಮ್ಮ ಮಹಿಳಾ ಧ್ವನಿಯಾಗಿ ಮೂಡಿಬಂದವರು: ಬಿ.ಆರ್. ಸತ್ಯನಾರಾಯಣ*
- *ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ; ಡಾ. ರಾಜ್‌ಕುಮಾರ್ ಬಳಿಕ ಈ ಗೌರವಕ್ಕೆ ಭಾಜನರಾದ ಕನ್ನಡದ ಎರಡನೇ ನಟ*