Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಸಂಸ್ಥೆಯ ಬೆಳವಣಿಗೆ ಸಿಬ್ಬಂದಿಗಳ ನಿಷ್ಠಾವಂತ ಸೇವೆ ಮುಖ್ಯ : ಎಂ.ಎಸ್.ಮುತ್ತಣ್ಣ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸಂಸ್ಥೆಯ ಬೆಳವಣಿಗೆ ಸಿಬ್ಬಂದಿಗಳ ನಿಷ್ಠಾವಂತ ಸೇವೆ ಮುಖ್ಯ : ಎಂ.ಎಸ್.ಮುತ್ತಣ್ಣ

ಏಪ್ರಿಲ್ 28, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.28 NEWS DESK : ಸಂಸ್ಥೆ ಉತ್ತಮ ರೀತಿಯಲ್ಲಿ ಬೆಳವಣಿಗೆಯನ್ನು ಕಾಣುತ್ತಾ ಮುಂದಕ್ಕೆ ಸಾಗಲು ಅಲ್ಲಿನ ಸಿಬ್ಬಂದಿಗಳ ನಿಷ್ಠಾವಂತ ಸೇವೆ ಅತ್ಯಂತ ಮುಖ್ಯವಾದದ್ದು ಎಂದು ಕಾವೇರಿ ಎಜುಕೇಶನ್ ಸೊಸೈಟಿ ಅಧ್ಯಕ್ಷರಾದ ಎಂ.ಎಸ್. ಮುತ್ತಣ್ಣ ಅಭಿಪ್ರಾಯಪಟ್ಟರು.  ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಕಾವೇರಿ ಎಜುಕೇಶನ್ ಸೊಸೈಟಿ ವತಿಯಿಂದ ಆಯೋಜಿಸಲಾಗಿದ್ದ ನಿವೃತ್ತ ಸಿಬ್ಬಂದಿಗಳ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಒಂದು ಸಂಸ್ಥೆಯ ಏಳಿಗೆಯೂ ಅಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳ ಮೇಲೆ ಅವಲಂಬಿತವಾಗಿದೆ. ಸಿಬ್ಬಂದಿಗಳು ಸಂಸ್ಥೆಯ ಏಳಿಗೆಗೆ ಶ್ರಮಿಸಿ ತಮ್ಮ ಸೇವೆಯನ್ನು ಸಲ್ಲಿಸುವುದು ಬಹಳ ಮುಖ್ಯವಾಗಿದೆ. ಅದರಲ್ಲಿಯೂ ಶಿಕ್ಷಣ ಸಂಸ್ಥೆಗಳಲ್ಲಿ ಬೋಧಕ ವೃಂದದವರು ವಹಿಸುವಂತಹ ಪಾತ್ರ ಮಹತ್ವದ್ದಾಗಿದೆ. 60 ವರ್ಷಗಳು ತುಂಬುವವರೆಗೂ ಸಂಸ್ಥೆಗಾಗಿ, ಸಂಸ್ಥೆಯ ಏಳಿಗೆಗಾಗಿ ಶ್ರಮವಹಿಸಿದ್ದು ಇನ್ನು ಮುಂದೆ ನಿಮ್ಮ ಕೌಟುಂಬಿಕ ಜೀವನ ಹಾಗೂ ಸಾಮಾಜಿಕ ಜೀವನದಲ್ಲಿ ನಿಮ್ಮ ಸೇವೆ ಅದೇ ರೀತಿ ಮುಂದುವರೆಯಲಿ. ನಿವೃತ್ತ ಜೀವನ ಸುಖ, ಶಾಂತಿ, ನೆಮ್ಮದಿಯಿಂದ ಕೂಡಿರಲಿ ಎಂದು ಶುಭ ಹಾರೈಸಿದರು.  ಕಾವೇರಿ ಎಜುಕೇಶನ್ ಸೊಸೈಟಿ ನಿರ್ದೇಶಕರಾದ ಅಚ್ಚಯ್ಯ ಮಾತನಾಡಿ ಕಾವೇರಿ ಎಜುಕೇಶನ್ ಸೊಸೈಟಿ ವತಿಯಿಂದ ಪ್ರತಿ ವರ್ಷವೂ ನಿವೃತ್ತರಾದಂತಹ ಸಿಬ್ಬಂದಿಗಳನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಗುತ್ತಿತ್ತು ಆದರೆ ಇತ್ತೀಚಿನ ಕೆಲವು ವರ್ಷಗಳಿಂದ ಕೋವಿಡ್ ಮತ್ತು ಇನ್ನಿತರ ಕಾರಣದಿಂದ ನಿವೃತ್ತರಾದ ಸಿಬ್ಬಂದಿಗಳನ್ನು ಗೌರವಿಸುವ ಕಾರ್ಯ ಹಾಗೇ ಉಳಿದಿತ್ತು . ಇದೀಗ ಆಡಳಿತ ಮಂಡಳಿ ಒಕ್ಕೊರಳಿನ ನಿರ್ಧಾರವನ್ನು ತೆಗೆದುಕೊಂಡು 2018 ರಿಂದ 2026 ರವರೆಗೆ ನಿವೃತ್ತರಾದ ವಿರಾಜಪೇಟೆ ಕಾವೇರಿ ಕಾಲೇಜಿನ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳನ್ನು ಕರಿಸಿ ಇಂದು ಸನ್ಮಾನಿಸಿ ಸಂಸ್ಥೆಯ ಏಳಿಗೆಗಾಗಿ ಅವರು ಸಲ್ಲಿಸಿದ ಸೇವೆಗೆ ಧನ್ಯವಾದಗಳು ಅರ್ಪಿಸಲಾಗುತ್ತಿದೆ ಎಂದರು. ಕಾವೇರಿ ಎಜುಕೇಶನ್ ಸೊಸೈಟಿ ಗೌ.ಕಾರ್ಯದರ್ಶಿ ಕೆ.ಪಿ.ಬೋಪಣ್ಣ ನಿವೃತ್ತ ಸಿಬ್ಬಂದಿಗಳ ಪರಿಚಯ ಮಾಡಿದರು. ನಂತರ ನಿವೃತ್ತರಾದ ದಿ. ಪ್ರೊ.ಸಿ.ಎಂ.ನಾಚಪ್ಪ, ಕೆ.ಟಿ.ಬೋಜಮ್ಮ , ಡಾ.ಎಂ.ಎಂ. ದೇಚಮ್ಮ , ಪ್ರೊ ಎ.ಎಂ.ಕಮಲಾಕ್ಷಿ , ಹೆಚ್ .ಎಸ್ ಜಯಕುಮಾರ್ , ಡಿ.ಎಂ. ಲತಾ ಕುಮಾರಿ , ಹೆಚ್.ಆರ್. ಮಹದೇವಯ್ಯ, ಎವೆಲಿನ್ ಬ್ರಗಾಂಜ್ಹ , ಪ್ರೊ ಬಿ.ಎನ್. ಶಂಕರ ನಾರಾಯಣ , ಡಾ.ಕೆ. ಆನಂದ್, ಸಿ.ಎಂ.ಸೋಮಣ್ಣ , ಹೆಚ್.ವಿ.ನಾಗರಾಜು , ಬಿ.ಎಸ್.ಜಗದೀಶ್ , ರಜನಿ ಬಿಂದು , ಬೆನೆಡಿಕ್ಟ್ ಆರ್ ಸಲ್ಡಾನ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸನ್ಮಾನ ಕಾರ್ಯಕ್ರಮದ ನಂತರ ನಿವೃತ್ತ ಸಿಬ್ಬಂದಿಗಳು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು. ಕಾರ್ಯಕ್ರಮದ ವೇದಿಕೆಯಲ್ಲಿ ಉಪಾಧ್ಯಕ್ಷರಾದ ಕೆ.ಎಂ ಬೆಳ್ಳಿಯಪ್ಪ ಖಜಾಂಜಿ ಸಿ.ಡಿ.ಮಾದಪ್ಪ , ನಿರ್ದೇಶಕರಾದ ಸಿ.ಕೆ. ಉತ್ತಪ್ಪ , ಎಂ.ಕೆ.ಮೊಣ್ಣಪ್ಪ, ಪಿ.ಟಿ. ಸುಬ್ಬಯ್ಯ , ಬಿ.ಎ.ಚಂಗಪ್ಪ ,ಸಿ.ಎಂ.ಅಪ್ಪಯ್ಯ , ಕೆ.ಪಿ.ಅಚ್ಚಯ್ಯ , ವಾಣಿ ಚೆಂಗಪ್ಪ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿರಾಜಪೇಟೆ ಕಾವೇರಿ ಕಾಲೇಜಿನ ಪ್ರಾಂಶುಪಾಲರಾದ ಬೆನೆಡಿಕ್ಟ್ ಆರ್ ಸಲ್ಡಾನ, ಪದವಿ ಪೂರ್ವ ಕಾಲೇಜಿನ ಎಂ. ಕೆ ಪದ್ಮ , ಗೋಣಿಕೊಪ್ಪಲು ಕಾವೇರಿ ಕಾಲೇಜಿನ ಪ್ರಾಂಶುಪಾಲ ಕಾವೇರಪ್ಪ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎಸ್.ಎಸ್.ಮಾದಯ್ಯ , ಕಾಲೇಜಿನ ಸಿಬ್ಬಂದಿ ವರ್ಗ , ನಿವೃತ್ತ ಕುಟುಂಬದ ಕುಟುಂಬಸ್ಥರು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.