Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಾಂಡರರ್ಸ್ ಶಿಬಿರ : ಕ್ರೀಡೆಯಲ್ಲಿ ಅಭ್ಯಾಸ ನಿರಂತರವಾಗಿರಬೇಕು :  ಒಲಂಪಿಯನ್ ಮನೆಯಪಂಡ ಸೋಮಯ್ಯ*
  • *ಚೆಟ್ಟಳ್ಳಿಯಲ್ಲಿ ವಿಜ್ಞಾನ ಆಧಾರಿತ ಪೋಷಕಾಂಶ ಜಾಗೃತಿ ಕಾರ್ಯಕ್ರಮ : ಸಾವಯವ ಕೃಷಿ, ಜೈವಿಕ ಕೀಟನಾಶಕ ಹಾಗೂ ಆಧುನಿಕ ತೋಟಗಾರಿಕಾ ತಂತ್ರಜ್ಞಾನ ಅಳವಡಿಕೆಗೆ ಒತ್ತು*
  • *ವಿರಾಜಪೇಟೆಯಲ್ಲಿ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ : ರಕ್ತದಾನವು ಸಾಮಾಜಿಕ ಜವಾಬ್ದಾರಿಯಾಗಿದೆ : ಡಾ.ಕರುಂಬಯ್ಯ*
  • *ಸಿದ್ದಾಪುರ : ಏ.18 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5729 ಪ್ರಕರಣಗಳು ಇತ್ಯರ್ಥ*
  • *ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಉದ್ಯೋಗಮೇಳ*
  • *ಕರ್ನಾಟಕ ಲೋಕಾಯುಕ್ತದ ನಾಲ್ಕು ದಶಕಗಳ ಸಾರ್ಥಕ ಪಯಣ : ಏ.18 ರಂದು ವಿಶೇಷ ಕಾರ್ಯಕ್ರಮ*
  • *ಏ.26ಕ್ಕೆ ಕಿವುಡರ ಸಂಘದ ಸಭೆ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮಹಿಳಾ ಕ್ರಿಕೆಟ್ ಆರಂಭ : ಏ.18 ರಂದು ನಡೆಯುವ ಪಂದ್ಯಗಳು*
  • *ಸೌಹಾರ್ದ ಕಪ್ ಕ್ರಿಕೆಟ್ : ಮೀಡಿಯಾ ಸೂಪರ್ ಕಿಂಗ್ಸ್ ಚಾಂಪಿಯನ್, ಕಾವೇರಿ ಮೀಡಿಯಾ ರನ್ನರ್ಸ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕರ್ನಾಟಕ ಲೋಕಾಯುಕ್ತದ ನಾಲ್ಕು ದಶಕಗಳ ಸಾರ್ಥಕ ಪಯಣ : ಏ.18 ರಂದು ವಿಶೇಷ ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

*ಕರ್ನಾಟಕ ಲೋಕಾಯುಕ್ತದ ನಾಲ್ಕು ದಶಕಗಳ ಸಾರ್ಥಕ ಪಯಣ : ಏ.18 ರಂದು ವಿಶೇಷ ಕಾರ್ಯಕ್ರಮ*

ಏಪ್ರಿಲ್ 17, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಬೆಂಗಳೂರು, ಏ.17 NEWS DESK :  ಭ್ರಷ್ಟಾಚಾರ ನಿರ್ಮೂಲನೆ ಮತ್ತು ಆಡಳಿತ ಸುಧಾರಣೆಯಲ್ಲಿ ಮಹತ್ತರ ಪಾತ್ರ ವಹಿಸಿರುವ ‘ಕರ್ನಾಟಕ ಲೋಕಾಯುಕ್ತ’ ಸಂಸ್ಥೆಯು ತನ್ನ ಯಶಸ್ವಿ ನಾಲ್ಕು ದಶಕಗಳ ಪಯಣವನ್ನು ಪೂರೈಸಿದ್ದು, ಈ ಅಂಗವಾಗಿ 2026ರ ಏಪ್ರಿಲ್ 18, ಶನಿವಾರದಂದು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಉದ್ಘಾಟನೆ ನೆರವೇರಿಸಲಿದ್ದಾರೆ. ಸುಪ್ರೀಂ ಕೋರ್ಟ್‍ನ ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಅವರು ಗೌರವ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಕರ್ನಾಟಕದ ಲೋಕಾಯುಕ್ತರಾದ ಬಿ.ಎಸ್. ಪಾಟೀಲ್, ಉಪಲೋಕಾಯುಕ್ತರುಗಳಾದ ಕೆ.ಎನ್. ಫಣೀಂದ್ರ ಮತ್ತು ಬಿ. ವೀರಪ್ಪ ಅವರ ಘನ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮವು ಜರುಗಲಿದೆ. ಈ ಸಂದರ್ಭದಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಅವರು ಲೋಕಾಯುಕ್ತ ನಿಯತಕಾಲಿಕೆಯನ್ನು ಬಿಡುಗಡೆ ಮಾಡುವ ಜೊತೆಗೆ ಚುನಾಯಿತ ಪ್ರತಿನಿಧಿಗಳ ಆಸ್ತಿ ಮತ್ತು ಹೊಣೆಗಾರಿಕೆಗಳ ಹೊಸ ಪೋರ್ಟಲ್ ಹಾಗೂ ಆನ್‍ಲೈನ್ ತನಿಖಾ ಮಾಡ್ಯೂಲ್‍ಗೆ ಚಾಲನೆ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ಮಾಜಿ ಲೋಕಾಯುಕ್ತರು ಮತ್ತು ಉಪಲೋಕಾಯುಕ್ತರನ್ನು ಸನ್ಮಾನಿಸಲಾಗುವುದು. ಸಭಾ ಕಾರ್ಯಕ್ರಮದ ನಂತರ ಸಂಜೆ 4:30 ರಿಂದ 6:00 ರವರೆಗೆ ವಿಶೇಷ ವಿಚಾರಗೋಷ್ಠಿಗಳು ನಡೆಯಲಿದ್ದು, ನಂತರ ಭ್ರಷ್ಟಾಚಾರದ ವಿರುದ್ಧದ ಹೋರಾಟ ಕುರಿತು ವಿವಿಧ ಗೋಷ್ಠಿಗಳು ನಡೆಯಲಿವೆ. ಭ್ರಷ್ಟಾಚಾರ ಮತ್ತು ದುರಾಡಳಿತ ವಿರುದ್ಧ ಹೋರಾಟದ ಬಗ್ಗೆ ನಿವೃತ್ತ ನ್ಯಾಯಮೂರ್ತಿಗಳಾದ ಬಿ.ಎಸ್. ಪಾಟೀಲ್, ಲೋಕಾಯುಕ್ತ ಕಾಯ್ದೆಯಡಿ ಕುಂದುಕೊರತೆಗಳ ಪರಿಹಾರ ವಿಷಯದ ಮೇಲೆ ನಿವೃತ್ತ ನ್ಯಾಯಮೂರ್ತಿಗಳಾದ ಕೆ.ಎನ್. ಫಣೀಂದ್ರ ಹಾಗೂ ಭ್ರಷ್ಟಾಚಾರ ತಡೆಗಟ್ಟುವುದು ಹೇಗೆ? ಎಂಬುದರ ಬಗ್ಗೆ ನಿವೃತ್ತ ನ್ಯಾಯಮೂರ್ತಿಗಳಾದ ಬಿ. ವೀರಪ್ಪ ಅವರು ವಿಚಾರಗೋಷ್ಠಿ ನಡೆಲಿಸಲಿದ್ದಾರೆ. ಕರ್ನಾಟಕ ಲೋಕಾಯುಕ್ತ ಸಂಸ್ಥೆಯು ತನ್ನ ಅರ್ಥಪೂರ್ಣ ಹಾಗೂ ಅವಿರತ ಸೇವೆಯ 40 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ್ದು, ಈ ಸುದೀರ್ಘ ಅವಧಿಯಲ್ಲಿ ಸಂಸ್ಥೆಯು ಹಲವಾರು ಸವಾಲುಗಳನ್ನು ಎದುರಿಸಿದ್ದರೂ ಸಹ, ಸಾರ್ವಜನಿಕ ಸೇವೆಯಲ್ಲಿನ ಭ್ರಷ್ಟಾಚಾರ, ಸ್ವಜನಪಕ್ಷಪಾತ ಹಾಗೂ ಆಡಳಿತ ದುರುಪಯೋಗದ ವಿರುದ್ಧದ ಹೋರಾಟದಲ್ಲಿ ಸದಾ ಸ್ಥಿತಪ್ರಜ್ಞವಾಗಿ ಕಾರ್ಯ ನಿರ್ವಹಿಸಿಕೊಂಡು ಬಂದಿದೆ. ಸಮಾಜದಲ್ಲಿ ಭ್ರಷ್ಟಾಚಾರವು ಭಯಾನಕ ರೀತಿಯಲ್ಲಿ ಬೆಳೆಯುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಇದನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಸಾಧ್ಯವಿಲ್ಲ ಎಂಬ ಟೀಕೆಗಳಿದ್ದರೂ ಸಹ, ಧನಾತ್ಮಕ ಚಿಂತನೆ ಹಾಗೂ ಪರಿಶ್ರಮದಿಂದ ಭಷ್ಟಾಚಾರವನ್ನು ಹತ್ತಿಕ್ಕಬಹುದು ಎಂಬ ವಿಶ್ವಾಸವನ್ನು ಸಂಸ್ಥೆಯು ಮೂಡಿಸಿದೆ. ಜೀವನದ ಹಾದಿಯಲ್ಲಿ ಬರುವ ಕಠಿಣ ಸವಾಲುಗಳನ್ನು ಧೈರ್ಯ ಮತ್ತು ತಾಳ್ಮೆಯಿಂದ ಎದುರಿಸಿದಾಗ ಮಾತ್ರ ಯಶಸ್ಸು ಸಾಧ್ಯ. ಆಮಿಷಗಳಿಗೆ ಒಳಗಾಗದ, ಅಧಿಕಾರದ ಆಸೆಗೆ ಮಣಿಯದ ಮತ್ತು ದೃಢ ಸಂಕಲ್ಪವುಳ್ಳ ಪ್ರಾಮಾಣಿಕ ವ್ಯಕ್ತಿಗಳ ಅಗತ್ಯತೆ ಇಂದು ಹೆಚ್ಚಿದೆ. ಸಾರ್ವಜನಿಕ ಹಿತಾಸಕ್ತಿಯೇ ಪರಮ ಗುರಿಯಾಗಿಸಿಕೊಂಡು ಕೆಲಸ ಮಾಡುವ ವ್ಯಕ್ತಿಗಳನ್ನು ನಾವು ಪ್ರೋತ್ಸಾಹಿಸಬೇಕಿದೆ. ಎಂತಹದೇ ನಿರಾಸೆ ಎದುರಾದರೂ ಶಾಂತ ಮತ್ತು ಸ್ಥಿರವಾದ ದೃಢತೆಯೊಂದಿಗೆ ಭ್ರಷ್ಟಾಚಾರದ ವಿರುದ್ಧದ ಹೋರಾಟ ಮುಂದುವರಿಯಬೇಕು. ಒಟ್ಟಾರೆಯಾಗಿ, ಪ್ರಾಮಾಣಿಕ ವ್ಯಕ್ತಿಗಳನ್ನು ಬೆಳೆಸುವಲ್ಲಿ ನಾವು ವಿಫಲವಾದರೆ ಅನ್ಯಾಯವು ಗೆದ್ದು, ನ್ಯಾಯವು ಮರೆಯಾಗುವ ಅಪಾಯವಿದೆ ಎಂದು ಸಂಸ್ಥೆಯು ಎಚ್ಚರಿಸಿದೆ. ಸವಾಲುಗಳೇ ವ್ಯಕ್ತಿಯನ್ನು ಪರಿಪೂರ್ಣಗೊಳಿಸುತ್ತವೆ ಎಂಬ ಧ್ಯೇಯವಾಕ್ಯದೊಂದಿಗೆ ಲೋಕಾಯುಕ್ತವು ನಾಲ್ಕು ದಶಕಗಳನ್ನು ದಾಟಿ ಮುಂದಿನ ಹೆಜ್ಜೆಯನ್ನು ಇಡುತ್ತಿದೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಾಂಡರರ್ಸ್ ಶಿಬಿರ : ಕ್ರೀಡೆಯಲ್ಲಿ ಅಭ್ಯಾಸ ನಿರಂತರವಾಗಿರಬೇಕು :  ಒಲಂಪಿಯನ್ ಮನೆಯಪಂಡ ಸೋಮಯ್ಯ*

ಏಪ್ರಿಲ್ 17, 2026

*ಚೆಟ್ಟಳ್ಳಿಯಲ್ಲಿ ವಿಜ್ಞಾನ ಆಧಾರಿತ ಪೋಷಕಾಂಶ ಜಾಗೃತಿ ಕಾರ್ಯಕ್ರಮ : ಸಾವಯವ ಕೃಷಿ, ಜೈವಿಕ ಕೀಟನಾಶಕ ಹಾಗೂ ಆಧುನಿಕ ತೋಟಗಾರಿಕಾ ತಂತ್ರಜ್ಞಾನ ಅಳವಡಿಕೆಗೆ ಒತ್ತು*

ಏಪ್ರಿಲ್ 17, 2026

*ವಿರಾಜಪೇಟೆಯಲ್ಲಿ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ : ರಕ್ತದಾನವು ಸಾಮಾಜಿಕ ಜವಾಬ್ದಾರಿಯಾಗಿದೆ : ಡಾ.ಕರುಂಬಯ್ಯ*

ಏಪ್ರಿಲ್ 17, 2026

*ಚೆಟ್ಟಳ್ಳಿಯಲ್ಲಿ ವಿಜ್ಞಾನ ಆಧಾರಿತ ಪೋಷಕಾಂಶ ಜಾಗೃತಿ ಕಾರ್ಯಕ್ರಮ : ಸಾವಯವ ಕೃಷಿ, ಜೈವಿಕ ಕೀಟನಾಶಕ ಹಾಗೂ ಆಧುನಿಕ ತೋಟಗಾರಿಕಾ ತಂತ್ರಜ್ಞಾನ ಅಳವಡಿಕೆಗೆ ಒತ್ತು*

ಏಪ್ರಿಲ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಚೆಟ್ಟಳ್ಳಿ ಏ.17 NEWS DESK : ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆಯ ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕ ಕೇಂದ್ರ, ಚೆಟ್ಟಳ್ಳಿಯಲ್ಲಿ ವಿಜ್ಞಾನ…

*ವಿರಾಜಪೇಟೆಯಲ್ಲಿ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ : ರಕ್ತದಾನವು ಸಾಮಾಜಿಕ ಜವಾಬ್ದಾರಿಯಾಗಿದೆ : ಡಾ.ಕರುಂಬಯ್ಯ*

ಏಪ್ರಿಲ್ 17, 2026

*ಸಿದ್ದಾಪುರ : ಏ.18 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಏಪ್ರಿಲ್ 17, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5729 ಪ್ರಕರಣಗಳು ಇತ್ಯರ್ಥ*

ಏಪ್ರಿಲ್ 17, 2026

*ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಉದ್ಯೋಗಮೇಳ*

ಏಪ್ರಿಲ್ 17, 2026

*ಕರ್ನಾಟಕ ಲೋಕಾಯುಕ್ತದ ನಾಲ್ಕು ದಶಕಗಳ ಸಾರ್ಥಕ ಪಯಣ : ಏ.18 ರಂದು ವಿಶೇಷ ಕಾರ್ಯಕ್ರಮ*

ಏಪ್ರಿಲ್ 17, 2026

*ಏ.26ಕ್ಕೆ ಕಿವುಡರ ಸಂಘದ ಸಭೆ*

ಏಪ್ರಿಲ್ 17, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮಹಿಳಾ ಕ್ರಿಕೆಟ್ ಆರಂಭ : ಏ.18 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 17, 2026

*ಸೌಹಾರ್ದ ಕಪ್ ಕ್ರಿಕೆಟ್ : ಮೀಡಿಯಾ ಸೂಪರ್ ಕಿಂಗ್ಸ್ ಚಾಂಪಿಯನ್, ಕಾವೇರಿ ಮೀಡಿಯಾ ರನ್ನರ್ಸ್*

ಏಪ್ರಿಲ್ 17, 2026

*ಕಸದ ವಾಹನದಲ್ಲಿ ಆಲಂ ಮತ್ತು ಬ್ಲೀಚಿಂಗ್ ಪೌಡರ್ ಸಾಗಾಟ : ಮಡಿಕೇರಿ ಬ್ಲಾಕ್ ಮತ್ತು ಯೂತ್ ಕಾಂಗ್ರೆಸ್ ಆರೋಪ*

ಏಪ್ರಿಲ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.