ಮಡಿಕೇರಿ, NEWS DESK ಮಾ.31 : ಭಾಗಮಂಡಲ ಪ್ರಾದೇಶಿಕ ಅರಣ್ಯ ವಲಯ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಾಥಮಿಕ ಆರೋಗ್ಯ ಕೇಂದ್ರ ಭಾಗಮಂಡಲ, ಇವರ ಸಹಯೋಗದಲ್ಲಿ ಕಾಡಂಚಿನ ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಆಯೋಜಿಸಲಾಗಿತ್ತು. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ನಂಜುಂಡಯ್ಯ ಅವರು ಶಿಬಿರವನ್ನು ಉದ್ಘಾಟಿಸಿ ಆರೋಗ್ಯ ಸೌಲಭ್ಯದ ಮಾಹಿತಿ ನೀಡಿದರು. ಪ್ರಾದೇಶಿಕ ಅರಣ್ಯ ವಲಯ ಅಧಿಕಾರಿ ಶಂಕರ್ ಅವರು ಮಾತನಾಡಿ ಅರಣ್ಯ ಇಲಾಖೆಯ ವತಿಯಿಂದ ಜನರಿಗೆ ಸಿಗುವ ಸೇವಾ ಸೌಲಭ್ಯ ಮತ್ತು ಆರೋಗ್ಯ ತಪಾಸಣಾ ಶಿಬಿರದ ಕುರಿತು ವಿವರಿಸಿದರು. ಭಾಗಮಂಡಲ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸುನಿಲ್ ಅವರು ಆಸಾoಕ್ರಾಮಿಕ ಮತ್ತು ಸಾಂಕ್ರಾಮಿಕ ಖಾಯಿಲೆಗಳ ಬಗ್ಗೆ ತಿಳಿಸಿದರು. 14 ರಿಂದ 15 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ಗರ್ಭಕಂಠ ಕ್ಯಾನ್ಸರ್ ಅನ್ನು ತಡೆಗಟ್ಟಲು HPV ಲಸಿಕೆಯನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ ಅವರು ಹೆಣ್ಣುಭ್ರೂಣ ಹತ್ಯೆ ತಡೆಗಟ್ಟುವುದು ಮತ್ತು ಅಂಗಾಂಗ ದಾನ ನೋಂದಣಿಯ ಬಗ್ಗೆ ಮಾಹಿತಿ ನೀಡಿದರು. ಮಕ್ಕಳ ತಜ್ಞ ವೈದ್ಯ ಡಾ.ಕುಶ್ವಂತ್ ಕೋಳಿಬೈಲು, ENT ವೈದ್ಯಾಧಿಕಾರಿ ಡಾ.ರಾಜಶ್ರೀ, ವೈದ್ಯಕೀಯ ಕಾಲೇಜಿನ ತಜ್ಞ ವೈದ್ಯರು ಹಾಗೂ ತಂಡ, ಭಾಗಮಂಡಲ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗ, ಅರಣ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿ ವರ್ಗ, ಗ್ರಾಮದ ಪ್ರಮುಖರಾದ ಹಾರಿಸ್, ವೇಣುಗೋಪಾಲ್, ಕೀರ್ತಿ ಮತ್ತಿತರರು ಹಾಜರಿದ್ದರು. 172 ಕ್ಕೂ ಅಧಿಕ ಗ್ರಾಮಸ್ಥರು ಸೇವೆಯನ್ನು ಪಡೆದುಕೊಂಡರು. *ನೀಡಿದ ಸೇವೆಗಳ ವಿವರ* OPD:172, ಆರ್ಗನ್ ಡೊನೇಷನ್ ನೋಂದಣಿ 15, TB ಸ್ಕ್ರೀನಿಂಗ್ 52, ಕಫ ಸಂಗ್ರಹ 4, chest X-RAY 7, ಹೆಪಟೈಟಿಸ್ ಬಿ ಮತ್ತು ಸಿ ಪರೀಕ್ಷೆ 75.








