

ಮಡಿಕೇರಿ NEWS DESK ಏ.15 : ಮಡಿಕೇರಿ ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ಕಂಚಿಕಾಮಾಕ್ಷಿಯಮ್ಮ ದೇವಾಲಯದ 19ನೇ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಏ.18 ಮತ್ತು 19 ರಂದು ನಡೆಯಲಿದೆ. ಕೇರಳದ ಪಯ್ಯನೂರ್ ನ ಶ್ರೀ ಈಶ್ವರ ನಂಬೂದರಿ ಅವರ ನೇತೃತ್ವದಲ್ಲಿ ಎರಡು ದಿನಗಳ ವಿವಿಧ ಧಾರ್ಮಿಕ ವಿಧಿ ವಿಧಾನಗಳು ನೆರವೇರಲಿದೆ. ಏ.18 ರಂದು ಸಂಜೆ 6 ಗಂಟೆಗೆ ಆಚಾರ್ಯರ ಆಗಮನ, ದೇವಾಲಯದಲ್ಲಿ ಪುಣ್ಯಾಹ ಶುದ್ಧಿ, ದೇವಿ ಪೂಜೆ, ಸುದರ್ಶನ ಹೋಮ ಮತ್ತು ಪ್ರಸಾದ ವಿತರಣೆಯಾಗಲಿದೆ. ಏ.19 ರಂದು ಬೆಳಿಗ್ಗೆ 7 ಗಂಟೆಗೆ ಮಹಾ ಗಣಪತಿ ಹೋಮ, ಮಹಾ ಮೃತ್ಯುಂಜಯ ಹೋಮ, ಐಕ್ಯಮತ್ಯ ಸುಕ್ರದ ಹೋಮ ಪೂಜೆ, ಕಳಸ ಪೂಜೆ, ದೇವಿಗೆ ಅಭಿಷೇಕ, ಅಲಂಕಾರ ಪೂಜೆ ಹಾಗೂ ಮಹಾಪೂಜೆ ನೆರವೇರಲಿದೆ. ನಂತರ ಭಕ್ತರಿಗೆ ಅನ್ನಸಂತರ್ಪಣೆಯಾಗಲಿದೆ. ಅನ್ನಸoತರ್ಪಣೆಗೆ ಬೇಕಾಗುವ ಅಕ್ಕಿ, ಬೇಳೆ, ಬೆಲ್ಲ, ತರಕಾರಿ ಹಾಗೂ ಇತರ ಸಾಮಾಗ್ರಿಗಳನ್ನು ನೀಡಲಿಚ್ಛಿಸುವ ದಾನಿಗಳು 9482192248, 8095858864, 9731411523 ನ್ನು ಸಂಪರ್ಕಿಸಬಹುದಾಗಿದೆ. ಎರಡು ದಿನಗಳ ಕಾಲ ನಡೆಯುವ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಳ್ಳುವಂತೆ ಶ್ರೀ ಕಂಚಿಕಾಮಾಕ್ಷಿಯಮ್ಮ ದೇವಾಲಯ ಸಮಿತಿ ಮನವಿ ಮಾಡಿದೆ.









