
ಮಡಿಕೇರಿ NEWS DESK ಏ.12 : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.12ರಂದು ಗೆಲುವು ಸಾಧಿಸಿದ ತಂಡಗಳು. *ಮೈದಾನ 1* ಬೊಳಂದoಡ ಮತ್ತು ಮುಂಡoಡ ತಂಡಗಳ ನಡುವಿನ ಪಂದ್ಯದಲ್ಲಿ ಮುಂಡoಡ 14 ರನ್ ಗಳಿಂದ ಗೆಲುವು ದಾಖಲಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಡoಡ ತಂಡ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 64 ರನ್ ಗಳನ್ನು ಸೇರಿಸಿತು. ಬೊಳಂದoಡ 6 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 50 ರನ್ ಗಳನ್ನು ಗಳಿಸಿ ಸೋಲೊಪ್ಪಿಕೊಂಡಿತು. ಪಡೆಯೆಟ್ಟಿರ ಮತ್ತು ಮಂದತoಡ ನಡುವಿನ ಪಂದ್ಯದಲ್ಲಿ ಮಂದತoಡ ತಂಡಕ್ಕೆ 9 ವಿಕೆಟ್ ಗಳ ಜಯ ಲಭಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಡೆಯೆಟ್ಟಿರ 6 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 38 ರನ್ ಗಳನ್ನು ಗಳಿಸಿತು. ಮಂದತoಡ 2 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 41 ರನ್ ಗಳನ್ನು ಸೇರಿಸಿ ಗೆಲುವಿನ ನಗು ಬೀರಿತು. ಕಲ್ಲೇಂಗಡ (ಬೇಳೂರು) ಮತ್ತು ಮಾದೆಯಂಡ (ಎಂ.ಬಾಡಗ) ತಂಡಗಳ ನಡುವಿನ ಪಂದ್ಯದಲ್ಲಿ ಮಾದೆಯಂಡ 17 ರನ್ ಗಳಿಂದ ಜಯ ದಾಖಲಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಮಾದೆಯಂಡ 6 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 87 ರನ್ ಗಳನ್ನು ಗಳಿಸಿತು. ಕಲ್ಲೇಂಗಡ 6 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 70 ರನ್ ಗಳನ್ನು ಸೇರಿಸಿ ಸೋಲು ಕಂಡಿತು. ಕೊಚ್ಚೆರ ಮತ್ತು ಕೈಪಟ್ಟಿರ ನಡುವಿನ ಪಂದ್ಯದಲ್ಲಿ ಕೊಚ್ಚೆರ ತಂಡಕ್ಕೆ 2 ರನ್ ಗಳ ಜಯ ಲಭಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಕೊಚ್ಚೆರ 6 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 39 ರನ್ ಗಳನ್ನು ಸೇರಿಸಿತು. ಕೈಪಟ್ಟಿರ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 37 ರನ್ ಗಳನ್ನು ಗಳಿಸಿ ಸೋಲೊಪ್ಪಿಕೊಂಡಿತು. ಅಜ್ಜಿಕುಟ್ಟಿರ ಮತ್ತು ಚೆನ್ನಪಂಡ ತಂಡಗಳ ನಡುವಿನ ಹಣಾಹಣಿಯಲ್ಲಿ ಅಜ್ಜಿಕುಟ್ಟಿರ 5 ವಿಕೆಟ್ ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಚೆನ್ನಪಂಡ 6 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 58 ರನ್ ಗಳನ್ನು ಗಳಿಸಿತು. ಅಜ್ಜಿಕುಟ್ಟಿರ ತಂಡ 4.5 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 62 ರನ್ ಗಳನ್ನು ಸೇರಿಸಿ ಗೆಲುವು ಸಾಧಿಸಿತು.
*ಮೈದಾನ 2* ಮೂಕೊಂಡ ಮತ್ತು ಮೇದುರ ತಂಡಗಳ ನಡುವಿನ ಪಂದ್ಯದಲ್ಲಿ ಮೂಕೊಂಡ 42 ರನ್ ಗಳಿಂದ ಜಯ ಸಾಧಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಮೂಕೊಂಡ 6 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 65 ರನ್ ಗಳನ್ನು ಸೇರಿಸಿತು. ಇದನ್ನು ಬೆನ್ನತ್ತಿದ ಮೇದುರ 6 ಓವರ್ ಗಳಲ್ಲಿ ಎಲ್ಲಾ ವಿಕೆಟ್ ಗಳನ್ನು ಕಳೆದುಕೊಂಡು ಕೇವಲ 23 ರನ್ ಗಳನ್ನು ಗಳಿಸಿ ಸೋಲು ಅನುಭವಿಸಿತು. ಕರವಟ್ಟಿರ ಮತ್ತು ಮಾಚೆಟ್ಟಿರ (ಬಾಳುಗೋಡು) ನಡುವಿನ ಪಂದ್ಯದಲ್ಲಿ ಮಾಚೆಟ್ಟಿರ 5 ರನ್ ಗಳ ಜಯ ದಾಖಲಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮಾಚೆಟ್ಟಿರ 6 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 52 ರನ್ ಗಳನ್ನು ಗಳಿಸಿತು. ಕರವಟ್ಟಿರ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 47 ರನ್ ಗಳನ್ನು ಸೇರಿಸಿ ಸೋಲು ಕಂಡಿತು.ಬೊಳ್ಳಚೆಟ್ಟಿರ ಮತ್ತು ಕೊಕ್ಕೆಂಗಡ ತಂಡಗಳ ನಡುವಿನ ಪಂದ್ಯದಲ್ಲಿ ಬೊಳ್ಳಚೆಟ್ಟಿರ 4 ರನ್ ಗಳ ಜಯ ಸಾಧಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಬೊಳ್ಳಚಟ್ಟೀರ 6 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 62 ರನ್ ಗಳನ್ನು ಸೇರಿಸಿತು. ಕೊಕ್ಕೆಂಗಡ 6 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 58 ರನ್ ಗಳನ್ನು ಗಳಿಸಿ ಸೋಲೊಪ್ಪಿಕೊಂಡಿತು.
ಪುಟ್ಟಿಚoಡ (ಬೊಳ್ಳರಿಮಾಡ) ಮತ್ತು ಬಾಚಿರ ನಡುವಿನ ಪಂದ್ಯದಲ್ಲಿ 13 ರನ್ ಗಳಿಂದ ಬಾಚಿರ ಗೆಲುವು ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಬಾಚಿರ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 69 ರನ್ ಗಳನ್ನು ಗಳಿಸಿತು. ಪುಟ್ಟಿಚಂಡ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 56 ರನ್ ಗಳನ್ನು ಸೇರಿಸಿ ಸೋಲು ಕಂಡಿತು.ಕೊಳುವoಡ ಮತ್ತು ಆಟ್ರಂಗಡ ತಂಡಗಳ ನಡುವಿನ ಪಂದ್ಯದಲ್ಲಿ ಆಟ್ರಂಗಡ 10 ವಿಕೆಟ್ ಗಳಿಂದ ಭರ್ಜರಿ ಗೆಲುವು ದಾಖಲಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕೊಳುವಂಡ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 38 ರನ್ ಗಳನ್ನು ಗಳಿಸಿತು. ಆಟ್ರಂಗಡ 2 ಓವರ್ ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ 39 ರನ್ ಗಳನ್ನು ಸೇರಿಸಿ ಜಯ ಸಾಧಿಸಿತು. ಮೋಟನಾಳಿರ ಮತ್ತು ಗಾಂಡoಗಡ ತಂಡಗಳ ನಡುವಿನ ಪಂದ್ಯದಲ್ಲಿ ಮೋಟನಾಳಿರ 62 ರನ್ ಗಳಿಂದ ಗೆಲುವು ದಾಖಲಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಮೋಟನಾಳಿರ 6 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 109 ರನ್ ಗಳನ್ನು ಸೇರಿಸಿತು. ಗಾಂಡAಗಡ 6 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 48 ರನ್ ಗಳನ್ನು ಮಾತ್ರ ಗಳಿಸಿ ಪಂದ್ಯವನ್ನು ಸೋತಿತು.
ಕೈಬಿಲಿರ ಮತ್ತು ಕುಟ್ಟಂಡ (ಅಮ್ಮತ್ತಿ) ನಡುವಿನ ಹಣಾಹಣಿಯಲ್ಲಿ ಕೈಬಿಲಿರ 51 ರನ್ ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕೈಬಿಲಿರ 6 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 89 ರನ್ ಗಳನ್ನು ಸೇರಿಸಿತು. ಕುಟ್ಟಂಡ 6 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ ಕೇವಲ 39 ರನ್ ಗಳನ್ನು ಗಳಿಸಿ ಸೋಲು ಅನುಭವಿಸಿತು.








