ಬೀದರ, NEWS DESK ಏ.12:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2024ನೇ ಸಾಲಿನ ಜಿ.ನಾರಾಯಣಸ್ವಾಮಿ (ಅತ್ಯುತ್ತಮ ಗ್ರಾಮಾಂತರ ವರದಿ)ಪ್ರಶಸ್ತಿ ಇಸ್ಮಾಯಿಲ್ ಕಂಡಕರೆ ಅವರಿಗೆ ಬೀದರ್ ನಲ್ಲಿ ಭಾನುವರ ನಡೆದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರದಾನ ಮಾಡಲಾಯಿತು.
ಶಕ್ತಿ ಪತ್ರಿಕೆಯಲ್ಲಿ ಪ್ರಕಟಗೊಂಡ “ಅತ್ಯಾಡಿ ನಿವಾಸಿಗಳಿಗೆ ಮರದ ಪಾಲವೇ ಆಸರೆ” ಎಂಬ ವಿಶೇಷ ವರದಿಗೆ ಪ್ರಶಸ್ತಿ ಲಭಿಸಿದೆ.
ಬೀದರ್ ನಲ್ಲಿ ನಡೆದ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಸ್ಪೀಕರ್ ಯು.ಟಿ ಖಾದರ್,ವಿರೋಧ ಪಕ್ಷದ ನಾಯಕ ಆರ್.ಅಶೋಕ್,ಅರಣ್ಯ ಸಚಿವ ಈಶ್ವರ್ ಖಂಡ್ರೆ,ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮತ್ತಿತರರು ಇದ್ದರು.








