


ಮಡಿಕೇರಿ ಏ.28 NEWS DESK : ಕಾಡಾನೆ ದಾಳಿಯಿಂದ ಗಬ್ಬದ ಹಸುವೊಂದು ಸಾವನ್ನಪ್ಪಿರುವ ಘಟನೆ ನೆಲ್ಯಹುದಿಕೇರಿ ಗ್ರಾಮದ ನಾಲ್ಕನೇ ವಿಭಾಗದಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಶೇಖರ್ ಅವರ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಹಸುವನ್ನು ಸೋಮವಾರ ಮಧ್ಯರಾತ್ರಿ ಕಾಡಾನೆ ತುಳಿದು ಕೊಂದು ಹಾಕಿದೆ ಎಂದು ತಿಳಿದು ಬಂದಿದೆ. ಮಾಹಿತಿ ತಿಳಿದ ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಹೈನುಗಾರಿಕೆಯನ್ನು ನಂಬಿ ಜೀವನ ಸಾಗಿಸುತ್ತಿರುವ ರೈತ ಕುಟುಂಬಕ್ಕೆ ತಕ್ಷಣ ಸೂಕ್ತ ಪರಿಹಾರ ನೀಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಕಾಡಾನೆ ಸಂಚಾರದಿಂದ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ತಕ್ಷಣ ಕಾಡಾನೆಗಳನ್ನು ಅರಣ್ಯ ಪ್ರದೇಶಕ್ಕೆ ಅಟ್ಟಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.








