
ನಾಪೋಕ್ಲು ಏ.30 NEWS DESK : ಜಿಲ್ಲಾ ಕುಲಾಲ ಕುಂಬಾರ ಕ್ರೀಡೋತ್ಸವದ ಸಮ್ಮಿಲನ 2026 ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಲೋಕಾರ್ಪಣೆ ಮಡಿಕೇರಿಯ ಶ್ರೀ ಕೋಟೆ ಗಣಪತಿ ದೇವಾಲಯದಲ್ಲಿ ನಡೆಯಿತು. ಕೊಡಗು ಜಿಲ್ಲಾ ಕುಲಾಲ ಕುಂಬಾರ ಬಾಂಧವರಿಗೆ ಕ್ರೀಡೋತ್ಸವ ಕೊಡಗು ಜಿಲ್ಲಾ (ಕುಂಬಾರ)ರ ಸಂಘ (ರಿ)ಮಡಿಕೇರಿ ಇದರ ನೇತೃತ್ವದಲ್ಲಿ ಜಿಲ್ಲಾ ಯುವ ಘಟಕ ಮತ್ತು ಜಿಲ್ಲಾ ಮಹಿಳಾ ಘಟಕದ ಸಹಯೋಗದೊಂದಿಗೆ ಮೇ 16 , 17 ದಂದು ಮಡಿಕೇರಿಯ ಮ್ಯಾನ್ಸ್ ಕಾಂಪೌಂಡಿನ ಕೆಳಗಿನ ಮೈದಾನದಲ್ಲಿ ಆಯೋಜಿಸಲಾಗಿದೆ. ಆಮಂತ್ರಣ ಪತ್ರಿಕೆಗೆ ಬಿಡುಗಡೆ ಮಾತನಾಡಿದ ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಅಧ್ಯಕ್ಷರಾದ ಲಯನ್ ಕೆ.ಕೆ.ದಾಮೋದರ್ ಅವರು ಮಾತನಾಡಿ, ಕೊಡಗು ಜಿಲ್ಲೆಯ ಕುಲಾಲ ಕುಂಬಾರ ಬಾಂಧವರ ಇದು ಎರಡನೇ ವರ್ಷದ ಕಾರ್ಯಕ್ರಮವಾಗಿದೆ. ಈ ವರ್ಷವೂ ಬಹಳ ಅದ್ದೂರಿಯಾಗಿ ಕಾರ್ಯಕ್ರಮ ಆಯೋಜಿಸಲಾಗುವುದು. ತಾರೀಕು 16ರಂದು ಬೆಳಿಗ್ಗೆ 7 ಗಂಟೆಗೆ ಶ್ರೀ ಓಂಕಾರೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಕ್ರೀಡಾ ಜ್ಯೋತಿಯೊಂದಿಗೆ ಮೈದಾನಕ್ಕೆ ಕಾಲ್ನಡಿಗೆಯ ಮೂಲಕ ಸಾಗಿ ಗಣ್ಯರ ಸಮ್ಮುಖದಲ್ಲಿ ಕ್ರೀಡೋತ್ಸವ ಉದ್ಘಾಟನೆಗೊಳ್ಳಲಿದೆ. ಕಾರ್ಯಕ್ರಮದಲ್ಲಿ ರಾಜಕೀಯ ಧುರೀಣರು. ಜಿಲ್ಲೆಯ ಅಲ್ಲದೆ ಹೊರ ಜಿಲ್ಲೆಯ ಅತಿಥಿ ಮಹೊನ್ನತರು ಆಗಮಿಸಿ ಕಾರ್ಯಕ್ರಮವನ್ನು ಕಳೆತುಂಬಲಿದ್ದಾರೆ. ತಾ 16.ರಂದು ಶನಿವಾರ ಜಿಲ್ಲೆಯಾದ್ಯಂತ ಆಯ್ಕೆಯಾದ ತಂಡಗಳ ಕ್ರಿಕೆಟ್ ಪಂದ್ಯಾಟ ನಡೆಯಲಿದ್ದು 17ರಂದು ಬೆಳಿಗ್ಗೆಯಿಂದಲೇ ಮಹಿಳೆಯರಿಗೆ ಯುವಕರಿಗೆ ಮಕ್ಕಳಿಗೆ ಹಿರಿಯರಿಗೆ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿದ್ದೇವೆ.. ತಾರೀಕು 17 ಆದಿತ್ಯವಾರದಂದು ಗಣ್ಯಾತಿ ಗಣ್ಯರ ಸಮ್ಮುಖದಲ್ಲಿ ಸಮರೋಪ ಸಮಾರಂಭ ಬಹುಮಾನ ವಿತರಣೆ ನಡೆಯಲಿದೆ.ಎರಡು ದಿನವೂ ಮಧ್ಯಾಹ್ನದ ಊಟದ ವ್ಯವಸ್ಥೆ ಬೆಳಿಗ್ಗೆ ತಿಂಡಿಯ ವ್ಯವಸ್ಥೆಯನ್ನು ಏರ್ಪಡಿಸಲಾಗಿದೆ. ಎಲ್ಲ ಕಾರ್ಯಕ್ರಮಕ್ಕೆ ಕೊಡಗು ಜಿಲ್ಲೆಯ ಕುಲಾಲ ಕುಲಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ಆ ಮೂಲಕ ಜಿಲ್ಲೆಯದ್ಯಂತ ಕುಲಾಲ ಕುಂಬಾರ ಬಾಂಧವರು ಇನ್ನಷ್ಟು ಸಂಘಟಿತರಾಗೋಣ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಕಾಂತಿಮಣಿ ಅವರು ಮಾತನಾಡಿ ಜಿಲ್ಲೆಯ ಕುಲಾಲ ಕುಂಬಾರ ಬಾಂಧವರ ಸಂಘಟನೆಗಾಗಿ ನಡೆಯುವ ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಮಹಿಳಾ ಬಾಂಧವರು ಭಾಗವಹಿಸಿ ಕಾರ್ಯಕ್ರಮದ ಯಶಸ್ವಿಗೆ ಕೈಜೋಡಿಸಬೇಕೆಂದು ಕರೆ ನೀಡಿದರು… ಮಹಿಳೆಯರಿಗೆ ಹಲವು ಕ್ರೀಡೆಗಳು ಆಯೋಜಿಸಿದ್ದು ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಬಾಂಧವರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು. ಜಿಲ್ಲಾ ಯುವ ಘಟಕದ ಅಧ್ಯಕ್ಷ ಜೆಪಿ ಕುಲಾಲ್ ಅವರು ಮಾತನಾಡಿ ಯುವಕರಿಗೆ ಕ್ರಿಕೆಟ್ ಪಂದ್ಯಾಟ ಆ ಯೋಜನೆ ಮಾಡಿದ್ದು ಈಗಾಗಲೇ ಜಿಲ್ಲೆಯಾದ್ಯಂತ ಇರುವ ಕುಲಾಲ ಕುಂಬಾರ ಬಾಂಧವರು ತಮ್ಮ ತಂಡವನ್ನು ನೋಂದಾಯಿಸಿಕೊಂಡಿದ್ದು ಪ್ರತಿ ತಂಡದಲ್ಲೂ ಅತ್ಯುತ್ತಮ ಆಟಗಾರರಿದ್ದು ಪಂದ್ಯಾಟವು ಬಹಳ ರೋಮಾಂಚನದಿಂದ ಕೂಡಲಿದೆ. ಕುಲಾಲ ಕುಂಬಾರ ಬಾಂಧವರಿಗೆ 10 ಹಲವು ಆಟೋಟಗಳನ್ನು ಆಯೋಜನೆ ಮಾಡಿದ್ದು ಜಿಲ್ಲೆಯ ಪ್ರತಿ ಮನೆಯಿಂದಲೂ ಭಾಗವಹಿಸಿ ಈ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಗೊಳಿಸಬೇಕು ಮತ್ತು ಈಗಾಗಲೇ ಸಮ್ಮಿಲನ ಕಾರ್ಯಕ್ರಮದ ಬಗ್ಗೆ ಎಲ್ಲರಲ್ಲೂ ಕುತೂಹಲವಿದ್ದು ಕಳೆದ ವರ್ಷದ ಅದ್ಭುತ ಯಶಸ್ವಿಯು ಈ ವರ್ಷವೂ ನಡೆಯಲಿ ಆ ಮೂಲಕ ಕೊಡಗು ಜಿಲ್ಲೆಯಲ್ಲಿ ಕುಲಾಲ ಕುಂಬಾರ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಸಂಘಟಿತರಾಗಿ ಸಮಾಜದ ಏಳಿಗೆಗೆ ಸ್ಪಂದಿಸೋಣ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಉಪಾಧ್ಯಕ್ಷರಾದ ಎಂ ಡಿ ಸುರೇಶ್ ಕುಲಾಲ್ , ಜಿಲ್ಲಾ ಘಟಕದ ಪದಾಧಿಕಾರಿಗಳು ಯುವ ಘಟಕದ ಪದಾಧಿಕಾರಿಗಳು ಮತ್ತು ಮಹಿಳಾ ಘಟಕದ ಪದಾಧಿಕಾರಿಗಳು ಕುಲಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. –
ವರದಿ : ದುಗ್ಗಳ ಸದಾನಂದ.









