


ಮಡಿಕೇರಿ ಏ.29 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ಇದರ ವತಿಯಿಂದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗೋಧೂಳಿ ಲಗ್ನದಲ್ಲಿ ನೆರವೇರಿತು. ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಸಮ್ಮುಖದಲ್ಲಿ 106 ಜೋಡಿಗಳು ಸತಿಪತಿಗಳಾಗಿ ಹೊಸ ಜೀವನಕ್ಕೆ ಕಾಲಿರಿಸಿದರು. ಈ ವೇಳೆ ಹೇಮಾವತಿ ವಿ ಹೆಗ್ಗಡೆ, ಹರ್ಷೇಂದ್ರ ಕುಮಾರ್, ಶ್ರದ್ದಾ ಅಮಿತ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಉಪಸ್ಥಿತರಿದ್ದರು.









