Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಎಂಜಿನಿಯರ್‌ಗಳಿಗೆ ‘Er.’ ಪೂರ್ವಪ್ರತ್ಯಯ ಬಳಕೆಗೆ ಕರ್ನಾಟಕ ಸರ್ಕಾರದ ಅನುಮತಿ*
  • *ಕ.ಸಾ.ಪ. ವತಿಯಿಂದ ಶಿರಂಗಾಲ ಕಾಲೇಜಿನಲ್ಲಿ ಮುಲ್ಲೇಂಗಡ ಬೇಬಿ ಚೋಂದಮ್ಮ ದತ್ತಿ ಉಪನ್ಯಾಸ; ಕಥೆಗಾರ್ತಿ ಕೊಡಗಿನ ಗೌರಮ್ಮ ಮಹಿಳಾ ಧ್ವನಿಯಾಗಿ ಮೂಡಿಬಂದವರು: ಬಿ.ಆರ್. ಸತ್ಯನಾರಾಯಣ*
  • *ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ; ಡಾ. ರಾಜ್‌ಕುಮಾರ್ ಬಳಿಕ ಈ ಗೌರವಕ್ಕೆ ಭಾಜನರಾದ ಕನ್ನಡದ ಎರಡನೇ ನಟ*
  • *ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್‌ಗೆ 18.97 ಲಕ್ಷ ರೂ. ನಿವ್ವಳ ಲಾಭ*
  • *ದೊಡ್ಡಮಳ್ತೆ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*
  • *ಪ್ರಜಾಪ್ರಭುತ್ವ ವ್ಯವಸ್ಥೆ ಪ್ರಪಂಚದಲ್ಲೇ ಅತ್ಯುನ್ನತ ಸ್ಥಾನದಲ್ಲಿದೆ: ಶಾಸಕ ಡಾ.ಮಂತರ್‌ಗೌಡ*
  • *ದಕ್ಷಿಣ ವಲಯ ಹಾಕಿ ವಿಜೇತ ತಂಡಗಳಿಗೆ ಕೊಡಗು ವಿದ್ಯಾಲಯದಲ್ಲಿ ಅದ್ದೂರಿ ಸ್ವಾಗತ*
  • *ಮೋದಿ ಅಭಿವೃದ್ಧಿ ಕಾರ್ಯಗಳ ಮೇಲೆ ಅಭಿಮಾನ: ಕೊಡಗಿನಲ್ಲಿ ಸೆ.17ರಿಂದ ಅ.17ರವರೆಗೆ ಬಿಜೆಪಿ ಸೇವಾ ಸಂಕಲ್ಪ ಅಭಿಯಾನ*
  • *ಅ.17ರಂದು ತಲಕಾವೇರಿಯಲ್ಲಿ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ : ರಾತ್ರಿ 7.50ಕ್ಕೆ ಸಲ್ಲುವ ಮೇಷ ಲಗ್ನದಲ್ಲಿ*
  • *ಶ್ರೀದೇವಿ ಚಾರಿಟೇಬಲ್ ಟ್ರಸ್ಟ್ ನ ಪ್ರಥಮ ವಾರ್ಷಿಕ ಮಹಾಸಭೆ : ವಿದ್ಯಾರ್ಥಿಗಳಿಗೆ ಪ್ರೋತ್ಸಾಹ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸನಾತನ ಧರ್ಮ ಉಳಿಯಬೇಕಾದರೆ ಮಠ ಮಾನ್ಯಗಳು ಉಳಿಯಬೇಕು : ಶಾಸಕಿ ಭಾರತೀ ಶೆಟ್ಟಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸನಾತನ ಧರ್ಮ ಉಳಿಯಬೇಕಾದರೆ ಮಠ ಮಾನ್ಯಗಳು ಉಳಿಯಬೇಕು : ಶಾಸಕಿ ಭಾರತೀ ಶೆಟ್ಟಿ*

ಏಪ್ರಿಲ್ 6, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಮನೆಹಳ್ಳಿ(ಆಲೂರುಸಿದ್ದಾಪುರ), NEWS DESK ಏ.06:- ಈ ಜಗತ್ತಿನಲ್ಲಿ ಸನಾತನ ಧರ್ಮ ಉಳಿಯಬೇಕಾದರೆ ಮಠಮಾನ್ಯಗಳು ಇರಬೇಕೆಂದು ವಿಧಾನ ಪರಿಷತ್ ಸದಸ್ಯೆ ಶ್ರೀಮತಿ.ಭಾರತಿ ಶೆಟ್ಟಿ ತಿಳಿದರು.
ತಾಲೂಕಿನ ಶನಿವಾರಸಂತೆ ಸಮೀಪದ ಆಲೂರುಸಿದ್ದಾಪುರಬಳಿಯ ಶ್ರೀ ತಪೋಕ್ಷೇತ್ರ ಮನೆಹಳ್ಳಿ ಮಠದಲ್ಲಿ ೧೪ ನೇ ವರ್ಷದ ಶ್ರೀ ಗುರುಸಿದ್ಧವೀರೇಶ್ವರ ಮಹಾರಥೋತ್ಸವದ ಧಾರ್ಮಿಕ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
  ಸದಾ ಅಸ್ತಿತ್ವದಲ್ಲಿರುವ ಜೀವನ ಮಾರ್ಗ ಇದು ಹಿಂದೂ ಧರ್ಮದ ಮೂಲಭೂತ ಮತ್ತು ಪ್ರಾಚೀನ ಹೆಸರಾಗಿದ್ದು, ಯಾವುದೇ ನಿರ್ದಿಷ್ಟ ಆರಂಭ ಅಥವಾ ಅಂತ್ಯವಿಲ್ಲದ, ನೈಸರ್ಗಿಕ ಕಾನೂನುಗಳು, ಕರ್ಮ, ಜ್ಞಾನ ಮತ್ತು ಭಕ್ತಿಯ ಮೇಲೆ ಆಧಾರಿತವಾದ ಸಾರ್ವತ್ರಿಕ ತತ್ವಗಳನ್ನು ಒಳಗೊಂಡಿದೆ. ಪ್ರಸ್ತುತ ಸಂದರ್ಭದಲ್ಲಿ ಮಠ ಮಾನ್ಯಗಳು ಧಾರ್ಮಿಕ ಚಿಂತನೆಯ ಜೊತೆಗೆ ಸಮಾಜ ಮುಖಿ ಚಿಂತನೆ ಹಾಗೂ ಶಿಕ್ಷಣ ಸಂಸ್ಥೆಗಳನ್ನ ಕಟ್ಟಿ ಬೆಳಸುತ್ತಿರುವುದು ಅತ್ಯಂತ ಸಂತಸದ ವಿಷಯ. ಆ ನಿಟ್ಟಿನಲ್ಲಿ ಮಠ ಮಾನ್ಯಗಳು ಆಧ್ಯಾತ್ಮಕ ಕೇಂದ್ರಗಳಷ್ಟೆ ಅಲ್ಲ ಅವು ನೆಮ್ಮದಿಯ ತಾಣಗಳು ಕೂಡ ಆಗಿವೆ ಎಂದು ವಿಧಾನ ಪರಿಷತ್ ಸದಸ್ಯೆ ಭಾರತೀ ಶೆಟ್ಟಿ ಹೇಳಿದರು.
 ಅವರು ಹಿಂದೂ ಧರ್ಮವನ್ನು ಅಳಿಸಿ ಹಾಕಲು ಸಾಕಷ್ಟು ಜನರು ದೇಶದ ಮೇಲೆ ದಾಳಿ ಮಾಡಿದರೂ ಸನಾತನ ಹಿಂದೂ ಧರ್ಮ ಜೀವಂತವಾಗಿರಲು ನಮ್ಮ ಪೂಜ್ಯರು ಕಾಪಾಡಿಕೊಂಡು ಬಂದಿರುವ ಧರ್ಮ ಪರಂಪರೆಯೇ ಕಾರಣವಾಗಿದೆ, ನಮ್ಮ ಸನಾತನ ಧರ್ಮದ ಸ್ವಾಭಿಮಾನದ ಸಂಕೇತವಾಗಿದೆ ಹಿಂದೂ ಧರ್ಮದಲ್ಲಿ ಹುಟ್ಟಿರುವ ನಾವುಗಳು ನಮ್ಮ ಸನಾತನ ಧರ್ಮ ಸಂಸ್ಕೃತಿ ಪರಂಪರೆಯನ್ನು ಉಳಿಸುವಂತಹ ಕಾರ್ಯ ಮಾಡಬೇಕಿದೆ ಇಲ್ಲದಿದ್ದರೆ ನಮ್ಮ ಮೇಲೆ ಹಿಂದಿನಂತೆ ಧರ್ಮದ ಮೇಲೆ ದಬ್ಬಾಳಿಕೆ ನಡೆಯುತ್ತಾ ಇರುತ್ತದೆ ಇದನ್ನು ನಿಲ್ಲಿಸಲು ಧರ್ಮ ಸಂಸ್ಕೃತಿ ಮಕ್ಕಳಲ್ಲಿ ಕಲಿಸುವ ಕಾರ್ಯ ತಂದೆ ತಾಯಂದಿರರು ಮಾಡಬೇಕು ಎಂದರು.
ಕೋಲಾರ ಜಿಲ್ಲಾ ನ್ಯಾಯಾಧೀಶರಾದ ಜಯಶ್ರ್ರೀ ಮಾತನಾಡಿ ಬೆಳ್ಳಿ, ಬಂಗಾರ, ಹಣ, ಆಸ್ತಿ ಇದಾವುದೂ ನಿಜವಾದ ಸಂಪತ್ತಲ್ಲ. ನಮಗೆ ಎಲ್ಲವನ್ನೂ ದಯಪಾಲಿಸಿರುವ ಭಗವಂತನ ಸ್ಮರಣೆಯೇ ನಿಜವಾದ ಸಂಪತ್ತು. ಭಗವಂತನ ಸ್ಮರಣೆುಂದ ಯಾವಾಗ ವಿಮುಖರಾಗುತ್ತೇವೆಯೋ ಅಂದೇ ಆಪತ್ತು ಎಂದರು.
ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ಅಪ್ಪಚ್ಚು ರಂಜನ್ ಮಾತನಾಡಿ ಮಠ-ಮಾನ್ಯಗಳು ಸಮಾಜದ ಸಾಂಸ್ಕೃತಿಕ, ಧಾರ್ಮಿಕ ಮತ್ತು ಶೈಕ್ಷಣಿಕ ಕೇಂದ್ರಗಳಾಗಿ ಉಳಿಯಬೇಕು ಎಂಬುದು ಅನೇಕರ ಅಭಿಪ್ರಾಯವಾಗಿದೆ. ಇವು ಶಾಂತಿ ನೆಲೆಸುವ ತಾಣಗಳಾಗಿದ್ದು, ಶೈಕ್ಷಣಿಕ ಹಾಗೂ ಸಾಮಾಜಿಕ ಚಟುವಟಿಕೆಗಳಿಗೆ ಮೂಲ ಮಠ-ಮಾನ್ಯಗಳು, ಧರ್ಮಗುರುಗಳು ಯಥಾನುಸಾರ ಉಪದೇಶ ನೀಡಿ ನೈತಿಕ-ಮಾನವೀಯ ಮೌಲ್ಯಗಳನ್ನು ಕಟ್ಟಿಕೊಡುತ್ತಿದ್ದಾರೆ. ಧಾರ್ಮಿಕ ಜಾಗೃತಿಯು ಹೆಚ್ಚುತ್ತಿರುವಾಗ ಸಂಬಂಧಗಳು ಹದಗೆಡುವ ಪ್ರಶ್ನೆಯೇ ಉದ್ಬವಿಸುವುದಿಲ್ಲ ಎಂದರು.
ಮನೆಹಳ್ಳಿ ಮಠಾಧ್ಯಕ್ಷರಾದ ಶ್ರೀಶ್ರೀ ಮಹಾಂತಶಿವಲಿಂಗ ಸ್ವಾಮೀಜಿ ಪ್ರಸ್ತಾವಿಕವಾಗಿ ಮಾತನಾಡಿ ಶ್ರೀಕ್ಷೇತ್ರ ಅಭಿವೃದ್ದಿ ಹೊಂದುತ್ತಾ ಸಾಗಿ ಬರುತ್ತಿರುವ ಬಗ್ಗೆ ವಿವರಣೆ ನೀಡಿ ಮಹಾರಥೋತ್ಸವ ಆಗಮಿಸಿದ್ದ ಗಣ್ಯರು ಹಾಗೂ ಭಕ್ತಾಧಿಗಳನ್ನು ಸ್ವಾಗತಿಸಿದರು.
ಈ ಸಂದರ್ಭ ಶ್ರೀ ಕ್ಷೇತ್ರಕ್ಕೆ ಸಹಕಾರ ನೀಡಿದ ಗಣ್ಯರಿಗೆ ಸನ್ಮಾನ ನಡೆಯಿತು.
 ವೇದಿಕೆಯಲ್ಲಿ ಅರಮೇರಿ ಕಳಂಚೇರಿ ಮಠಾಧ್ಯಕ್ಷರಾದ ಶ್ರೀಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಕಲ್ಲುಮಠಾಧ್ಯಕ್ಷರಾದ ಶ್ರೀಶ್ರೀ ಮಹಾಂತ ಸ್ವಾಮೀಜಿ, ಕಿರಿಕೊಡ್ಲಿ ಮಠಾಧ್ಯಕ್ಷರಾದ ಶ್ರೀಶ್ರೀ ಸದಾಶಿವ ಸ್ವಾಮೀಜಿ, ಕೆಸತೂರು ಮಠಾಧ್ಯಕ್ಷರಾದ ಶ್ರೀಶ್ರೀ ಬಸವರಾಜೇಂದ್ರ ಸ್ವಾಮೀಜಿ, ಕೊಡಗು ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಕಾರ್ಯಪ್ಪ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಚಂದ್ರಶೇಖರ್, ಹಿರಿಯ ಸಾಹಿತಿ ಮೋಹನ್‌ಪಾಳೇಗಾರ್,ಬೆಮ್ಮತ್ತಿ ಸುರೇಶ್, ಶಕ್ತಿ ದಿನಪತ್ರಿಕೆ ಮುಖ್ಯ ಸಂಪಾದಕ ಅನಂತಶಯನ, ಚಲನ ಚಿತ್ರ ನಟ ಧರ್ಮ,ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಲೋಕೇಶ್ ಸಾಗರ್, ಕೊಡಗು ವಿಶ್ವ ವಿಧ್ಯಾಲಯದ ಕನ್ನಡ ಉಪನ್ಯಾಸಕ ಜಮೀರ್ ಅಹಮದ್ ಇದ್ದರು. ಕಾರ್ಯಕ್ರಮದ ನಿರ್ವಹಣೆಯನ್ನು ಎಸ್ ಮಹೇಶ್ ವಹಿಸಿದ್ದರು.ಶಿಕ್ಷಕ ಬಸವರಾಜ್ ಕಾರ್ಯಕ್ರಮ ನಿರೂಪಿಸಿದರು.
ಸಾಂಸೃತಿಕ ವೇದಿಕೆಯಲ್ಲಿ ಭಕ್ತಿಗೀತೆಗಳು, ಶಾಸ್ರೀಯ ಸಂಗೀತ, ಭರತನಾಟ್ಯ, ಕೊಳಲುವಾದನ ಕಾರ್ಯಕ್ರಮ ನಡೆಯಿತು.
ಪ್ರತೀವರ್ಷದಂತೆ ಏಪ್ರಿಲ್ ತಿಂಗಳ ಹುಣ್ಣಿಮೆಯ ೨ನೇ ದಿನ ನಡೆಯುವ ೩ ದಿನಗಳ ದಾರ್ಮಿಕ ಆಚರಣೆಯಲ್ಲಿ ಸೂರ್ಯ ಚಂದ್ರ ಮಂಡಲೋತ್ಸವ, ಶ್ರೀಸ್ವಾಮಿಯ ಪಲ್ಲಕ್ಕಿ ಉತ್ಸವ, ಶ್ರೀ ವೀರಭದ್ರ ಸ್ವಾಮಿಯ ಕೆಂಡಕೊಂಡೋತ್ಸವಗಳು ನಡೆದು ಶನಿವಾರ ತಡರಾತಿ ಶ್ರದ್ಧಾಭಕ್ತಿಯಿಂದ ನಡೆದ ೧೪ ನೇ ವರ್ಷದ ಶ್ರೀ ಗುರುಸಿದ್ಧವೀರೇಶ್ವರ ಮಹಾರಥೋತ್ಸವ ಫಲ ಪುಷ್ಪಗಳಿಂದ ಅಲಂಕೃತ ರಥದಲ್ಲಿ ಶ್ರೀ ಸ್ವಾಮಿಯ ಪೀಟವನ್ನಿರಿಸಿ ಉತ್ಸವ ನಡೆಯಿತು.
ಕ್ಷೇತ್ರನಾಥ ಶ್ರೀ ವೀರಭದ್ರೇಶ್ವರ, ಶ್ರೀ ತಪೋವನೇಶ್ವರಿ, ಚಲುವರಾಯಸ್ವಾಮಿಯ ಉತ್ಸವ ಮೂರ್ತಿಗಳೊಂದಿಗೆ ಯಶಳೂರಿನ ನಂದಿದ್ವಜ, ವೀರಗಾಸೆ , ದುಗ್ಗಳ ಹೊತ್ತ ಮಹಿಳೆಯರು ಉತ್ಸವಕ್ಕೆ ಮೆರುಗು ತಂದರು, ಶ್ರೀ ವೃಷಭಲಿಂಗೇಶ್ವರಸ್ವಾಮಿಯವರ ಸನ್ನಿದಾನದಲ್ಲಿ ಮಹಾಮಂಗಳಾರತಿ ನಡೆುತು.
ಆಕಾಶದಲ್ಲಿ ವರ್ಣರಂಜಿತ ಪಟಾಕಿಗಳನ್ನು ಸಿಡಿಸಿ ಸಾವಿರಾರು ಭಕ್ತರ ಮೆಚ್ಚುಗೆಗಳಿಸಿದ್ದು ವಿಶೇಷವಾಗಿತ್ತು, ಉತ್ಸವದಲ್ಲಿ ಪಾಲ್ಗೋಂಡಿದ್ದ ಎಲ್ಲಾ ಭಕ್ತಾದಿಗಳಿಗೆ ಹೋಳಿಗೆ ಪಾಯಸ ಅನ್ನ ಪ್ರಸಾದ ಸಂತರ್ಪಣೆ ವ್ಯವಸ್ತೆ ಅಚ್ಚುಕಟ್ಟಾಗಿತ್ತು. ವಾಹನಗಳ ದಟ್ಟಣೆಯ ಸಂಚಾರ ವ್ಯವಸ್ಥೆಗೆ ಪೋಲೀಸ್ ಸಿಬ್ಭಂದಿಗಳು ಸೂಕ್ತ ವ್ಯವಸ್ಥೆಯೊಂದಿಗೆ ಕಾರ್ಯನಿರ್ವಹಿಸಿದ್ದರು.
Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಎಂಜಿನಿಯರ್‌ಗಳಿಗೆ ‘Er.’ ಪೂರ್ವಪ್ರತ್ಯಯ ಬಳಕೆಗೆ ಕರ್ನಾಟಕ ಸರ್ಕಾರದ ಅನುಮತಿ*

ಸೆಪ್ಟೆಂಬರ್ 16, 2026

*ಕ.ಸಾ.ಪ. ವತಿಯಿಂದ ಶಿರಂಗಾಲ ಕಾಲೇಜಿನಲ್ಲಿ ಮುಲ್ಲೇಂಗಡ ಬೇಬಿ ಚೋಂದಮ್ಮ ದತ್ತಿ ಉಪನ್ಯಾಸ; ಕಥೆಗಾರ್ತಿ ಕೊಡಗಿನ ಗೌರಮ್ಮ ಮಹಿಳಾ ಧ್ವನಿಯಾಗಿ ಮೂಡಿಬಂದವರು: ಬಿ.ಆರ್. ಸತ್ಯನಾರಾಯಣ*

ಸೆಪ್ಟೆಂಬರ್ 16, 2026

*ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ; ಡಾ. ರಾಜ್‌ಕುಮಾರ್ ಬಳಿಕ ಈ ಗೌರವಕ್ಕೆ ಭಾಜನರಾದ ಕನ್ನಡದ ಎರಡನೇ ನಟ*

ಸೆಪ್ಟೆಂಬರ್ 16, 2026

*ಕ.ಸಾ.ಪ. ವತಿಯಿಂದ ಶಿರಂಗಾಲ ಕಾಲೇಜಿನಲ್ಲಿ ಮುಲ್ಲೇಂಗಡ ಬೇಬಿ ಚೋಂದಮ್ಮ ದತ್ತಿ ಉಪನ್ಯಾಸ; ಕಥೆಗಾರ್ತಿ ಕೊಡಗಿನ ಗೌರಮ್ಮ ಮಹಿಳಾ ಧ್ವನಿಯಾಗಿ ಮೂಡಿಬಂದವರು: ಬಿ.ಆರ್. ಸತ್ಯನಾರಾಯಣ*

ಸೆಪ್ಟೆಂಬರ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ಸೆ.16: ಕನ್ನಡದ ಪ್ರಥಮ ಕಥೆಗಾರ್ತಿ ಕೊಡಗಿನ ಗೌರಮ್ಮ (1912–1939) ಅವರು ಆಧುನಿಕ ಕನ್ನಡ ಸಾಹಿತ್ಯದ ಆರಂಭಿಕ…

*ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ; ಡಾ. ರಾಜ್‌ಕುಮಾರ್ ಬಳಿಕ ಈ ಗೌರವಕ್ಕೆ ಭಾಜನರಾದ ಕನ್ನಡದ ಎರಡನೇ ನಟ*

ಸೆಪ್ಟೆಂಬರ್ 16, 2026

*ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್‌ಗೆ 18.97 ಲಕ್ಷ ರೂ. ನಿವ್ವಳ ಲಾಭ*

ಸೆಪ್ಟೆಂಬರ್ 16, 2026

*ದೊಡ್ಡಮಳ್ತೆ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*

ಸೆಪ್ಟೆಂಬರ್ 16, 2026

*ಪ್ರಜಾಪ್ರಭುತ್ವ ವ್ಯವಸ್ಥೆ ಪ್ರಪಂಚದಲ್ಲೇ ಅತ್ಯುನ್ನತ ಸ್ಥಾನದಲ್ಲಿದೆ: ಶಾಸಕ ಡಾ.ಮಂತರ್‌ಗೌಡ*

ಸೆಪ್ಟೆಂಬರ್ 16, 2026

*ದಕ್ಷಿಣ ವಲಯ ಹಾಕಿ ವಿಜೇತ ತಂಡಗಳಿಗೆ ಕೊಡಗು ವಿದ್ಯಾಲಯದಲ್ಲಿ ಅದ್ದೂರಿ ಸ್ವಾಗತ*

ಸೆಪ್ಟೆಂಬರ್ 16, 2026

*ಮೋದಿ ಅಭಿವೃದ್ಧಿ ಕಾರ್ಯಗಳ ಮೇಲೆ ಅಭಿಮಾನ: ಕೊಡಗಿನಲ್ಲಿ ಸೆ.17ರಿಂದ ಅ.17ರವರೆಗೆ ಬಿಜೆಪಿ ಸೇವಾ ಸಂಕಲ್ಪ ಅಭಿಯಾನ*

ಸೆಪ್ಟೆಂಬರ್ 16, 2026

*ಅ.17ರಂದು ತಲಕಾವೇರಿಯಲ್ಲಿ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ : ರಾತ್ರಿ 7.50ಕ್ಕೆ ಸಲ್ಲುವ ಮೇಷ ಲಗ್ನದಲ್ಲಿ*

ಸೆಪ್ಟೆಂಬರ್ 16, 2026

*ಶ್ರೀದೇವಿ ಚಾರಿಟೇಬಲ್ ಟ್ರಸ್ಟ್ ನ ಪ್ರಥಮ ವಾರ್ಷಿಕ ಮಹಾಸಭೆ : ವಿದ್ಯಾರ್ಥಿಗಳಿಗೆ ಪ್ರೋತ್ಸಾಹ*

ಸೆಪ್ಟೆಂಬರ್ 16, 2026

*ಸುಂಟಿಕೊಪ್ಪದಲ್ಲಿ ಗೌರಿ ಗಣೇಶೋತ್ಸವ: ಮುಸ್ಲಿಂ ಬಾಂಧವರಿಂದ ಸಿಹಿ-ತಂಪುಪಾನೀಯ ವಿತರಣೆ*

ಸೆಪ್ಟೆಂಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.