Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಿಟ್ಟೂರು ಕಾರ್ಮಾಡಿನಲ್ಲಿ ವನ್ಯಜೀವಿ ಸಪ್ತಾಹ: ಪ್ಲಾಸ್ಟಿಕ್ ತ್ಯಾಜ್ಯ ತೆರವು, ಪರಿಸರ ಜಾಗೃತಿ*
  • *ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*
  • *ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*
  • *ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*
  • *ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ : ಕೇಂದ್ರ ಪುರಸ್ಕೃತ ಯೋಜನೆ ಸಕಾಲದಲ್ಲಿ ಪ್ರಗತಿ ಸಾಧಿಸಿ : ಸಂಸದ ಯದುವೀರ್ ಒಡೆಯರ್
  • *ಕಾವೇರಿ ತೀರ್ಥೋದ್ಭವ : ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮನವಿ*
  • *ಗಾಂಧಿ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ*
  • *ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*
  • *ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*
  • *ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*5ನೇ ದಿನವೂ ಮುಂದುವರೆದ ವಸತಿ ರಹಿತರ ಧರಣಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*5ನೇ ದಿನವೂ ಮುಂದುವರೆದ ವಸತಿ ರಹಿತರ ಧರಣಿ*

ಮೇ 5, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಸೋಮವಾರಪೇಟೆ ಮೇ 5 NEWS DESK : ನಿವೇಶನ ರಹಿತ ಬಡವರಿಗೆ ನಿವೇಶನ ನೀಡುವಂತೆ ಒತ್ತಾಯಿಸಿ, ಕರ್ನಾಟಕ ಬಹುಜನ ಕಾರ್ಮಿಕ ಸಂಘಟನೆಯ ನೇತೃತ್ವದಲ್ಲಿ ಕುಂಬೂರು ಗ್ರಾಮದ ಪೈಸಾರಿ ಜಾಗದಲ್ಲಿ ವಸತಿರಹಿತ ಕಾರ್ಮಿಕರು ನಡೆಸುತ್ತಿರುವ ಅಹೋರಾತ್ರಿ ಧರಣಿ 5ನೇ ದಿನಕ್ಕೆ ಕಾಲಿಟ್ಟಿದೆ. ಧರಣಿಯಲ್ಲಿ ವಸತಿ ರಹಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮೊದಲ ದಿನ ತಹಸೀಲ್ದಾರ್, ಡಿಎಫ್‍ಒ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು ಭೇಟಿ ನೀಡಿ ಧರಣಿನಿರತರನ್ನು ಚರ್ಚೆ ಮಾಡಿದ್ದು ಬಿಟ್ಟರೆ, ಧರಣಿ ಸ್ಥಳದಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕಾಣಿಸಿಕೊಂಡಿಲ್ಲ. ಪ್ರಾರಂಭದಲ್ಲಿ 400ಕುಟಂಬಗಳು ಧರಣಿಯಲ್ಲಿ ಭಾಗವಹಿಸಿದ್ದರು. ಮಂಗಳವಾರ ಧರಣಿನಿರತರ ಸಂಖ್ಯೆ 600ಕ್ಕೆ ಏರಿದೆ. ವಸತಿರಹಿತರ ಧರಣಿಗೆ ಸಂಬಂಧಿಸಿದಂತೆ ಎಲ್ಲಾ ಸಿದ್ದತೆಗಳನ್ನು ಮಾಡಿಕೊಂಡಿದ್ದಾರೆ. ತಾತ್ಕಲಿಕ ಶೌಚಾಲಯ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಮಳೆಯಿಂದ ರಕ್ಷಣೆ ಪಡೆಯಲು ಟಾರ್ಪಲ್ ಹೊದಿಕೆಯ ಪೆಂಡಾಲ್ ಮಾಡಿಕೊಂಡಿದ್ದಾರೆ. ವಸತಿರಹಿತರು ಮನೆಯಿಂದ ಪಡಿತರ ತಂದುಕೊಂಡು ಅಡುಗೆ ಮಾಡಿಕೊಳ್ಳುಕೊಳ್ಳುತ್ತಿದ್ದಾರೆ. ವೃದ್ದ ಮಹಿಳೆಯರು ಧರಣಿಯಲ್ಲಿ ಪಾಲ್ಗೊಂಡಿದ್ದಾರೆ. ರಾತ್ರಿ ಮಲಗಿದ್ದಾಗ ಹಾವುಗಳ ಭಯವಿದೆ. ಇನ್ನೊಂದು ಕಾಡಾನೆಗಳ ಆತಂಕವೂ ಇದೆ ಎಂದು ಧರಣಿ ನಿರತರಾದ ಗೀತಾಮಣಿ ಹೇಳಿದರು. ಕಾರ್ಮಿಕ ಸಂಘಟನೆ ಅಧ್ಯಕ್ಷ ಕೆ.ಮೊಣ್ಣಪ್ಪ ಸುದ್ದಿಗಾರರೊಂದಿಗೆ ಮಾತನಾಡಿ, ಸೋಮವಾರಪೇಟೆ ಹಾಗು ಕುಶಾಲನಗರ ತಾಲ್ಲೂಕಿನಲ್ಲಿ 30 ಸಾವಿರದಷ್ಟು ವಸತಿರಹಿತರಿದ್ದಾರೆ. ಅವರಿಗೆ ಗುಡಿಸಲು ಕಟ್ಟಿಕೊಳ್ಳಲು ಕೊಡುವಷ್ಟು ಪೈಸಾರಿ ಜಾಗವಿದೆ. ಆದರೆ ಸರ್ಕಾರಕ್ಕೆ ಬಡವರಿಗೆ ನಿವೇಶನ ನೀಡುವ ಮನಸ್ಸಿಲ್ಲ. ಪೈಸಾರಿ ಜಾಗವನ್ನು ಉಳ್ಳವರು ಒತ್ತುವರಿ ಮಾಡಿಕೊಂಡಿದ್ದಾರೆ. ಈಗಲೂ ಒತ್ತವರಿ ಮಾಡಿಕೊಳ್ಳುತ್ತಿದ್ದಾರೆ. ಅಂತಹವರಿಗೆ ಹಕ್ಕುಪತ್ರಗಳನ್ನೂ ನೀಡುವ ಪ್ರಯತ್ನ ನಡೆದಿದೆ ಎಂದು ದೂರಿದರು. ತಾಲ್ಲೂಕು ಕಾರ್ಯನಿರ್ವಹಣಾಧಿಕಾರಿಗಳ ಮಾಹಿತಿ ಪ್ರಕಾರ 2014ರವರೆಗೆ 6500 ಮಂದಿ ವಸತಿ ರಹಿತರು ಅರ್ಜಿ ಸಲ್ಲಿಸಿದ್ದಾರೆ. ಕಳೆದ 12 ವರ್ಷಗಳಿಂದ ಬಡವರು, ಕಾರ್ಮಿಕರಿಂದ ಅರ್ಜಿಯನ್ನು ಪಡೆದುಕೊಳ್ಳದೆ ಅನ್ಯಾಯವೆಸಗಲಾಗಿದೆ. ತಾಲ್ಲೂಕಿನಲ್ಲಿರುವ ವಸತಿರಹಿತ ಬಡವರಿಗೆ ಉಚಿತ ನಿವೇಶನ ನೀಡುವ ತನಕ ಆಹೋರಾತ್ರಿ ಧರಣಿ ನಡೆಯಲಿದೆ. ಪೊಲೀಸರನ್ನು ಬಳಸಿಕೊಂಡು ಧರಣಿನಿರತರ ಮೇಲೆ ದೌರ್ಜನ್ಯ ಮಾಡಿದರೆ, ಶಾಸಕರ ಮನೆ ಎದುರು ಧರಣಿ ಮುಂದುವರಿಸಲಾಗುವುದು. ಜಿಲ್ಲೆಯ ಶಾಸಕರುಗಳು ಶ್ರಮಜೀವಿಗಳ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಹೇಳಿದರು.

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ನಿಟ್ಟೂರು ಕಾರ್ಮಾಡಿನಲ್ಲಿ ವನ್ಯಜೀವಿ ಸಪ್ತಾಹ: ಪ್ಲಾಸ್ಟಿಕ್ ತ್ಯಾಜ್ಯ ತೆರವು, ಪರಿಸರ ಜಾಗೃತಿ*

ಅಕ್ಟೋಬರ್ 9, 2026

*ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

ಅಕ್ಟೋಬರ್ 8, 2026

*ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

ಅಕ್ಟೋಬರ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.8 NEWS DESK : ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಅಕ್ಟೋಬರ್, 14 ರಂದು ಬೆಳಗ್ಗೆ 11…

*ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ : ಕೇಂದ್ರ ಪುರಸ್ಕೃತ ಯೋಜನೆ ಸಕಾಲದಲ್ಲಿ ಪ್ರಗತಿ ಸಾಧಿಸಿ : ಸಂಸದ ಯದುವೀರ್ ಒಡೆಯರ್

ಅಕ್ಟೋಬರ್ 8, 2026

*ಕಾವೇರಿ ತೀರ್ಥೋದ್ಭವ : ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮನವಿ*

ಅಕ್ಟೋಬರ್ 8, 2026

*ಗಾಂಧಿ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ*

ಅಕ್ಟೋಬರ್ 8, 2026

*ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*

ಅಕ್ಟೋಬರ್ 8, 2026

*ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*

ಅಕ್ಟೋಬರ್ 8, 2026

*ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*

ಅಕ್ಟೋಬರ್ 8, 2026

*ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*

ಅಕ್ಟೋಬರ್ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.