ಮಡಿಕೇರಿ, NEWS DESK ಏ.4:-ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆ ವತಿಯಿಂದ ಏಪ್ರಿಲ್, 8 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ “ಉದ್ಯೋಗಮೇಳ” ನಡೆಯಲಿದೆ.
ಈ ಉದ್ಯೋಗ ಮೇಳದಲ್ಲಿ ಜಾಯ್ ಆಲುಕಾಸ್ ಜ್ಯುವೆಲ್ಲರಿ, ಮೈಸೂರು, ಕಲ್ಯಾಣಿ ಮೋಟಾರ್ಸ್ ಕಾರ್ ಶೋ ರೂಂ, ಮಡಿಕೇರಿ, ಕೂರ್ಗ್ ಕ್ಲಿಪ್ಟ್ಸ್ ರೆಸಾರ್ಟ್, ಮಡಿಕೇರಿ, ಹ್ಯೂಂಡಾಯಿ ಕಾರ್ ಶೋ ರೂಮ್, ಮಡಿಕೇರಿ, ಇವೊಲೋಬ್ಯಾಕ್ ರೆಸಾರ್ಟ್, ಮಡಿಕೇರಿ ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ಈ ಮೇಳದಲ್ಲಿ ಖಾಸಗಿ ಕಂಪೆನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿಯಿರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಉದ್ಯೋಗಮೇಳದಲ್ಲಿ ಎಸ್‍ಎಸ್‍ಎಲ್‍ಸಿ., ಪಿಯುಸಿ, ಐಟಿಐ, ಡಿಪೆÇ್ಲೀಮ, ಪದವಿ ಹಾಗೂ ಸ್ನಾತಕೋತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ (ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗಮೇಳಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಜಾಬ್ ಕೋಆರ್ಡಿನೇಟರ್ 8296020826 ನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.







