
ಮಡಿಕೇರಿ NEWS DESK ಏ.26 : ರಾಜ್ಯ ಕಾಂಗ್ರೆಸ್ ಸರಕಾರ ಸ್ಥಳೀಯ ಸಂಸ್ಥೆಗಳಾದ ಜಿ.ಪಂ, ತಾ.ಪಂ ಮತ್ತು ಗ್ರಾ.ಪಂ ಚುನಾವಣೆಯನ್ನು ನಡೆಸದೆ ನಿರ್ಲಕ್ಷö್ಯ ವಹಿಸಿರುವುದನ್ನು ಖಂಡಿಸಿ ಸೋಮವಾರಪೇಟೆ ಮಂಡಲ ಬಿಜೆಪಿ ವತಿಯಿಂದ ಏ.27 ರಂದು ಬೆಳಿಗ್ಗೆ 10.30 ಗಂಟೆಗೆ ಸೋಮವಾರಪೇಟೆ ತಾ.ಪಂ ಕಚೇರಿ ಎದುರು ಪ್ರತಿಭಟನೆ ನಡೆಯಲಿದೆ ಎಂದು ಸೋಮವಾರಪೇಟೆ ಮಂಡಲ ವಕ್ತಾರ ಬಲ್ಲಾರಂಡ ಕಂಠಿ ಕಾರ್ಯಪ್ಪ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ರಾಜ್ಯ ಸರಕಾರ ಅಧಿಕಾರ ವಿಕೇಂದ್ರೀಕರಣ ವ್ಯವಸ್ಥೆಗೆ ಗೌರವ ನೀಡದೆ ಪ್ರಜಾಪ್ರಭುತ್ವ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಸ್ಥಳೀಯ ಸಂಸ್ಥೆ ಚುನಾವಣೆಯನ್ನು ನಡೆಸಿದರೆ ಸರಕಾರದ ದುರಾಡಳಿತದ ವಿರುದ್ಧ ಜನ ಮತ ಹಾಕುವುದರಿಂದ ಕಾಂಗ್ರೆಸ್ ಸೋಲುವ ಭೀತಿಯನ್ನು ಎದುರಿಸುತ್ತಿದೆ. ಇದೇ ಕಾರಣದಿಂದ ಚುನಾವಣೆ ನಡೆಸದೆ ಕಾಲಹರಣ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ತಕ್ಷಣ ಜಿ.ಪಂ, ತಾ.ಪಂ ಮತ್ತು ಗ್ರಾ.ಪಂ ಚುನಾವಣೆಯನ್ನು ನಡೆಸಬೇಕೆಂದು ಆಗ್ರಹಿಸಿ ತಾ.ಪಂ ಕಾರ್ಯನಿರ್ವಹಣಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿಯನ್ನು ಸಲ್ಲಿಸಲಾಗುವುದು. ಇದೇ ಸಂದರ್ಭ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು “ಭತೋತ್ಪಾದಕ” ಎಂದು ಸಂಭೋದಿಸಿರುವ ರಾಷ್ಟ್ರೀಯ ಕಾಂಗ್ರೆ









