Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಿಟ್ಟೂರು ಕಾರ್ಮಾಡಿನಲ್ಲಿ ವನ್ಯಜೀವಿ ಸಪ್ತಾಹ: ಪ್ಲಾಸ್ಟಿಕ್ ತ್ಯಾಜ್ಯ ತೆರವು, ಪರಿಸರ ಜಾಗೃತಿ*
  • *ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*
  • *ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*
  • *ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*
  • *ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ : ಕೇಂದ್ರ ಪುರಸ್ಕೃತ ಯೋಜನೆ ಸಕಾಲದಲ್ಲಿ ಪ್ರಗತಿ ಸಾಧಿಸಿ : ಸಂಸದ ಯದುವೀರ್ ಒಡೆಯರ್
  • *ಕಾವೇರಿ ತೀರ್ಥೋದ್ಭವ : ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮನವಿ*
  • *ಗಾಂಧಿ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ*
  • *ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*
  • *ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*
  • *ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ವಾರ್ಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ವಾರ್ಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ*

ಏಪ್ರಿಲ್ 30, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ ಏ.30 NEWS DESK : ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ 2025 ನೇ ಸಾಲಿನ ವಾರ್ಷಿಕ ಪ್ರಶಸ್ತಿಗಾಗಿ ವರದಿಗಳನ್ನು ಆಹ್ವಾನಿಸಲಾಗಿದೆ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾದವರು ಮಾತ್ರ ವರದಿ ಸಲ್ಲಿಸಬಹುದಾಗಿದ್ದು ಮೇ 10 ರೊಳಗೆ ತಮ್ಮ ವರದಿಯನ್ನು ಪತ್ರಿಕಾಭವನಕ್ಕೆ ತಲುಪಿಸಬೇಕಾಗಿದೆ. ನಂತರ ಬಂದ ವರದಿಗಳನ್ನು ಸ್ವೀಕರಿಸಲಾಗುವುದಿಲ್ಲ. ವರದಿಗಳು 2025 ರ ಜನವರಿಯಿಂದ 2025 ಡಿಸೆಂಬರ್ 31 ರೊಳಗೆ ಪ್ರಕಟವಾಗಿರಬೇಕು. ಪ್ರಶಸ್ತಿಗೆ ವರದಿ ಸಲ್ಲಿಸುವವರು ಮೂರು ಪ್ರತಿಗಳನ್ನು ತಪ್ಪದೇ ನೀಡಬೇಕು. ದೃಶ್ಯಮಾಧ್ಯಮದವರು ತಮ್ಮ ಚಾನಲ್ ಗಳಲ್ಲಿ ಪ್ರಸಾರವಾದ ವರದಿಯ ಸಿಡಿ ಯನ್ನು ಸಲ್ಲಿಸಬೇಕು. ಪಂದ್ಯಂಡ ಬೆಳ್ಯಪ್ಪ ಸ್ಮರಣಾರ್ಥ ಅತ್ಯುತ್ತಮ ಗ್ರಾಮೀಣ ವರದಿ ಪ್ರಶಸ್ತಿ,  ಸಂಘದ ಮಾಜಿ ಅಧ್ಯಕ್ಷರಾದ ಕೆ.ಕೆ.ಶಶಿಧರ್ ಸ್ಮರಣಾರ್ಥ ಕ್ರೀಡಾ ವರದಿ ಪ್ರಶಸ್ತಿ, ಸಂಘದ ಉಪಾಧ್ಯಕ್ಷರಾಗಿದ್ದ ಸಿ.ಎನ್.ಸುನಿಲ್ ಕುಮಾರ್ ಸ್ಮರಣಾರ್ಥ ಅತ್ಯುತ್ತಮ ವೀಡಿಯೋಗ್ರಫಿ ಪ್ರಶಸ್ತಿ, ನಿವೃತ್ತ ವಾರ್ತಾಧಿಕಾರಿ ಪಳೆಯಂಡ ಪೊನ್ನಪ್ಪ ಸ್ಥಾಪಿಸಿದ ಅತ್ಯುತ್ತಮ ತನಿಖಾ ವರದಿ ಪ್ರಶಸ್ತಿ, ಕೋವರ್ ಕೊಲ್ಲಿ ಇಂದ್ರೇಶ್ ತಮ್ಮ ತಂದೆ ಚಂದ್ರಶೇಖರ್ ಅವರ ಹೆಸರಲ್ಲಿ ಸ್ಥಾಪಿಸಿದ ಮಾನವೀಯ ವರದಿ ಪ್ರಶಸ್ತಿ, ರಾಜ್ಯ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿದ್ದ ಮಂಡಿಬೆಲೆ ರಾಜಣ್ಣ ತಮ್ಮ ತಂದೆ ಮಂಡಿಬೆಲೆ ಶಾಮಣ್ಣ ಹೆಸರಿನಲ್ಲಿ ಸ್ಥಾಪಿಸಿದ ಅರಣ್ಯ ವನ್ಯಜೀವಿ ಪ್ರಶಸ್ತಿ ವರದಿ, ಬೆಳೆಗಾರ ಅಧ್ಯಕ್ಷ ಅಜ್ಜಮಾಡ ಕಟ್ಟಿ ಮಂದಯ್ಯ ತಮ್ಮ ತಂದೆ-ತಾಯಿ ಅಜ್ಜಮಾಡ ಸುಬ್ಬಯ್ಯ ಹಾಗೂ ಬೊಳ್ಳಮ್ಮ ಹೆಸರಿನಲ್ಲಿ ಸ್ಥಾಪಿಸಿರುವ ತೋಟಗಾರಿಕಾ ವರದಿ ಪ್ರಶಸ್ತಿ, ಆಪ್ತ ಸಮಾಲೋಚಕಿ ತೇಲಪಂಡ ಆರತಿ ಸೋಮಯ್ಯ ತಮ್ಮ ಅಜ್ಜ ಕೋಟೇರ ಮುತ್ತಣ್ಣ ಹೆಸರಿನಲ್ಲಿ ಸ್ಥಾಪಿಸಿರುವ ಆರೋಗ್ಯ ವರದಿ ಪ್ರಶಸ್ತಿ, ಕೈಬುಲಿರ ಪಾರ್ವತಿ ಬೋಪಯ್ಯ ತಮ್ಮ ತಂದೆ-ತಾಯಿ ಉತ್ತಯ್ಯ-ಸುಬ್ಬವ್ವ ಹೆಸರಿನಲ್ಲಿ ಸ್ಥಾಪಿಸಿರುವ ಪರಿಸರ ಮತ್ತು ನೈರ್ಮಲ್ಯ ವರದಿ ಪ್ರಶಸ್ತಿ, ಎಸ್.ಎ.ಮುರುಳೀಧರ್ ತಮ್ಮ ತಾಯಿ ಪಾರ್ವತಮ್ಮ ಅಪ್ಪಸ್ವಾಮಿ ಹೆಸರಲ್ಲಿ ಸ್ಥಾಪಿಸಿರುವ ಕೃಷಿ ವರದಿ ಪ್ರಶಸ್ತಿ, ಮರಗೋಡು ಹಾಲು ಉತ್ಪಾದಕರ ಸಹಕಾರ ಸಂಘದ ಸ್ಥಾಪಕಾಧ್ಯಕ್ಷ ಮಂದ್ರಿರ ಮೋಹನ್ ದಾಸ್ ಅವರು ಪ್ರಗತಿಪರ ಹಾಲು ಉತ್ಪಾದಕರಾಗಿದ್ದ ಉಳುವಾರನ ಶೇಷಗಿರಿ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಹೈನುಗಾರಿಕೆ ವರದಿ ಪ್ರಶಸ್ತಿ, ಶಕ್ತಿ ಸಲಹಾ ಸಂಪಾದಕರಾಗಿರುವ ಬಿ.ಜಿ.ಅನಂತಶಯನ ತಮ್ಮ ಹೋಂಸ್ಟೇ ಆಲ್ಪೆನ್ ಗ್ಲೋ ಹೆಸರಿನಲ್ಲಿ ಸ್ಥಾಪಿಸಿರುವ ಸುದ್ದಿ ಛಾಯಾಚಿತ್ರ ವರದಿ ಪ್ರಶಸ್ತಿ, ಸ್ವಸ್ಥ ಸಂಸ್ಥೆ ಮುಖ್ಯಸ್ಥೆ ಕಾಕಮಾಡ ಗಂಗಾ ಚಂಗಪ್ಪ ತಮ್ಮ ಮಾವ ಕಾಕಮಾಡ ನಾಣಯ್ಯ ಹೆಸರಿನಲ್ಲಿ ಸ್ಥಾಪಿಸಿರುವ ಶೈಕ್ಷಣಿಕ ವರದಿ ಪ್ರಶಸ್ತಿ, ಜಿಲ್ಲಾ ಪಂ.ಮಾಜಿ ಸದಸ್ಯ ಬಲ್ಲಾರಂಡ ಮಣಿ ಉತ್ತಪ್ಪ ತಮ್ಮ ತಾಯಿ ಬಲ್ಲಾರಂಡ ಮಾಚಮ್ಮ ಹೆಸರಿನಲ್ಲಿ ಸ್ಥಾಪಿಸಿರುವ ರಾಜಕೀಯ ವರದಿ ಪ್ರಶಸ್ತಿ, ಸಮಾಜ ಸೇವಕ ಮೇರಿಯಂಡ ಸಂಕೇತ್ ಪೂವಯ್ಯ ತಮ್ಮ ತಂದೆ ಮೇರಿಯಂಡ ಪೂವಯ್ಯ ಹೆಸರಿನಲ್ಲಿ ಸ್ಥಾಪಿಸಿರುವ ಹುಲಿ ಸಂರಕ್ಷಣೆ ಕುರಿತ ವರದಿ ಪ್ರಶಸ್ತಿ, ಮಂಡಿಬೆಲೆ ರಾಜಣ್ಣ ತಮ್ಮ ತಾಯಿ ಮಂಡಿಬೆಲೆ ದ್ಯಾವಮ್ಮ ಶಾಮಣ್ಣ ಹೆಸರಿನಲ್ಲಿ ಸ್ಥಾಪಿಸಿರುವ ಅರಣ್ಯ ವನ್ಯಜೀವಿ ದೃಶ್ಯ ಮಾಧ್ಯಮ ವರದಿ ಪ್ರಶಸ್ತಿ(ಟಿವಿ ಚಾನಲ್ ವರದಿಗೆ), ತೇನನ ರಾಜೇಶ್ ಅವರು ತಮ್ಮ ತಂದೆ ದಿವಂಗತ ತೇನನ ಸೋಮಣ್ಣ ಹೆಸರಿನಲ್ಲಿ ಸ್ಥಾಪಿಸಿರುವ ಸೇನೆಗೆ ಸಂಬಂಧಿಸಿದ ದೃಶ್ಯ ಮಾಧ್ಯಮದ ವರದಿ ಪ್ರಶಸ್ತಿ.(ಟಿವಿ ಚಾನಲ್ ವರದಿಗೆ), ವಕೀಲರಾದ ಪಿ.ಕೃಷ್ಣಮೂರ್ತಿ ಅವರು ತಮ್ಮ ತಂದೆ ದಿ. ಟಿ.ಕೆ.ಸುಬ್ರಹ್ಮಣ್ಯಭಟ್ ಪಂಜಿತ್ತಡ್ಕ ಅವರ ಸ್ಮರಣಾರ್ಥ ಸ್ಥಾಪಿಸಿರುವ ದೃಶ್ಯ ಮಾಧ್ಯಮದಲ್ಲಿ ಪ್ರಸಾರವಾಗಿರುವ ಅತ್ಯುತ್ತಮ ಮಾನವೀಯ ವರದಿ ಪ್ರಶಸ್ತಿ, ದಿವಂಗತ ಸಣ್ಣುವಂಡ ಎಂ ಶ್ರೀನಿವಾಸ್ ಚಂಗಪ್ಪ ಅವರ ಹೆಸರಿನಲ್ಲಿ ಕೊಡಗಿನ ಪತ್ರಕರ್ತರು ಸ್ಥಾಪಿಸಿರುವ ಸೇನೆಗೆ ಸಂಬಂಧಿಸಿದ ವರದಿ ಪ್ರಶಸ್ತಿ.( ಪತ್ರಿಕಾ ವರದಿ/ದೃಶ್ಯಮಾದ್ಯಮ ವರದಿ), ಇಂದಿರಾ ಸತ್ಯನಾರಾಯಣ ಅವರು ತಮ್ಮ ತಂದೆ ಹೆಸರಾಂತ ಸಾಹಿತಿ ದಿವಂಗತ ಡಿ.ಎನ್.ಕೃಷ್ಣಯ್ಯ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಸಾಂಸ್ಕೃತಿಕ ವರದಿ ಪ್ರಶಸ್ತಿ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರು ತಮ್ಮ ಮುತ್ತಜ್ಜಿ ಸಾಕಮ್ಮ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಕಾಫಿಗೆ ಸಂಬಂಧಿಸಿದ ಅತ್ಯುತ್ತಮ ಪತ್ರಿಕಾ ವರದಿ ಪ್ರಶಸ್ತಿ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರು ತಮ್ಮ ಮುತ್ತಜ್ಜಿ ಸಾಕಮ್ಮ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಕಾಫಿಗೆ ಸಂಬಂಧಿಸಿದ ಅತ್ಯುತ್ತಮ ದೃಶ್ಯ ಮಾಧ್ಯಮ ವರದಿ ಪ್ರಶಸ್ತಿ :: ಸೂಚನೆ :: ಒಂದು ಪ್ರಶಸ್ತಿಗೆ ಕೇವಲ ಒಂದು ವರದಿಯನ್ನು ಮಾತ್ರ ಕಳುಹಿಸತಕ್ಕದ್ದು.ಒಂದಕ್ಕಿಂತ ಹೆಚ್ಚು ವರದಿಗಳನ್ನು ಸಲ್ಲಿಸಿದರೆ ಅಂತಹ ಸದಸ್ಯರ ವರದಿಗಳನ್ನು ಪರಿಗಣನೆ ಮಾಡಲಾಗುವುದಿಲ್ಲ.ಒಬ್ಬರು ಮೂರು ಪ್ರಶಸ್ತಿಗೆ ಮಾತ್ರ ವರದಿಯನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್.ಜೆ. ರಾಕೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ನಿಟ್ಟೂರು ಕಾರ್ಮಾಡಿನಲ್ಲಿ ವನ್ಯಜೀವಿ ಸಪ್ತಾಹ: ಪ್ಲಾಸ್ಟಿಕ್ ತ್ಯಾಜ್ಯ ತೆರವು, ಪರಿಸರ ಜಾಗೃತಿ*

ಅಕ್ಟೋಬರ್ 9, 2026

*ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

ಅಕ್ಟೋಬರ್ 8, 2026

*ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

ಅಕ್ಟೋಬರ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.8 NEWS DESK : ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಅಕ್ಟೋಬರ್, 14 ರಂದು ಬೆಳಗ್ಗೆ 11…

*ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ : ಕೇಂದ್ರ ಪುರಸ್ಕೃತ ಯೋಜನೆ ಸಕಾಲದಲ್ಲಿ ಪ್ರಗತಿ ಸಾಧಿಸಿ : ಸಂಸದ ಯದುವೀರ್ ಒಡೆಯರ್

ಅಕ್ಟೋಬರ್ 8, 2026

*ಕಾವೇರಿ ತೀರ್ಥೋದ್ಭವ : ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮನವಿ*

ಅಕ್ಟೋಬರ್ 8, 2026

*ಗಾಂಧಿ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ*

ಅಕ್ಟೋಬರ್ 8, 2026

*ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*

ಅಕ್ಟೋಬರ್ 8, 2026

*ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*

ಅಕ್ಟೋಬರ್ 8, 2026

*ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*

ಅಕ್ಟೋಬರ್ 8, 2026

*ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*

ಅಕ್ಟೋಬರ್ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.