ಮಡಿಕೇರಿ, NEWS DESK ಏ.04:-ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಹಸಿರುಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್ ರಾಂ ಅವರ 119 ನೇ ಜನ್ಮ ದಿನಾಚರಣೆಯು ಏಪ್ರಿಲ್, 05 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಗಾಂಧಿಭವನದಲ್ಲಿ ನಡೆಯಲಿದೆ.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್.ಅರುಣ್ ಮಾಚಯ್ಯ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಕೊಡ್ಲಿಪೇಟೆಯ ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಯ ಪ್ರಾಂಶುಪಾಲರಾದ ಡಾ.ಕೆ.ಗುರುಸ್ವಾಮಿ, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಇತರರು ಪಾಲ್ಗೊಳ್ಳಲಿದ್ದಾರೆ.
Breaking News
- *ಎಂಜಿನಿಯರ್ಗಳಿಗೆ ‘Er.’ ಪೂರ್ವಪ್ರತ್ಯಯ ಬಳಕೆಗೆ ಕರ್ನಾಟಕ ಸರ್ಕಾರದ ಅನುಮತಿ*
- *ಕ.ಸಾ.ಪ. ವತಿಯಿಂದ ಶಿರಂಗಾಲ ಕಾಲೇಜಿನಲ್ಲಿ ಮುಲ್ಲೇಂಗಡ ಬೇಬಿ ಚೋಂದಮ್ಮ ದತ್ತಿ ಉಪನ್ಯಾಸ; ಕಥೆಗಾರ್ತಿ ಕೊಡಗಿನ ಗೌರಮ್ಮ ಮಹಿಳಾ ಧ್ವನಿಯಾಗಿ ಮೂಡಿಬಂದವರು: ಬಿ.ಆರ್. ಸತ್ಯನಾರಾಯಣ*
- *ಅನಂತ್ ನಾಗ್ಗೆ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ; ಡಾ. ರಾಜ್ಕುಮಾರ್ ಬಳಿಕ ಈ ಗೌರವಕ್ಕೆ ಭಾಜನರಾದ ಕನ್ನಡದ ಎರಡನೇ ನಟ*
- *ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್ಗೆ 18.97 ಲಕ್ಷ ರೂ. ನಿವ್ವಳ ಲಾಭ*
- *ದೊಡ್ಡಮಳ್ತೆ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*
- *ಪ್ರಜಾಪ್ರಭುತ್ವ ವ್ಯವಸ್ಥೆ ಪ್ರಪಂಚದಲ್ಲೇ ಅತ್ಯುನ್ನತ ಸ್ಥಾನದಲ್ಲಿದೆ: ಶಾಸಕ ಡಾ.ಮಂತರ್ಗೌಡ*
- *ದಕ್ಷಿಣ ವಲಯ ಹಾಕಿ ವಿಜೇತ ತಂಡಗಳಿಗೆ ಕೊಡಗು ವಿದ್ಯಾಲಯದಲ್ಲಿ ಅದ್ದೂರಿ ಸ್ವಾಗತ*
- *ಮೋದಿ ಅಭಿವೃದ್ಧಿ ಕಾರ್ಯಗಳ ಮೇಲೆ ಅಭಿಮಾನ: ಕೊಡಗಿನಲ್ಲಿ ಸೆ.17ರಿಂದ ಅ.17ರವರೆಗೆ ಬಿಜೆಪಿ ಸೇವಾ ಸಂಕಲ್ಪ ಅಭಿಯಾನ*
- *ಅ.17ರಂದು ತಲಕಾವೇರಿಯಲ್ಲಿ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ : ರಾತ್ರಿ 7.50ಕ್ಕೆ ಸಲ್ಲುವ ಮೇಷ ಲಗ್ನದಲ್ಲಿ*
- *ಶ್ರೀದೇವಿ ಚಾರಿಟೇಬಲ್ ಟ್ರಸ್ಟ್ ನ ಪ್ರಥಮ ವಾರ್ಷಿಕ ಮಹಾಸಭೆ : ವಿದ್ಯಾರ್ಥಿಗಳಿಗೆ ಪ್ರೋತ್ಸಾಹ*







