
ಮಡಿಕೇರಿ ಏ.11 NEWS DESK : ಪೊನ್ನಂಪೇಟೆ ತಾಲ್ಲೂಕು ಪಂಚಾಯಿತಿ ಸಾಮಥ್ರ್ಯ ಸೌಧದಲ್ಲಿ ಪೊನ್ನಂಪೇಟೆ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆಯು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷರಾದ ಪ್ರಶಾಂತ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಗೃಹಲಕ್ಷ್ಮಿ ಯೋಜನೆಯಡಿ ಪೊನ್ನಂಪೇಟೆ ತಾಲ್ಲೂಕಿನಲ್ಲಿ ಜನವರಿ ತಿಂಗಳವರೆಗೆ ಫಲಾನುಭವಿಗಳಿಗೆ ಹಣ ಜಮೆಯಾಗಿದ್ದು ಶೇ.95 ರಷ್ಟು ಸಾಧನೆಯಾಗಿದೆ ಎಂದು ಸಂಬಂಧಪಟ್ಟ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಗೃಹಜ್ಯೊತಿ ಯೋಜನೆಯಡಿ ಪೊನ್ನಂಪೇಟೆ ತಾಲ್ಲೂಕಿಗೆ 4 ಕೋಟಿ ಅನುದಾನದ ನಿರೀಕ್ಷೆಯಿದ್ದು ಕ್ರೀಯಾ ಯೋಜನೆಯಲ್ಲಿ ಸೇರ್ಪಡಿಸಿದ ಕಾಮಗಾರಿಗಳನ್ನು ಅನುದಾನ ಬಿಡುಗಡೆಯಾದ ನಂತರ ಕಾಮಗಾರಿ ಪ್ರಾರಂಭಿಸಲು ಸಭೆಯಲ್ಲಿ ತಿಳಿಸಲಾಯಿತು. ತಾಲ್ಲೂಕಿನಲ್ಲಿ ಲೈನ್‍ಮ್ಯಾನ್‍ಗಳ ಕೊರತೆಯಿದ್ದು, ಕೂಡಲೇ ಲೈನ್‍ಮ್ಯಾನ್ ನೇಮಕಾತಿ ಮಾಡಿ ಸ್ಥಳೀಯ ಸಮಸ್ಯೆಗಳನ್ನು ಬಗೆಹರಿಸಲು ಸಭೆಯಲ್ಲಿ ಕೋರಲಾಯಿತು. ಯುವನಿಧಿ ಯೋಜನೆಯಲ್ಲಿ ತಾಲ್ಲೂಕಿನಲ್ಲಿ 1728 ವಿದ್ಯಾರ್ಥಿಗಳು ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳುತ್ತಿರುವ ಕುರಿತು ಸಭೆಗೆ ಮಾಹಿತಿ ನೀಡಿದರು. ಈಗಾಗಲೇ ಉದ್ಯೋಗ ಪಡೆದುಕೊಂಡಿರುವ ಫಲಾನುವಿಗಳಿಗೂ ಹಣ ಜಮೆಯಾಗುತ್ತಿದ್ದು, ಈ ಬಗ್ಗೆ ಗಮನಹರಿಸುವಂತೆ ತಾಲ್ಲೂಕು ಗ್ಯಾರಂಟಿ ಯೊಜನಾ ಸಮಿತಿ ಸದಸ್ಯರು ಸಭೆಯ ಗಮನಕ್ಕೆ ತಂದರು. ಶಕ್ತಿ ಯೋಜನೆಯಡಿ ಪೊನ್ನಂಪೇಟೆ ತಾಲ್ಲೂಕಿನಲ್ಲಿ ಮಾರ್ಚ್ ತಿಂಗಳವರೆಗೆ ಶಕ್ತಿ ಯೋಜನೆಯ ಸದುಪಯೋಗವನ್ನು ಪಡೆದುಕೊಂಡಿರುವ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ವಿರಾಜಪೇಟೆ ತಾ.ಪಂ.ಇಒ ಅಪ್ಪಣ್ಣ, ಗ್ಯಾರಂಟಿ ಯೋಜನೆಯ ಸದಸ್ಯರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.









