
ನಾಪೋಕ್ಲು ಏ.25 NEWS DESK : ಸ್ಥಳೀಯ ಕೆಪಿಎಸ್ ಶಾಲಾ ಮೈದಾನದಲ್ಲಿ ನಡೆಯುತ್ತಿರುವ ಚೀಯಕಪೂವಂಡ ಕುಟುಂಬ ಆಯೋಜಿತ 5ನೇ ವರ್ಷದ ಕೊಡವ ಕೌಟುಂಬಿಕ ಕೇರ್ ಬಲಿ ನಮ್ಮೆ(ಹಗ್ಗಜಗ್ಗಾಟ) ಯ ಮೂರನೇ ದಿನದ ಪಂದ್ಯಾಟದಲ್ಲಿ 24 ತಂಡಗಳು ಮುನ್ನಡೆ ಸಾಧಿಸಿ ಏ. 26ರಂದು ನಡೆಯುವ ಚೀಯಕಪೂವಂಡ ಕಪ್‌ಗೆ ಸೆಣಸಾಡಲಿದ್ದಾರೆ. ಫೈನಲ್ ಪಂದ್ಯದ ತಯಾರಿಯನ್ನು ಚೀಯಕಪೂವಂಡ ಕೇರ್ ಬಲಿ ನಮ್ಮೆ ಸಮಿತಿ ಅದ್ಧೂರಿಯಾಗಿ ನಡೆಸಲು ಸಕಲ ಸಿದ್ಧತೆಗಳನ್ನು ನಡೆಸಿದ್ದಾರೆ. ಭಾನುವಾರ ಅಪರಾಹ್ನ 3.30 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಅತಿಥಿ ಗಣ್ಯರ ಉಪಸ್ಥಿತಿಯಲ್ಲಿ ಫೈನಲ್ ಪಂದ್ಯ ನಡೆಯಲಿದೆ. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಚೀಯಕಪೂವಂಡ ಕುಟುಂಬದ ಅಧ್ಯಕ್ಷ ಸಿ.ಎಂ.ಅಪ್ಪಚ್ಚು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಚೀಯಕಪೂವಂಡ ಕೇರ್ ಬಲಿ ನಮ್ಮೆಯ ಅಧ್ಯಕ್ಷ ಸಿ.ಕೆ.ಬೋಪಣ್ಣ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ, ಲೋಕಸಭಾ ಸದಸ್ಯ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಕರ್ನಾಟಕ ಸರಕಾರದ ಮುಖ್ಯ ವಿದ್ಯುತ್ ಅಧಿಕಾರಿ ತೀತಿರ ರೋಶನ್ ಅಪ್ಪಚ್ಚು, ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೊಡಂದೇರ ಬಾಂಡ್ ಗಣಪತಿ, ಉಪಾಧ್ಯಕ್ಷ ಕೇಟೋಳಿರ ಹರೀಶ್ ಪೂವಯ್ಯ, ರಾಷ್ಟ್ರೀಯ ಮಹಿಳಾ ಆಯೋಗದ ಮುಖ್ಯಸ್ಥ ಶರತ್ ಪರಕೋತ್ , ಕೊಡವ ಟಗ್ ಆಫ್ ವಾರ್ ಅಕಾಡೆಮಿ ಅಧ್ಯಕ್ಷ ಪೊನ್ನೊಲತಂಡ ಕಿರಣ್ ಪೊನ್ನಪ್ಪ, ಮುಂಡ್ಯೋಳಂಡ ಕುಟುಂಬದ ಅಧ್ಯಕ್ಷ ಎಂ.ಟಿ.ತಿಮ್ಮಯ್ಯ, ಚೀಯಕಪೂವಂಡ ಕುಟುಂಬದ ಹಿರಿಯ ಸಿ.ಎ.ಚಿಟ್ಟಿಯಪ್ಪ, ಉಪಸ್ಥಿತರಿರುವರು. ಶನಿವಾರ ಜರುಗಿದ ಪಂದ್ಯಾಟದ ವೀಕ್ಷಕ ವಿವರಣೆಗಾರರಾಗಿ ಬಾಳೆಯಡ ದಿವ್ಯ ಮಂದಪ್ಪ, ಕೊಟ್ಟಂಗಡ ರಾಜಾ ಸುಬ್ಬಯ್ಯ, ಪೊನ್ನೊಲತಂಡ ಕಿರಣ್ ಪೊನ್ನಪ್ಪ ಕಾರ್ಯನಿರ್ವಹಿಸಿದರು. ಪಂದ್ಯಾಟದ ನಿರ್ದೇಶಕರಾಗಿ ಚಟ್ಟಂಗಡ ರವಿ ಸುಬ್ಬಯ್ಯ, ತೀರ್ಪುಗಾರರಾಗಿ ಚಟ್ಟಂಗಡ ಕಂಬ ಕಾರ್ಯಪ್ಪ, ಜಮ್ಮಡ ಗಿಲ್, ಕೊಣಿಯಂಡ ಮಂಜು ಮಾದಯ್ಯ, ಮುಂಡಚಾಡಿರ ಭರತ್, ಪೊನ್ನೊಲತಂಡ ಹರೀಶ್ , ಪೊನ್ನೊಲತಂಡ ಯಶು, ಪೊನ್ನೊಲತಂಡ ಆರ್ಯನ್ ಸೋಮಯ್ಯ, ಪೊನ್ನೊಲತಂಡ ಆಯುಷ್ ಪೊನ್ನಣ್ಣ, ಬಾಳೆಕುಟ್ಟಿರ ಬೋಪಣ್ಣ, ಬೊಟ್ಟೋಳಂಡ ಪವಿನ್, ಕೊಣಿಯಂಡ ದೀಕ್ಷಿತ್ ಕಾರ್ಯನಿರ್ವಹಿಸಿದರು. ಪಂದ್ಯಾಟ ವೀಕ್ಷಿಸಲು ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಸೇರಿದ್ದರು.









