Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೇಂದ್ರ ಸರಕಾರಕ್ಕೆ ಮಹಿಳೆಯರ ಬಗ್ಗೆ ನೈಜ ಕಾಳಜಿ ಇಲ್ಲ : ಮಹಿಳಾ ಕಾಂಗ್ರೆಸ್ ಟೀಕೆ : 10 ಲಕ್ಷ ಸಹಿ ಸಂಗ್ರಹ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೇಂದ್ರ ಸರಕಾರಕ್ಕೆ ಮಹಿಳೆಯರ ಬಗ್ಗೆ ನೈಜ ಕಾಳಜಿ ಇಲ್ಲ : ಮಹಿಳಾ ಕಾಂಗ್ರೆಸ್ ಟೀಕೆ : 10 ಲಕ್ಷ ಸಹಿ ಸಂಗ್ರಹ*

ಏಪ್ರಿಲ್ 27, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.27 NEWS DESK : ಮಹಿಳೆಯರ ಬಗ್ಗೆ ನೈಜ ಕಾಳಜಿ ಇಲ್ಲದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ನೀಡುವಲ್ಲಿ ವಿಫಲವಾಗಿದೆ. ಈ ವಿಚಾರದಲ್ಲಿ ಸುಳ್ಳು ಹೇಳುತ್ತಿರುವ ಕೇಂದ್ರ ಸರಕಾರ ಕಾಂಗ್ರೆಸ್ ವಿರುದ್ಧ ಗೂಬೆ ಕೂರಿಸುವ ಯತ್ನ ಮಾಡುತ್ತಿದೆ ಎಂದು ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಹಾಗೂ ಮಹಿಳಾ ಕಾಂಗ್ರೆಸ್ ನ ಕೊಡಗು ಉಸ್ತುವಾರಿ ಮಮತಾ ಗಟ್ಟಿ ಅವರು ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಹಿಳಾ ಮೀಸಲಾತಿ ಪರ ಸುಮಾರು 10ಲಕ್ಷ ಸಹಿ ಸಂಗ್ರಹದ ಗುರಿಯೊಂದಿಗೆ ಮಹಿಳಾ ಕಾಂಗ್ರೆಸ್ ರಾಜ್ಯವ್ಯಾಪಿ ಅಭಿಯಾನ ನಡೆಸುತ್ತಿದೆ ಎಂದರು. ಭಾರತದ ರಾಜಕೀಯ ಮತ್ತು ಸಾಮಾಜಿಕ ಇತಿಹಾಸದಲ್ಲಿ ಮಹಿಳೆಯರಿಗೆ ಸಮಾನ ಅವಕಾಶಗಳನ್ನು ನೀಡುವಲ್ಲಿ ಕಾಂಗ್ರೆಸ್ ಪಕ್ಷವು ಮಹತ್ತರ ಪಾತ್ರ ವಹಿಸಿದೆ. ಆದರೆ ಮಹಿಳಾ ಸಬಲೀಕರಣಕ್ಕೆ ಯಾವುದೇ ಕೊಡುಗೆ ನೀಡದ ಪ್ರಧಾನಿ ಮೋದಿ ನೇತೃತ್ವದ ಸರಕಾರ ಸುಳ್ಳು ಹೇಳುತ್ತಾ ಕಾಲಹರಣ ಮಾಡುತ್ತಿದೆ ಎಂದು ಟೀಕಿಸಿದರು. ಮಾಜಿ ಪ್ರಧಾನಿಗಳಾದ ಇಂದಿರಾ ಗಾಂಧಿ ಹಾಗೂ ರಾಜೀವ್ ಗಾಂಧಿ ಅವರು ನೀಡಿದ ಮಹಿಳಾ ಸಬಲೀಕರಣದ ಕಾರ್ಯಕ್ರಮಗಳಿಂದಾಗಿ ಪ್ರತಿಯೊಂದು ಕ್ಷೇತ್ರದಲ್ಲೂ ಇಂದು ಮಹಿಳೆಯರು ಸಮಾನ ಅವಕಾಶಗಳನ್ನು ಪಡೆಯುತ್ತಿದ್ದಾರೆ. ಇಂದಿರಾ ಗಾಂಧಿ ಅವರ ಪರಿಕಲ್ಪನೆಯ ಅಂಗನವಾಡಿಗಳಿಂದ ಲಕ್ಷಾಂತರ ಮಂದಿ ಉದ್ಯೋಗಾವಕಾಶ ಪಡೆದುಕೊಂಡಿದ್ದಾರೆ. ಸ್ವಸಹಾಯ ಸಂಘಗಳ ರಚನೆಯಿಂದ ಮಹಿಳೆಯರು ಸಂಘಟಿತರಾಗಿದ್ದಾರೆ. ಆರೋಗ್ಯ ಮತ್ತು ಶಿಕ್ಷಣಕ್ಕೆ ಕಾಂಗ್ರೆಸ್ ಸರಕಾರ ಒತ್ತು ನೀಡಿದ ಪರಿಣಾಮವಾಗಿ ಇಂದು ಮಹಿಳೆಯರು ಸ್ವಾವಲಂಬಿಗಳಾಗಿ ಬದುಕು ಸಾಗಿಸುತ್ತಿದ್ದಾರೆ. ರಾಜಕೀಯವಾಗಿಯೂ ಸಬಲರಾಗಿ ಅಧಿಕಾರದಲ್ಲಿದ್ದಾರೆ. ಆದರೆ ಮಹಿಳೆಯರ ಬಗ್ಗೆ ಕಾಳಜಿಯೇ ಇಲ್ಲದ ಈಗಿನ ಕೇಂದ್ರ ಸರಕಾರ ಶೇ.33 ಮೀಸಲಾತಿಯ ವಿಧೇಯಕಕ್ಕೆ ಸೋಲಾಗುತ್ತದೆ ಎಂದು ತಿಳಿದುಕೊಂಡೇ ಕ್ಷೇತ್ರ ಪುನರ್ ವಿಂಗಡಣೆಯ ವಿಚಾರವನ್ನು ಕೂಡ ಪ್ರಸ್ತಾಪಿಸಿತು. ಆದರೆ ಕ್ಷೇತ್ರ ಪುನರ್ ವಿಂಗಡಣೆ ಪ್ರಕ್ರಿಯೆ ಅಷ್ಟೊಂದು ಸುಲಭವಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕಾಂಗ್ರೆಸ್ ಪಕ್ಷ ಬಹಳ ಹಿಂದಿನಿಂದಲೂ ಮಹಿಳಾ ಸಮಾನತೆ ಮತ್ತು ಶೇ.33ರ ಮೀಸಲಾತಿ ಪರ ಇದ್ದು, ಅಧಿಕಾರದಲ್ಲಿ ಇದ್ದಾಗಲೆಲ್ಲ ಮಹಿಳಾ ಸಬಲೀಕರಣಕ್ಕೆ ಪೂರಕವಾದ ಯೋಜನೆಗಳನ್ನು ಜಾರಿಗೆ ತಂದಿದೆ. ಪ್ರಧಾನಮಂತ್ರಿ ಮೋದಿ ಅವರಿಗೆ ಈ ದೇಶದ ಮಹಿಳೆಯರ ಬಗ್ಗೆ ನೈಜ ಕಾಳಜಿ ಇದ್ದರೆ ಸುಳ್ಳು ಹೇಳುವುದನ್ನು ಬಿಟ್ಟು ಶೀಘ್ರ ಶೇ.33 ರಷ್ಟು ಮಹಿಳಾ ಮೀಸಲಾತಿಯನ್ನು ಜಾರಿಗೆ ತರಲಿ ಎಂದು ಮಮತಾ ಗಟ್ಟಿ ಒತ್ತಾಯಿಸಿದರು. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಮಹಿಳಾ ಮೀಸಲಾತಿ ಕುರಿತು ಸುಳ್ಳು ಆರೋಪಗಳನ್ನು ಮಾಡಿ ಕಾಂಗ್ರೆಸ್ ವಿರುದ್ಧ ಗೂಬೆ ಕೂರಿಸುತ್ತಿದ್ದಾರೆ. ಕಾಂಗ್ರೆಸ್ ಹಾಕಿಕೊಟ್ಟ ಮಹಿಳಾ ಸಬಲೀಕರಣದ ಅಡಿಪಾಯವೇ ಶೋಭಾ ಅವರು ಇಂದು ಸಚಿವರಾಗಿ ಅಧಿಕಾರದಲ್ಲಿರಲು ಕಾರಣವಾಗಿದೆ. ಶೋಭಾ ಕರಂದ್ಲಾಜೆ ಅವರಿಗೆ ಪ್ರಾಮಾಣಿಕತೆ ಇದ್ದರೆ ಮಹಿಳೆಯರ ಪರ ಧ್ವನಿ ಎತ್ತಲಿ ಎಂದು ಸವಾಲು ಹಾಕಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಪಿ.ಚಂದ್ರಕಲಾ ಅವರು ಮಾತನಾಡಿ ಶೇ.33ರ ಮಹಿಳಾ ಮೀಸಲಾತಿ ವಿಧೇಯಕಕ್ಕೆ ಸೋಲಾಗಿರುವುದರಿಂದ ಪಕ್ಷಾತೀತವಾಗಿ ದೇಶದ ಸರ್ವ ಮಹಿಳೆಯರಿಗೆ ಬೇಸರವಾಗಿದೆ. ಮಹಿಳಾ ಸಮಾನತೆಗಾಗಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ಅಪಾರ ಕೊಡುಗೆಯನ್ನು ನೀಡಿದ್ದಾರೆ. ಪ್ರಸ್ತುತ ಇರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಹಿಳೆಯರ ಬಗ್ಗೆ ನೈಜ ಪ್ರೀತಿಯೇ ಇಲ್ಲವೆಂದು ಟೀಕಿಸಿದರು. ಸುದ್ದಿಗೋಷ್ಠಿಯಲ್ಲಿ ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಲತಾ ಜಿ.ಆರ್, ಪ್ರಧಾನ ಕಾರ್ಯದರ್ಶಿ ರೂಪ ಭೀಮಯ್ಯ, ಉಪಾಧ್ಯಕ್ಷೆ ಶೀಲಾ ಡಿಸೋಜ ಹಾಗೂ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷೆ ಜೆ.ಫಿಲೋಮಿನಾ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.