Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆ ಬಾಲಕಿಯರ ನಿಲಯದಲ್ಲಿ ಡಾ. ಬಾಬು ಜಗಜೀವನ್ ರಾಂ ಅವರ ಜನ್ಮ ದಿನಾಚರಣೆ*
  • *ಸುಂಟಿಕೊಪ್ಪದಲ್ಲಿ ಕುಟುಂಬ ಸಮ್ಮಿಲನ ಕಾರ್ಯಕ್ರಮ : ಮಾದಕವಸ್ತು ಸೇವನೆ ತಡೆಗಟ್ಟಲು ಶಾಸಕ ಡಾ.ಮಂತರ್ ಗೌಡ ಕರೆ*
  • *ಕೊಡಗರಹಳ್ಳಿ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಭೈತೂರಪ್ಪ ಪೊವ್ವೆದಿ ಬಸವೇಶ್ವರ ದೇವರ ವಾರ್ಷಿಕ ಉತ್ಸವ*
  • *ಮೇ 7 ರಿಂದ ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿ*
  • *ಏ.8 ರಂದು ಯಕ್ಷಗಾನ ಪ್ರಸಂಗಗಳ ಪ್ರದರ್ಶನ*
  • *ಭಾಗಮಂಡಲ : ಏ.8 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*
  • *ಮಾನಂದವಾಡಿ ಚುನಾವಣೆ : ರೂಪುರೇಷೆ ಬಗ್ಗೆ ಚರ್ಚಿಸಿದ ಶಾಸಕ ಎ.ಎಸ್.ಪೊನ್ನಣ್ಣ*
  • *ಏ.10 ರಂದು ದಶಮಂಟಪ ಪ್ರೀಮಿಯರ್ ಲೀಗ್ ಟೆನ್ನಿಸ್ ಬಾಲ್ ಕ್ರಿಕೆಟ್ : ಟ್ರೋಫಿ ಅನಾವರಣ*
  • ಜೇನುಬೇಲಿ ಚಿತ್ರದ ಚಿತ್ರೀಕರಣಕ್ಕೆ ಚಾಲನೆ : ಕನ್ನಡಿಗರು ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡಿ : ಎಂ.ಪಿ.ಅಪ್ಪಚ್ಚು ರಂಜನ್ ಕರೆ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.6 ರ ವಿಜೇತ ತಂಡಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸುಂಟಿಕೊಪ್ಪದಲ್ಲಿ ಕುಟುಂಬ ಸಮ್ಮಿಲನ ಕಾರ್ಯಕ್ರಮ : ಮಾದಕವಸ್ತು ಸೇವನೆ ತಡೆಗಟ್ಟಲು ಶಾಸಕ ಡಾ.ಮಂತರ್ ಗೌಡ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸುಂಟಿಕೊಪ್ಪದಲ್ಲಿ ಕುಟುಂಬ ಸಮ್ಮಿಲನ ಕಾರ್ಯಕ್ರಮ : ಮಾದಕವಸ್ತು ಸೇವನೆ ತಡೆಗಟ್ಟಲು ಶಾಸಕ ಡಾ.ಮಂತರ್ ಗೌಡ ಕರೆ*

ಏಪ್ರಿಲ್ 6, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ ಏ.6 NEWS DESK : ಮಾದಕ ವಸ್ತುಗಳ ಸೇವನೆಯನ್ನು ಸಂಪೂರ್ಣ ನಿರ್ಮೂಲನೆಗೊಳಿಸಲು ಪ್ರತಿಯೊಬ್ಬರು ಪಣತೊಡಬೇಕು ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಕರೆ ನೀಡಿದ್ದಾರೆ. ಸುಂಟಿಕೊಪ್ಪ ಸಲಾಫಿ ಮಸೀದಿ ಆವರಣದಲ್ಲಿ ಕೊಡಗು ಜಿಲ್ಲಾ ವಿಸ್‍ಡಂ ಇಸ್ಲಾಮಿಕ್ ಆರ್ಗನೈಷಶನ್ ಸಂಸ್ಥೆ ಕೊಡಗು ಜಿಲ್ಲಾ ಘಟಕದ ವತಿಯಿಂದ ಏರ್ಪಡಿಸಲಾಗಿದ್ದ ಕುಟುಂಬ ಸಮ್ಮಿಲನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು ಸ್ವತಃ ವೈಧ್ಯನಾಗಿರುವ ನಾನು ಮಾದಕ ವಸ್ತುಗಳ ಸೇವನೆ ಮತ್ತು ದುಷ್ಪಾರಿಣಾಮಗಳಿಂದ ಚಿಕಿತ್ಸೆಗೆ ಒಳಗಾಗಿರುವ ಮತ್ತು ಆಸ್ಪತ್ರೆಗೆ ಸೇರಿರುವ ಅನೇಕರನ್ನು ನೋಡಿದ್ದೇನೆ. ದುರಾದೃಷ್ಟಕರ ವಿಚಾರವೆಂದರೇ ಒಂದು ಸಲ ರುಚಿ ನೋಡೊಣ ಎಂದು ಮಾದಕ ವಸ್ತುಗಳ ಸೇವನೆಯನ್ನು ಆರಂಭಿಸಿದರೆ ನಂತರ ಮಾದಕ ವಸ್ತುಗಳೇ ನಮ್ಮನ್ನು ತಿಂದು ಹಾಕುತ್ತದೆ ಎಂದರು. ಮಾದಕ ವಸ್ತುಗಳ ಚಟ ದೈಹಿಕವಾಗಿ ಮತ್ತು ಮಾನಸಿಕವಾಗಿ ನಮ್ಮನ್ನು ಅವುಗಳ ದಾಸರನ್ನಾಗಿ ಮಾಡಿ ಬಿಡುತ್ತದೆ. ಸಣ್ಣದಾಗಿ ಶುರುವಾಗುವ ಈ ಅಭ್ಯಾಸವು ಬೃಹತ್ ಕಾಯಿಲೆಯಾಗಿ ಮಾರ್ಪಟ್ಟು ಕುಟುಂಬ ಕಂಟಕವಾಗಿ ಪರಿಣಮಿಸುತ್ತದೆ. ಪೋಷಕರು, ಶಿಕ್ಷಕರು, ಸಮಾಜ ಸೇವಕರು ಮತ್ತು ಪೊಲೀಸರು ಈ ಬಗ್ಗೆ ತೀವ್ರ ನಿಗಾವಹಿಸಬೇಕೆಂದು ಕರೆ ನೀಡಿದರು. ಮಾದಕ ವಸ್ತುಗಳ ಸೇವನೆ ಪತ್ತೆ ಹಚ್ಚುವಿಕೆ ಹಾಗೂ ಕಾನೂನಿನ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ತನ್ನ ಸಂಪೂರ್ಣ ಸಹಕಾರ ಇದೆ ಎಂದು ಡಾ.ಮಂತರ್ ಗೌಡ ನುಡಿದರು. ಕುಶಾಲನಗರ ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ, ಈ ಹಿಂದೆ ಅವಿಭಕ್ತ ಕುಟುಂಬಗಳಿದ್ದು, ಮಕ್ಕಳು ಮನೆ ಮಂದಿ ಎಲ್ಲಾರೂ ಒಟ್ಟಾಗಿ ಕುಟುಂಬದ ಸಾಮರಸ್ಯವನ್ನು ಎತ್ತಿ ಹಿಡಿಯುತ್ತಿದ್ದರು. ಆದರೆ ಪ್ರಸ್ತುತ ದಿನಗಳಲ್ಲಿ ಸಾಮಾನ್ಯ ಬದಲಾವಣೆಗಳನ್ನು ಕಾಣುತ್ತಿದ್ದು, ಈಗಿನ ಮಕ್ಕಳು ವಿದ್ಯಾಭ್ಯಾಸ ಮುಗಿಸಿದ ಅಥವಾ ಆಗ ತಾನೇ ಕೆಲಸಕ್ಕೆ ಸೇರಿದವರು ನಾವು ನಮಗೆ ಇಷ್ಟ ಬಂದ ಯುವಕ ಅಥವಾ ಯುವತಿಯೊಂದಿಗೆ ಸಂಬಂಧದಲ್ಲಿದ್ದೇವೆ ಎಂದು ಹೇಳುತ್ತಿದ್ದಾರೆ. ಸಮಾಜ ಎಲ್ಲಿಗೆ ತಲುಪಿದೆಯೆಂದು ನಾವು ಆಲೋಚಿಸಬೇಕಾಗಿದೆ ಎಂದು ಹೇಳಿದರು. ತಂದೆ ತಾಯಿಗಳು ತಮ್ಮ ಮಕ್ಕಳನ್ನು ತಪ್ಪಸ್ಸಿನಂತೆ ಸಾಕುತ್ತಾರೆ. ತಾವು ಸಾಧಿಸಲಾಗದನ್ನು ತಮ್ಮ ಮಕ್ಕಳು ಸಾಧಿಸಲೆಂದು ಅವರನ್ನು ಹೆಗಲ ಮೇಲೆ ಹೊತು ನಡೆಯುತ್ತಾರೆ ಆದರೆ ಮಕ್ಕಳು ತಂದೆ ತಾಯಿಗಳ ಕನಸ್ಸಿಗೆ ಕೊಳ್ಳಿಇಟ್ಟು ಮಾದಕ ವಸ್ತುಗಳ ಜಾಲಕ್ಕೆ ಸಿಲುಕಿ ಭವಿಷ್ಯವನ್ನೇ ನಾಶ ಮಾಡಿಕೊಳ್ಳುತ್ತಾರೆಂದು ವಿ.ಪಿ.ಶಶಿಧರ್ ಹೇಳಿದರು. ನಾವು ಸ್ವತಃ ಬದಲಾಗುವವರೆಗೆ ಸೃಷ್ಟಿಕರ್ತನು ಕೂಡ ನಮ್ಮನ್ನು ಬದಲಾಯಿಸುವುದಿಲ್ಲ ಎಂದು ಅವರು ಕಿವಿಮಾತು ಹೇಳಿದರು. ಕಾರ್ಯಕ್ರಮದಲ್ಲಿ ಉಸೈನ್ ಶಾಲಾಫಿ ಶಾರ್ಜ, ಶಿಯಾಬ್ ಎಡತ್ತಾರ, ಡಾ.ಅಬ್ದುಲಾ ಬಸಿಲ್, ಅನಿಲ್ ತಲಾಪಾಡಿ ಮುಖ್ಯ ಭಾಷಣಕಾರರಾಗಿ ಡ್ರಗ್ಸ್ ಮುಕ್ತರಾಗೋಣ, ನಮ್ಮ ಕುಟುಂಬಗಳನ್ನು ರಕ್ಷಿಸೋಣ ಎಂಬ ವಿಷಯದ ಮೇರೆ ಪ್ರವಚನಗಳನ್ನು ನೀಡಿದರು. ಕಾರ್ಯಕ್ರಮದ ಸಂಘಟಕರಾದ ಶಬ್ಬೀರ್, ಹೆಚ್.ಯು.ರಫೀಕ್‍ಖಾನ್ ಡಾ.ಮಂತರ್‍ಗೌಡ ಮತ್ತು ವಿ.ಪಿ.ಶಶಿಧರ್ ಅವರನ್ನು ಗೌರವಿಸಿದರು. ವೇದಿಕೆಯಲ್ಲಿ ವಿಸ್‍ಡಂ ಇಸ್ಲಮಿಕ್ ಆರ್ಗನೈಷಶನ್ ಕೊಡಗು ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಸ್ವಯಂ ಸೇವಕರು ಪಾಲ್ಗೊಂಡಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿರಾಜಪೇಟೆ ಬಾಲಕಿಯರ ನಿಲಯದಲ್ಲಿ ಡಾ. ಬಾಬು ಜಗಜೀವನ್ ರಾಂ ಅವರ ಜನ್ಮ ದಿನಾಚರಣೆ*

ಏಪ್ರಿಲ್ 6, 2026

*ಕೊಡಗರಹಳ್ಳಿ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಭೈತೂರಪ್ಪ ಪೊವ್ವೆದಿ ಬಸವೇಶ್ವರ ದೇವರ ವಾರ್ಷಿಕ ಉತ್ಸವ*

ಏಪ್ರಿಲ್ 6, 2026

*ಮೇ 7 ರಿಂದ ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿ*

ಏಪ್ರಿಲ್ 6, 2026

*ಸುಂಟಿಕೊಪ್ಪದಲ್ಲಿ ಕುಟುಂಬ ಸಮ್ಮಿಲನ ಕಾರ್ಯಕ್ರಮ : ಮಾದಕವಸ್ತು ಸೇವನೆ ತಡೆಗಟ್ಟಲು ಶಾಸಕ ಡಾ.ಮಂತರ್ ಗೌಡ ಕರೆ*

ಏಪ್ರಿಲ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ ಏ.6 NEWS DESK : ಮಾದಕ ವಸ್ತುಗಳ ಸೇವನೆಯನ್ನು ಸಂಪೂರ್ಣ ನಿರ್ಮೂಲನೆಗೊಳಿಸಲು ಪ್ರತಿಯೊಬ್ಬರು ಪಣತೊಡಬೇಕು ಎಂದು ಮಡಿಕೇರಿ ಕ್ಷೇತ್ರದ…

*ಕೊಡಗರಹಳ್ಳಿ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಭೈತೂರಪ್ಪ ಪೊವ್ವೆದಿ ಬಸವೇಶ್ವರ ದೇವರ ವಾರ್ಷಿಕ ಉತ್ಸವ*

ಏಪ್ರಿಲ್ 6, 2026

*ಮೇ 7 ರಿಂದ ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿ*

ಏಪ್ರಿಲ್ 6, 2026

*ಏ.8 ರಂದು ಯಕ್ಷಗಾನ ಪ್ರಸಂಗಗಳ ಪ್ರದರ್ಶನ*

ಏಪ್ರಿಲ್ 6, 2026

*ಭಾಗಮಂಡಲ : ಏ.8 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಏಪ್ರಿಲ್ 6, 2026

*ಮಾನಂದವಾಡಿ ಚುನಾವಣೆ : ರೂಪುರೇಷೆ ಬಗ್ಗೆ ಚರ್ಚಿಸಿದ ಶಾಸಕ ಎ.ಎಸ್.ಪೊನ್ನಣ್ಣ*

ಏಪ್ರಿಲ್ 6, 2026

*ಏ.10 ರಂದು ದಶಮಂಟಪ ಪ್ರೀಮಿಯರ್ ಲೀಗ್ ಟೆನ್ನಿಸ್ ಬಾಲ್ ಕ್ರಿಕೆಟ್ : ಟ್ರೋಫಿ ಅನಾವರಣ*

ಏಪ್ರಿಲ್ 6, 2026

ಜೇನುಬೇಲಿ ಚಿತ್ರದ ಚಿತ್ರೀಕರಣಕ್ಕೆ ಚಾಲನೆ : ಕನ್ನಡಿಗರು ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡಿ : ಎಂ.ಪಿ.ಅಪ್ಪಚ್ಚು ರಂಜನ್ ಕರೆ*

ಏಪ್ರಿಲ್ 6, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.6 ರ ವಿಜೇತ ತಂಡಗಳು*

ಏಪ್ರಿಲ್ 6, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.7 ರ ಪಂದ್ಯಗಳು*

ಏಪ್ರಿಲ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.