Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಾಳೆಲೆ-ನಲ್ಲೂರು : ಮೇ 5 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಉಳ್ಳಿಯಡ ಎಂ. ಪೂವಯ್ಯ ಅವರಿಗೆ ಸನ್ಮಾನ*
  • *ನಾಪೋಕ್ಲು : ಮಹಿಳೆಯರು ಸ್ವಾವಲಂಬಿಗಳಾಗಿ : ವನಜಾಕ್ಷಿ ರೇಣುಕೇಶ್*
  • *ವಿರಾಜಪೇಟೆಯಲ್ಲಿ ಸಂಭ್ರಮದಿಂದ ನಡೆದ ವಿಶು ಕಣಿ ಪೂಜೆ ಹಾಗೂ ಗ್ರಾಮೀಣ ಕ್ರೀಡಾಕೂಟ*
  • *ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ* 
  • *ಕೊಡಗು : ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ : ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಶ್ರಮಿಸಿ, ಜೊತೆಗೆ ಅಧಿಕಾರ ನಡೆಸಿ : ಗಣ್ಯರ ಅಭಿಮತ*
  • *ಗೋಣಿಕೊಪ್ಪ : ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಅಧ್ಯಕ್ಷರಾಗಿ ಡಾ.ಮಂಡೆಪಂಡ ಆಶಿಕ್ ಚಂಗಪ್ಪ ಆಯ್ಕೆ* 
  • *ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು*
  • *ಗೋಣಿಕೊಪ್ಪಲುವಿನಲ್ಲಿ ನಗರ ಬಿಜೆಪಿ, ಶಕ್ತಿ ಕೇಂದ್ರದಿಂದ ಸಂಭ್ರಮಾಚರಣೆ*
  • *ಹಣ ಮರಳಿಸಿ ಪ್ರಾಮಾಣಿಕತೆ ಮೆರೆದ ಷಂಶುದ್ದೀನ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಉಳ್ಳಿಯಡ ಎಂ. ಪೂವಯ್ಯ ಅವರಿಗೆ ಸನ್ಮಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಉಳ್ಳಿಯಡ ಎಂ. ಪೂವಯ್ಯ ಅವರಿಗೆ ಸನ್ಮಾನ*

ಮೇ 4, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 4 NEWS DESK : ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮನೆಯಂಗಳದಲ್ಲಿ ಮನದುಂಬಿ ಕಾರ್ಯಕ್ರಮದಡಿ ಹಿರಿಯ ಪತ್ರಕರ್ತರ, ಬ್ರಹ್ಮಗಿರಿ ಕೊಡವ ವಾರಪತ್ರಿಕೆ ಸಂಪಾದಕ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಉಳ್ಳಿಯಡ ಎಂ.ಪೂವಯ್ಯ ಅವರನ್ನು ಸನ್ಮಾನಿಸಿಲಾಯಿತು. ಸಂಘದ ಅಧ್ಯಕ್ಷ ಬಾಚರಣಿಯಂಡ ಅನು ಕಾರ್ಯಪ್ಪ ನೇತೃತ್ವದಲ್ಲಿ ಆಡಳಿತ ಮಂಡಳಿಯವರು ಹಾಗೂ ಸದಸ್ಯರು ಪೂವಯ್ಯ ಅವರನ್ನು ಸನ್ಮಾನಿಸಿ, ಗೌರವಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಪೂವಯ್ಯ ಅವರು, ಕೊನೆಯ ಉಸಿರು ಇರುವವರೆಗೂ ಪತ್ರಿಕೋದ್ಯಮ ಬಿಡುವ ಪ್ರಶ್ನೆಯೇ ಇಲ್ಲ. ಪತ್ರಕರ್ತನಾಗಿ ಕೆಲಸ ಮಾಡುತ್ತಿರುವುದು ತೃಪ್ತಿ ತಂದಿದೆ. ದಿನಕ್ಕೆ 12 ರಿಂದ 16 ಗಂಟೆಗಳ ಕಾಲ ಪತ್ರಿಕೆಯ ಕೆಲಸದಲ್ಲಿ ತೊಡಗಿಸಿಕೊಂಡಿದ್ದು. ಬ್ರಹ್ಮಗಿರಿ ಪತ್ರಿಕೆ 47 ವರ್ಷ ಪೂರೈಸಿದೆ ಎಂದು ಮಾಹಿತಿಯಿತ್ತರು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡಿದ ಈ ಗೌರವ ಅವಿಸ್ಮರಣೀಯವಾಗಿರುತ್ತದೆ. ನನ್ನ ಜೀವನವನ್ನು ಪತ್ರಿಕೆಗಾಗಿ ಮುಡಿಪಾಗಿಟ್ಟಿದ್ದೇನೆ ಎಂದು ತಿಳಿಸಿದರು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಚರಣಿಯಂಡ ಅನು ಕಾರ್ಯಪ್ಪ ಮಾತನಾಡಿ, ಕೊಡವ ಪತ್ರಿಕೆಯೊಂದು 47 ವರ್ಷ ಪೂರೈಸಿರುವುದು ನಿಜಕ್ಕೂ ಶ್ಲಾಘನೀಯ. ನೇರ ನಡೆನುಡಿಯ ವ್ಯಕ್ತಿ ಯು.ಎಂ. ಪೂವಯ್ಯ ಸಂಘದ ಅಧ್ಯಕ್ಷರಾಗಿ ಉತ್ತಮವಾಗಿ ಸೇವೆ ಸಲ್ಲಿಸಿದ್ದರು. ಅವರ ಹಿರಿತನ ಹಾಗೂ ಉತ್ಸಾಹವನ್ನು ಗುರುತಿಸಿ ಸಂಘದಿಂದ ಗೌರವಿಸಲಾಗಿದೆ. ಬ್ರಹ್ಮಗಿರಿ ಪತ್ರಿಕೆ ಕೊಡಗು ಮಾತ್ರವಲ್ಲದೆ ಹೊರ ಜಿಲ್ಲೆ, ರಾಜ್ಯ, ಹೊರ ದೇಶದಲ್ಲಿ ನೆಲೆಸಿರುವ ಕೊಡಗಿನವರು ಓದುತ್ತಿದ್ದಾರೆ. ಇದಕ್ಕೆ ಪೂವಯ್ಯ ಹಾಗೂ ಡಾಟಿ ಪೂವಯ್ಯ ಅವರ ಶ್ರಮ ಕಾರಣ ಎಂದರು. ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜೀರ ಅಯ್ಯಪ್ಪ ಮಾತನಾಡಿ, ಕೊಡವ ಭಾμÉಯಲ್ಲಿ ಪತ್ರಿಕೆಯನ್ನು ಕಳೆದ 47 ವರ್ಷದಿಂದ ಹೊರತರುತ್ತಿರುವುದು ಸಾಹಸದ ಕೆಲಸವಾಗಿದೆ. ಸಾಕಷ್ಟು ಸಾಹಿತಿಗಳನ್ನು, ಬರಹಗಾರರನ್ನು ಪೂವಯ್ಯ ಅವರು ಹುಟ್ಟುಹಾಕಿದ್ದಾರೆ. ಪೂವಯ್ಯ ದಂಪತಿ ಇದಕ್ಕಾಗಿ ಹಾಕಿರುವ ಶ್ರಮ ಗಮನಾರ್ಹ ಎಂದು ಹೇಳಿದರು. ಸಂಘದ ಕಾರ್ಯದರ್ಶಿ ಮಲ್ಲಿಕಾರ್ಜುನ್ ಮಾತನಾಡಿ, ಹಿರಿಯ ಪತ್ರಕರ್ತರ ನೋವು-ನಲಿವನ್ನು ತಿಳಿದುಕೊಳ್ಳುವ ನಿಟ್ಟಿನಲ್ಲಿ ಮನೆಯಂಗಳದಲ್ಲಿ ಮನದುಂಬಿ ಕಾರ್ಯಕ್ರಮ ಪೂರಕವಾಗಿದೆ. ಹಿರಿಯರನ್ನು ಸನ್ಮಾನಿಸಿ ಗೌರವಿಸುತ್ತಿರುವುದು ನಮಗೂ ತೃಪ್ತಿ ತಂದಿದೆ ಎಂದರು. ಇದೇ ಸಂದರ್ಭ ಮಾತನಾಡಿದ ಬ್ರಹ್ಮಗಿರಿ ಪತ್ರಿಕೆಯ ಉಪಸಂಪಾದಕಿ ಡಾಟಿ ಪೂವಯ್ಯ, ಸಂಘ ಹಿರಿಯರನ್ನು ಗುರುತಿಸಿ ಗೌರವಿಸುತ್ತಿರುವುದು ಖುಷಿ ನೀಡಿದೆ. ಸಮಾಜ ನಮ್ಮನ್ನು ಗುರುತಿಸಲು ಪತ್ರಿಕೆ ಕಾರಣವಾಗಿದೆ. ನಮಗೆ ಮೊದಲ ಮಗು ಪತ್ರಿಕೆ ಆಗಿದೆ ಎಂದು ಹೇಳಿದರು. ಈ ಸಂದರ್ಭ ಸಂಘದ ಉಪಾಧ್ಯಕ್ಷ ನವೀನ್ ಸುವರ್ಣ, ಖಜಾಂಚಿ ಸುನಿಲ್ ಪೆÇನ್ನೆಟ್ಟಿ, ನಿರ್ದೇಶಕರಾದ ಚಿತನ್,ಅಬ್ದುಲ್ಲಾ ಸದಸ್ಯರಾದ ಮಂಜು ಸುವರ್ಣ, ಲೋಹಿತ್ ಎಂ.ಆರ್ ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬಾಳೆಲೆ-ನಲ್ಲೂರು : ಮೇ 5 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮೇ 4, 2026

*ನಾಪೋಕ್ಲು : ಮಹಿಳೆಯರು ಸ್ವಾವಲಂಬಿಗಳಾಗಿ : ವನಜಾಕ್ಷಿ ರೇಣುಕೇಶ್*

ಮೇ 4, 2026

*ವಿರಾಜಪೇಟೆಯಲ್ಲಿ ಸಂಭ್ರಮದಿಂದ ನಡೆದ ವಿಶು ಕಣಿ ಪೂಜೆ ಹಾಗೂ ಗ್ರಾಮೀಣ ಕ್ರೀಡಾಕೂಟ*

ಮೇ 4, 2026

*ಉಳ್ಳಿಯಡ ಎಂ. ಪೂವಯ್ಯ ಅವರಿಗೆ ಸನ್ಮಾನ*

ಮೇ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 4 NEWS DESK : ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮನೆಯಂಗಳದಲ್ಲಿ ಮನದುಂಬಿ ಕಾರ್ಯಕ್ರಮದಡಿ…

*ನಾಪೋಕ್ಲು : ಮಹಿಳೆಯರು ಸ್ವಾವಲಂಬಿಗಳಾಗಿ : ವನಜಾಕ್ಷಿ ರೇಣುಕೇಶ್*

ಮೇ 4, 2026

*ವಿರಾಜಪೇಟೆಯಲ್ಲಿ ಸಂಭ್ರಮದಿಂದ ನಡೆದ ವಿಶು ಕಣಿ ಪೂಜೆ ಹಾಗೂ ಗ್ರಾಮೀಣ ಕ್ರೀಡಾಕೂಟ*

ಮೇ 4, 2026

*ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ* 

ಮೇ 4, 2026

*ಕೊಡಗು : ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ : ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಶ್ರಮಿಸಿ, ಜೊತೆಗೆ ಅಧಿಕಾರ ನಡೆಸಿ : ಗಣ್ಯರ ಅಭಿಮತ*

ಮೇ 4, 2026

*ಗೋಣಿಕೊಪ್ಪ : ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಅಧ್ಯಕ್ಷರಾಗಿ ಡಾ.ಮಂಡೆಪಂಡ ಆಶಿಕ್ ಚಂಗಪ್ಪ ಆಯ್ಕೆ* 

ಮೇ 4, 2026

*ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು*

ಮೇ 4, 2026

*ಗೋಣಿಕೊಪ್ಪಲುವಿನಲ್ಲಿ ನಗರ ಬಿಜೆಪಿ, ಶಕ್ತಿ ಕೇಂದ್ರದಿಂದ ಸಂಭ್ರಮಾಚರಣೆ*

ಮೇ 4, 2026

*ಹಣ ಮರಳಿಸಿ ಪ್ರಾಮಾಣಿಕತೆ ಮೆರೆದ ಷಂಶುದ್ದೀನ್*

ಮೇ 4, 2026

*ಗೋಣಿಕೊಪ್ಪ ನಗರ ಕಾಂಗ್ರೆಸ್‍ನಿಂದ ಸಂಭ್ರಮಾಚರಣೆ*

ಮೇ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.