
ಮಡಿಕೇರಿ NEWS DESK ಮೇ 1 : ಸೋಮವಾರಪೇಟೆ ತಾಲ್ಲೂಕಿನ ಮಾದಾಪುರ ಜಂಬೂರು ಗ್ರಾಮದ ಶ್ರೀ ಮುತ್ತಪ್ಪನ್ ಸೇವಾ ಸಮಿತಿ ವತಿಯಿಂದ ಮೇ 2 ರಂದು ಶ್ರೀ ಮುತ್ತಪ್ಪನ್ ದೇವರ ವೆಳ್ಳಾಟಂ (ಕೋಲ) ಜರುಗಲಿದೆ. ಸಂಜೆ 4 ಗಂಟೆಗೆ ಮುತ್ತಪ್ಪ ದೇವರ ಮಲೆ ಇಳಿಸುವುದು, 6 ಗಂಟೆಗೆ ಮುತ್ತಪ್ಪ ದೇವರ ವೆಳ್ಳಾಟಂ (ಕೋಲ) ಹಾಗೂ 8 ಗಂಟೆಗೆ ಅನ್ನದಾನ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷ ಎನ್.ಸಿ.ಸುದರ್ಶನ್ ತಿಳಿಸಿದ್ದಾರೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳುವಂತೆ ಮನವಿ ಮಾಡಿದ್ದಾರೆ.









