Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಿಶಾನಿ ಮೇಲೇರಿ ಸಂಭ್ರಮಿಸಿದ ಚಿಣ್ಣರು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನಿಶಾನಿ ಮೇಲೇರಿ ಸಂಭ್ರಮಿಸಿದ ಚಿಣ್ಣರು*

ಏಪ್ರಿಲ್ 28, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.28 NEWS DESK  : ಆರು ಕಿ.ಮೀ.ಗಳ ಬಸ್‌ನಲ್ಲಿನ ಪಯಣ., ನಂತರ ಅಲ್ಲಿಂದ ಮೂರು ಕಿ.ಮೀ.ನಷ್ಟು ರಸ್ತೆಯಲ್ಲೇ ನಡಿಗೆ., ಬಳಿಕ ಕಾಡಿನೊಳಗೆ ಕಠಿಣ ಹಾದಿಯಲಿ ಮೂರು ಕಿ.ಮೀ.ಗಳಷ್ಟು ನಡಿಗೆ., ಕೊನೆಗೆ ತಲಪಿದ್ದು ನಿಸರ್ಗದ ಸಿರಿಯ ತುತ್ತ ತುದಿಯ ನಿಶಾನಿ ಮೊಟ್ಟೆಗೆ..! ಇಲ್ಲಿ ನಡೆದದ್ದು ಹವ್ಯಾಸಿ ಚಾರಣಿಗರಲ್ಲ., ಪುಟಾಣಿ ಮಕ್ಕಳು.., ಬೆಟ್ಟವನ್ನೇರಿ ಪ್ರಕೃತಿಯ ಸೊಬಗನ್ನು ಸವಿದ ಮಕ್ಕಳ ಸಂಭ್ರಮ ಹೇಳತೀರದ್ದಾಗಿತ್ತು., ದಣಿವು ಎಂಬ ಪದದ ಅರ್ಥವೇ ಇಲ್ಲಿ ಮಾಯವಾಗಿತ್ತು..! ಈ ಒಂದು ಸುಂದರ ಚಿತ್ರಣ ಕಂಡುಬಂದಿದ್ದು ಮಡಿಕೇರಿಯ ವಾಂಡರರ‍್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಏರ್ಪಡಿಸಲಾಗಿದ್ದ ಮಕ್ಕಳ ಚಾರಣ ಕಾರ್ಯಕ್ರಮದಲ್ಲಿ., ವಾಂಡರ‍್ರ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ದಿ.ಸಿ.ವಿ. ಶಂಕರ್ ಸ್ವಾಮಿ ಸ್ಮರಣಾರ್ಥ ನಡೆಯುತ್ತಿರುವ ಮಕ್ಕಳ ಉಚಿತ ಬೇಸಿಗೆ ಕ್ರೀಡಾ ತರಬೇತಿ ಶಿಬಿರದ ಅಂಗವಾಗಿ ಮಕ್ಕಳಿಗೆ ನಿಶಾನಿ ಮೊಟ್ಟೆಗೆ ಚಾರಣ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಕ್ರೀಡಾಂಗಣದಿಂದ ೧೧೫ ಮಂದಿಯನ್ನು ಹೊತ್ತುಕೊಂಡು ಹೊರಟ ಕೊಡಗು ವಿದ್ಯಾಲಯದ ಎರಡು ಬಸ್‌ಗಳು ಮದೆನಾಡು ಬಳಿಯ ಎರಡನೇ ಮೊಣ್ಣಂಗೇರಿಯಲ್ಲಿ ಮಕ್ಕಳನ್ನು ಇಳಿಸಿತು. ಅಲ್ಲಿಂದ ರಸ್ತೆ ಮೂಲಕ ಮೊಣ್ಣಂಗೇರಿ ಶಾಲೆವರೆಗೆ ನಡೆದು ಅಲ್ಲಿ ಕೊಂಚ ವಿಶ್ರಾಂತಿ ಪಡೆದು ಮುಂದಕ್ಕೆ ಸಾಗಿ ‘ಕುಡಿಯ ಹಾರಿದ ಕಲ್ಲಿನ’ ಪ್ರದೇಶದಲ್ಲಿ ಸೇರಿದರು. ಇಲ್ಲಿಗೆ ಮೂರು ಕಿ.ಮೀ. ಕ್ರಮಿಸಿಯಾಗಿತ್ತು. ಲಘು ಪಾನೀಯ, ತಿನಿಸುಗಳಾದ ಬಳಿಕ ಯೋಗ ಗುರು ಕೆ.ಕೆ. ಮಹೇಶ್ ಕುಮಾರ್ ಕುಡಿಯ ಹಾರಿದ ಕಲ್ಲಿನ ವಿಶೇಷತೆ ಬಗ್ಗೆ ಮಕ್ಕಳಿಗೆ ವಿವರಿಸಿ ಮಾಹಿತಿ ನೀಡಿದರು. ಕಠಿಣ ಮಾರ್ಗದ ಪಯಣ ::  ಇಲ್ಲಿಂದ ಕಠಿಣ ಹಾದಿಯ ಪಯಣ ಆರಂಭವಾಯಿತು. ಕೆಲವು ಪುಟಾಣಿಗಳು ಕಡಿದಾದ ಮಾರ್ಗವನ್ನು ಏರಲಾಗದೆ ಹಿಂದಕ್ಕೆ ಸರಿದರು. ಕೆಲವು ಪೋಷಕರು ಹಿಂದೇಟು ಹಾಕಿದರು. ಆದರೆ, ಇನ್ನುಳಿದ ಎಲ್ಲರೂ ಉತ್ಸಾಹ ಭರಿತರಾಗಿ ನೋಡ ನೋಡುತ್ತಿದ್ದಂತೆಯೇ ಬೆಟ್ಟದ ತುತ್ತ ತುದಿಗೆ ಏರಿಯೇಬಿಟ್ಟರು. ದೂರದಿಂದ ನೋಡುವಾಗ ಬೆಟ್ಟದ ಮೇಲೆ ಸಾಲು ಸಾಲಾಗಿ ಬಣ್ಣ ಬಣ್ಣದ ಹೂಗಳು ಅರಳಿ ನಗುತ್ತಿರುವಂತೆ ಭಾಸವಾಗುತ್ತಿತ್ತು..! 70ರ ಹರಯದವರ ಉತ್ಸಾಹ..! ::  ಚಾರಣದಲ್ಲಿ ಮಕ್ಕಳೊಂದಿಗೆ ಪೋಷಕರು, ತರಬೇತುದಾರರೂ ಭಾಗವಹಿಸಿದ್ದರು. ಅದರಲ್ಲೂ ೭೦ವರ್ಷ ದಾಟಿದ ವಾಂಡರರ‍್ಸ್ ಕ್ಲಬ್ ಅಧ್ಯಕ್ಷ ಕೋಟೇರ ಮುದ್ದಯ್ಯ ಹಾಗೂ ಸಂಚಾಲಕ ಬಾಬು ಸೋಮಯ್ಯ ಅವರುಗಳು ಕೂಡ ತಾವೂ ಯಾರಿಗೂ ಕಡಿಮೆ ಇಲ್ಲವೆಂಬಂತೆ, ಮಕ್ಕಳನ್ನು ನಾಚಿಸುವಂತೆ ಬೆಟ್ಟವನ್ನೇರಿ ಇಳಿದು ಅಚ್ಚರಿ ಮೂಡಿಸಿದರು..! :: ಭೋಜನದ ವ್ಯವಸ್ಥೆ ::  ಚಾರಣದಲ್ಲಿ ಪಾಲ್ಗೊಂಡಿದ್ದ ಮಕ್ಕಳಿಗೆ ಮೊಣ್ಣಂಗೇರಿಯ ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿಯವರಿಂದ ಭಜನಾ ಮಂಡಳಿಯಲ್ಲಿ ವಿಶ್ರಮಿಸಲು ಅವಕಾಶ ಮಾಡಿಕೊಡಲಾಯಿತು. ಮಧ್ಯಾಹ್ನದ ವೇಳೆ ಭೋಜನಕ್ಕೆ ಸ್ಥಳೀಯರಾದ ತಿರುಮಲೇಶ್ ಅವರ ಮನೆಯ ಪ್ರಾಂಗಣದಲ್ಲಿ ವ್ಯವಸ್ಥೆ ಮಾಡಿ ಸಹಕರಿಸಿದರು. :: ನೀರಾಟ ಆಡಿದರು..! ::  ಬೆಟ್ಟದಿಂದ ಇಳಿದ ಬಳಿಕ ಜೋಡುಪಾಲದಲ್ಲಿರುವ ಜಲಪಾತದ ಬಳಿ ನೀರಿಗಿಳಿದ ಮಕ್ಕಳು ನೀರಾಟವಾಡಿ ಸಂಭ್ರಮಿಸಿದರು. ಬೆಳಿಗ್ಗೆಯಿಂದ ಸಂಜೆವರೆಗೆ ನಡೆದುದೆಲ್ಲವನ್ನೂ ಬದಿಗಿಟ್ಟು ನೀರಿನಲ್ಲಿ ಆಟವಾಡಿ ಉಲ್ಲಾಸಭರಿತರಾದರು..! ಬೆಟ್ಟ ಹತ್ತಿಳಿದ ಸಂದರ್ಭ ಕಾಡಿನಲ್ಲಿ ಸಿಕ್ಕ ವಿವಿಧ ಕಾಡು ಹಣ್ಣಿನ ರುಚಿಯನ್ನೂ ಸವಿದರು..! ಸ್ಥಳೀಯರಾದ ವೆಂಕಪ್ಪ ಅವರು ಮಾರ್ಗದರ್ಶಕರಾಗಿ ಮಕ್ಕಳನ್ನು ಮುನ್ನಡೆಸಿದರೆ, ವಾಂಡ ರರ‍್ಸ್ ತರಬೇತುದಾರರುಗಳಾದ ಬೊಪ್ಪಂಡ ಶಾಂ ಪೂಣಚ್ಚ, ಕೋಟೇರ ನಾಣಯ್ಯ, ಕುಡೆಕಲ್ ಸಂತೋಷ್, ಲೋಕೇಶ್ ನಾಯ್ಡು, ಪೋಷಕರಾದ ಜನಾರ್ದನ್ ಇತರರು ಮಕ್ಕಳ ಬಗ್ಗೆ ಕಾಳಜಿ ವಹಿಸಿದ್ದರು. :: ಆಪತ್ಭಾಂಧವರು..! ::  ಚಾರಣದ ಸಂದರ್ಭದಲ್ಲಿ ಮಕ್ಕಳಿಗೆ ಮಧ್ಯಾಹ್ನದ ಊಟ ಸರಬರಾಜು ಮಾಡಲು ಬಂದಿದ್ದ ವಾಹನವೊಂದು ಸಂಜೆ ಹಿಂತಿರುಗುವ ವೇಳೆಗೆ ಮಾರ್ಗ ತಪ್ಪಿ ಇಳಿಜಾರು ಪ್ರದೇಶಕ್ಕೆ ಹೋಗಿ ಸಿಲುಕಿಕೊಂಡಿತು. ಎಷ್ಟೇ ಪ್ರಯತ್ನಪಟ್ಟರೂ ಮಣ್ಣು ರಸ್ತೆಯಲ್ಲಿ ವಾಹನ ಮುಂದೆ ಸಾಗುತ್ತಿರಲಿಲ್ಲ. ಈ ಸಂದರ್ಭದಲ್ಲಿ ಅಲ್ಲಿನ ಮರಾಟಿ ನಾಯಕ ಸಮುದಾಯಕ್ಕೆ ಸೇರಿದ ಚಂದಪ್ಪ, ಕೆ.ಕೆ. ಲೋಕೇಶ್, ಕೆ.ಎಸ್. ಅನುರಾಧ, ಪುನಿತ್ ಹಾಗೂ ವೇದಾವತಿ ಅವರುಗಳು ಹಗ್ಗ ಬಳಸಿ ವಾಹನವನ್ನು ಎಳೆದು ಮುಖ್ಯ ರಸ್ತೆಗೆ ಸರಿಸುವಲ್ಲಿ ಸಹಕಾರಿಯಾದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.