Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶ್ರದ್ಧಾಭಕ್ತಿಯಿಂದ ಜರುಗಿದ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಪ್ರತಿಷ್ಠಾ ವರ್ಧಂತಿ ಮಹೋತ್ಸವ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶ್ರದ್ಧಾಭಕ್ತಿಯಿಂದ ಜರುಗಿದ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಪ್ರತಿಷ್ಠಾ ವರ್ಧಂತಿ ಮಹೋತ್ಸವ*

ಏಪ್ರಿಲ್ 21, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಮಾ.21 NEWS DESK : ಬೇಟೋಳಿ ಗ್ರಾಮದ ರಾಮನಗರದ ಶ್ರೀ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮಹೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ಪ್ರತಿಷ್ಠಾ ಮಹೋತ್ಸವದ ಅಂಗವಾಗಿ ದೇವಾಲಯದಲ್ಲಿ ಶ್ರೀ ಗಣಪತಿ ಹೋಮ, ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಮಹಾ ಚಂಡಿಕಾ ಹೋಮ ನೆರವೇರಿತು. ದೇವಸ್ಥಾನದಲ್ಲಿ ಹಬ್ಬದ ಹಿಂದಿನ ದಿವಸವೇ ಸಂಜೆ ಅರ್ಚಕರು ವಿಶೇಷ ಪ್ರಾರ್ಥನೆಯೊಂದಿಗೆ ಪಾರಾಯಣವನ್ನು ನಡೆಸಿದರು. ಮಹೋತ್ಸವದ ದಿವಸ ಬೆಳಿಗ್ಗೆ ದೇವಸ್ಥಾನದ ಪ್ರಧಾನ ಅರ್ಚಕರಾದ ವಿಶ್ವನಾಥ್ ಭಟ್ ಅವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾದವು. ದೇವಸ್ಥಾನದ ಆವರಣದಲ್ಲಿರುವ ಶ್ರೀ ಗಣಪತಿ, ಶ್ರೀ ಅಯ್ಯಪ್ಪ ಸ್ವಾಮಿ, ಶ್ರೀ ನಾಗ ಹಾಗೂ ಶ್ರೀ ವನದುರ್ಗೆ ದೇವರುಗಳಿಗೆ ವಿಶೇಷ ಪೂಜೆಯನ್ನು ಅರ್ಚಕರು ಸಲ್ಲಿಸಿದರು. ನಂತರ ಮಹಾ ಗಣಪತಿ ಹೋಮವನ್ನು ನೆರವೇರಿಸಲಾಯಿತು. ಹೂವಿನ ಅಲಂಕೃತ ಮಂಟಪದಲ್ಲಿ ಶ್ರೀ ಸತ್ಯನಾರಾಯಣ ಸ್ವಾಮಿಯ ಫೋಟೋವನ್ನು ಪ್ರತಿಷ್ಠಾಪಿಸಿ ಪೂಜೆಯನ್ನು ನೆರವೇರಿಸಲಾಯಿತು. ಅದರೊಟ್ಟಿಗೆ ಮಹಾ ಚಂಡಿಕಾ ಹೋಮದ ಆಚರಣೆಯ ಧಾರ್ಮಿಕ ಕಾರ್ಯಕ್ರಮಗಳು ಜರುಗಿತು. ಅರ್ಚಕರು ಸತ್ಯನಾರಾಯಣ ಸ್ವಾಮಿಗೆ ಸಂಕಲ್ಪ ಪೂಜೆ,ಅಲಂಕಾರ ಪೂಜೆ, ಪಂಚಾಮೃತ ಅಭಿಷೇಕ, ಕುಂಕುಮಾರ್ಚನೆ ಸೇವೆಯನ್ನು ನಡೆಸಿದರು. ಮಹಾ ಚಂಡಿಕಾ ಹೋಮವನ್ನು ಸಂಕಲ್ಪ, ಪ್ರಾರ್ಥನೆ,ಪಾರಾಯಣ, ಶ್ರೀ ದೇವಿ ಶ್ಲೋಕ ಪಠಣ, ಪುಷ್ಪಾರ್ಚನೆ, ಕುಂಕುಮಾರ್ಚನೆ, ಅಭಿಷೇಕ ಮೊದಲಾದ ಸೇವೆಗಳಿಂದ ನೆರವೇರಿಸಲಾಯಿತು. ದಕ್ಷಿಣ ಕನ್ನಡದ ಭರತನಾಟ್ಯ ಕಲಾವಿದೆ ಸುಷ್ಮಾ ಎಸ್ ನಾಯಕ್ ರವರಿಂದ ಅಷ್ಟಾವಧನ ಸೇವೆಯ ನೃತ್ಯವು ನೆರವೇರಿತು. ಶ್ರೀ ವಿನಾಯಕ ಮಹಿಳಾ ಭಜನಾ ಮಂಡಳಿಯ ವತಿಯಿಂದ ಭಜನೆ, ರುದ್ರಂ ಚಂಡೆ ಬಳಗದವರಿಂದ ಚಂಡೆ ಸೇವೆ ಹಾಗೂ ವೈದಿಕ ಶಿಬಿರದ ವಟುಗಳಿಂದ ಶ್ಲೋಕ ಪಠಣವು ನಡೆಯಿತು. ಶ್ರೀ ಸತ್ಯನಾರಾಯಣ ಸ್ವಾಮಿಗೆ ಮೊದಲಿಗೆ ಮಹಾ ಮಂಗಳಾರತಿ ಸೇವೆಯನ್ನು ನೆರವೇರಿಸಲಾಯಿತು. ತದನಂತರ ಶ್ರೀ ಪುದುಪಾಡಿ ಅಯ್ಯಪ್ಪ ಸ್ವಾಮಿಗೆ ಮಹಾ ಮಂಗಳಾರತಿಯನ್ನು ಅರ್ಚಕರು ನೆರವೇರಿಸಿದರು. ಬಳಿಕ ಮಹಾ ಚಂಡಿಕಾ ಹೋಮದ ಪೂರ್ಣಾಹುತಿ, ಮಹಾ ಮಂಗಳಾರತಿ ಸೇವೆಯು ಜರುಗಿತು. ತದನಂತರ ಬ್ರಹ್ಮಾರ್ಪಣ ಹಾಗೂ ಪ್ರಸಾದ ವಿತರಣೆಯು ಜರುಗಿತು. ಶ್ರೀ ಸತ್ಯನಾರಾಯಣ ಪೂಜೆಯನ್ನು ಪ್ರಧಾನ ಅರ್ಚಕರಾದ ವಿಶ್ವನಾಥ್ ಭಟ್ ನೆರವೇರಿಸಿದರು. ಮಹಾ ಚಂಡಿಕಾ ಹೋಮವನ್ನು ದಕ್ಷಿಣ ಕನ್ನಡದ ಪುತ್ತೂರುವಿನ ಅರ್ಚಕರಾದ ಪ್ರವೀಣ್ ಭಟ್ ಹಾಗೂ ತಂಡದವರು ನೆರವೇರಿಸಿದರು. ಆಗಮಿಸಿದ ಭಕ್ತಾದಿಗಳಿಗೆ ಅನ್ನ ಸಂತರ್ಪಣ ಸೇವೆಯನ್ನು ಏರ್ಪಡಿಸಲಾಗಿತ್ತು. ಗ್ರಾಮದ ಹಾಗೂ ಸಮೀಪದ ಗ್ರಾಮಗಳ ಹಾಗೂ ವಿರಾಜಪೇಟೆ ವ್ಯಾಪ್ತಿಯ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಸಂತೋಷ್ ಬಿ. ಪಿ.,ಉಪಾಧ್ಯಕ್ಷರಾದ ನಂದ ಬಿ. ಜಿ., ಶೈಲೇಶ್ ಕಾಮತ್, ಕಾರ್ಯದರ್ಶಿ ಬಿ. ಎನ್. ಶಾಂತಿಭೂಷಣ್, ಖಜಾಂಚಿ ಜ್ಯೋತಿ ಹಾಗೂ ಸರ್ವ ಸದಸ್ಯರುಗಳು ಉಪಸ್ಥಿತರಿದ್ದರು. ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ ದೇವಸ್ಥಾನವನ್ನು ವಿದ್ಯುತ್ ಹಾಗೂ ಹೂವಿನಿಂದ ಅಲಂಕರಿಸಲಾಗಿತ್ತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.