Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ತತ್ವಪದ ವಿಮರ್ಶಾ ಲೇಖನ ಸ್ಪರ್ಧೆ*
  • *ಕನ್ನಡ ಸಾಹಿತ್ಯ ಪರಿಷತ್ತು ಕನ್ನಡದ ಅಸ್ಮಿತೆಯನ್ನು ಉಳಿಸಿ ಬೆಳೆಸಿಕೊಂಡು ಬಂದಿದೆ : ಬಿ.ಬಿ.ಶಿವಪ್ಪ*
  • *ರೂ.20 ಲಕ್ಷ ವೆಚ್ಚದ ಹಸಿ ಕಸ ವಿಲೇವಾರಿ ಘಟಕಕ್ಕೆ ಶಾಸಕ ಮಂತರ್ ಗೌಡ ಚಾಲನೆ*
  • *ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್” ರಾಷ್ಟ್ರೀಯ ಕಾರ್ಯಕ್ರಮ ನಿರ್ದೇಶಕರಾಗಿ ಬಿ.ಎನ್.ಪ್ರಕಾಶ್ ನೇಮಕ*
  • *ಗೋಣಿಕೊಪ್ಪ : ರಕ್ತದಾನ ಶ್ರೇಷ್ಠತೆಯ ಬಗ್ಗೆ ಜಾಗೃತಿ ಮೂಡಿಸಬೇಕು : ಕುಲ್ಲಚಂಡ ಪ್ರಮೋದ್ ಗಣಪತಿ*
  • *ರಾಜ್ಯ ಸರಕಾರದ ಸರ್ವಾಧಿಕಾರಿ ಧೋರಣೆ : ಪೊಲೀಸರ ಕ್ರಮಕ್ಕೆ ಸೋಮವಾರಪೇಟೆ ಬಿಜೆಪಿ ಅಸಮಾಧಾನ*
  • *ದುಬಾರೆ : 7.3 ಕೋಟಿ ರೂ. ವೆಚ್ಚದ ತೂಗು ಸೇತುವೆ ನಿರ್ಮಾಣಕ್ಕೆ ಶಂಕುಸ್ಥಾಪನೆ : ವನ್ಯಜೀವಿಗಳ ಸಂತಾನ ನಿಯಂತ್ರಣಕ್ಕೆ ತಜ್ಞರೊಂದಿಗೆ ಚರ್ಚೆ : ಅರಣ್ಯ ಸಚಿವ ಈಶ್ವರ ಖಂಡ್ರೆ*
  • *ಕೊಡಗು ಹೆಗ್ಗಡೆ ಸಮಾಜದ ಕ್ರೀಡಾ ಹಬ್ಬಕ್ಕೆ ಸಂಭ್ರಮದ ತೆರೆ*
  • *ಶಂಸುಲ್ ಉಲಮಾ ಕಾಲೇಜು ವಿದ್ಯಾರ್ಥಿಗಳ ಸಾಧನೆ : ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗಣ್ಯರ ಕರೆ*
  • *5ನೇ ದಿನವೂ ಮುಂದುವರೆದ ವಸತಿ ರಹಿತರ ಧರಣಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕನ್ನಡ ಸಾಹಿತ್ಯ ಪರಿಷತ್ತು ಕನ್ನಡದ ಅಸ್ಮಿತೆಯನ್ನು ಉಳಿಸಿ ಬೆಳೆಸಿಕೊಂಡು ಬಂದಿದೆ : ಬಿ.ಬಿ.ಶಿವಪ್ಪ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕನ್ನಡ ಸಾಹಿತ್ಯ ಪರಿಷತ್ತು ಕನ್ನಡದ ಅಸ್ಮಿತೆಯನ್ನು ಉಳಿಸಿ ಬೆಳೆಸಿಕೊಂಡು ಬಂದಿದೆ : ಬಿ.ಬಿ.ಶಿವಪ್ಪ*

ಮೇ 6, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 6 NEWS DESK : ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಿರಂತರವಾಗಿ ಮಾಡುವ ಮೂಲಕ ಕನ್ನಡದ ಅಸ್ಮಿತೆಯನ್ನು ಉಳಿಸಿ ಬೆಳೆಸಿಕೊಂಡು ಬಂದಿದೆ ಎಂದು ಭಾಗಮಂಡಲದ ಕಾವೇರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಬಿ.ಬಿ.ಶಿವಪ್ಪ ನುಡಿದರು.  ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಡಿಕೇರಿಯ ಪತ್ರಿಕಾ ಭವನದಲ್ಲಿ ಏರ್ಪಡಿಸಿದ 112ನೇ ಪರಿಷತ್ ಸಂಸ್ಥಾಪನ ದಿನದ ಮಹತ್ವದ ಕುರಿತು ಉಪನ್ಯಾಸ ನೀಡುತ್ತಿದ್ದರು. ಮುಂದುವರೆದ ಅವರು ಕನ್ನಡ ಸಾಹಿತ್ಯ ಪರಿಷತ್ ಎಂದೊಡನೆ ಕನ್ನಡಿಗರಲ್ಲಿ ರೋಮಾಂಚನವಾಗುತ್ತದೆ ಯಾವ ಉದ್ದೇಶದಿಂದ 112 ವರ್ಷಗಳ ಹಿಂದೆ ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ಸರ್ ಎಂ ವಿಶ್ವೇಶ್ವರಯ್ಯ ಅವರ ಚಿಂತನೆಯಿಂದ ಕನ್ನಡ ಸಾಹಿತ್ಯ ಪರಿಷತ್ ಪ್ರಾರಂಭವಾಯಿತೋ ಆ ಉದ್ದೇಶ ಸಫಲವಾಗಿದೆ. ಕನ್ನಡ ನಾಡು-ನುಡಿ, ಆಚಾರ-ವಿಚಾರ, ಸಾಹಿತ್ಯ-ಸಂಸ್ಕೃತಿ ಉಳಿಸಿ ಬೆಳೆಸುವ ಕಾರ್ಯಕ್ರಮ ಕನ್ನಡ ಸಾಹಿತ್ಯ ಪರಿಷತ್ ಮಾಡಿಕೊಂಡು ಬರುತ್ತಿದೆ ಎಂದರು. ಯುವಜನರು ಹೆಚ್ಚು ಹೆಚ್ಚು ಸಾಹಿತ್ಯಿಕ ವಿಚಾರಗಳಲ್ಲಿ ತೊಡಗಿಸಿಕೊಳ್ಳಬೇಕು ಎಲ್ಲಿ ಹೆಚ್ಚು ಯುವಜನರು ತೊಡಗಿಸಿಕೊಳ್ಳುತ್ತಾರೋ ಆ ವಲಯ ಬೆಳೆಯುತ್ತಾ ಹೋಗುತ್ತದೆ. ಯುವಜನರನ್ನು ಸಾಹಿತ್ಯದೊಳಗೆ ಕರೆದಿರುವ ಕೆಲಸ ಆಗಬೇಕಿದೆ ಎಂದರು. ಪ್ರಾಸ್ತಾವಿಕವಾಗಿ ಮಾತನಾಡಿದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ,ಕೇಶವ ಕಾಮತ್ ಒಂದು ಸಂಸ್ಥೆ 112 ವರ್ಷಗಳ ಕಾಲ ಸೇವೆ ಸಲ್ಲಿಸಿ ಇಂದಿಗೂ ತನ್ನ ಅಸ್ಮಿತೆ ಉಳಿಸಿಕೊಂಡು ಕಾರ್ಯನಿರ್ವಹಿಸುತ್ತಿದೆ ಎಂದರು. ನಾಲ್ವಡಿ ಕೃಷ್ಣರಾಜ ಒಡೆಯರ್, ಸರ್ ಎಂ.ವಿಶ್ವೇಶ್ವರಯ್ಯ ಮತ್ತು ಸರ್ ಮಿರ್ಜಾ ಇಸ್ಮಾಯಿಲ್ ರವರು ಸ್ಥಾಪನೆ ಮಾಡುವ ಸಂದರ್ಭದಲ್ಲಿ ಹಾಕಿಕೊಟ್ಟ ಅಡಿಪಾಯ ಕನ್ನಡ ನಾಡು ನುಡಿ ರಕ್ಷಣೆಗಾಗಿ ರಾಜ್ಯಾದ್ಯಂತ ತಾಲೂಕು ಜಿಲ್ಲಾ ಹೋಬಳಿ ಅಖಿಲ ಭಾರತ ಮಟ್ಟದ ಸಮ್ಮೇಳನಗಳನ್ನು ನಡೆಸುತ್ತಾ ಕನ್ನಡದ ಪ್ರಾತಿನಿಧಿಕ ಸಂಸ್ಥೆಯಾಗಿ ಸರಕಾರದೊಂದಿಗೆ ಗುರುತಿಸಿಕೊಂಡು ಕೆಲಸ ಮಾಡುತಿದೆ. ಕನ್ನಡ ಸಾಹಿತ್ಯ ಪರಿಷತ್ಥಾನ ಪರಿಷತ್ತಿನ ಜವಾಬ್ದಾರಿ ತೆಗೆದುಕೊಂಡು ಕೆಲಸ ಮಾಡುವುದು ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳುವುದು ಒಂದು ಅದೃಷ್ಟವೇ ಸರಿ ಎಂದರು. ಕನ್ನಡ ನಾಡಿನ ಸೇವೆಗಾಗಿ ಜಿಲ್ಲೆಯಲ್ಲಿ ಗುರುತಿಸಿಕೊಂಡಿರುವ ಆರು ಜನ ಹಿರಿಯರನ್ನು ಗೌರವಿಸಿ ಸನ್ಮಾನಿಸಲಾಯಿತು. ವಿರಾಜಪೇಟೆ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಮುಲ್ಲೆಂಗಡ ಮಧೋಶ್ ಪೂವಯ್ಯ, ಮೂರ್ನಾಡು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಸಾಹಿತಿ ಮತ್ತು ಕವಿ ವೈದ್ಯ ಮೇಚಿರ ಸುಭಾಷ್ ನಾಣ್ಯಯ್ಯ ಅವರನ್ನು, ಕೊಡಗು ಜಿಲ್ಲಾ ಪಂಚಾಯತಿಯ ಮಾಜಿ ಸದಸ್ಯರು, ಸಾಂದೀಪನಿ ವಿದ್ಯಾಸಂಸ್ಥೆಯ ಅಧ್ಯಕ್ಷರು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವಿಶೇಷ ಅಹ್ವಾನಿತರು ಆದ ಎಂ ಟಿ ದಾಮೋದರ್ ಅವರನ್ನು ಬಾಳೆಯ ವಿಜಯಲಕ್ಷ್ಮಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲರು, ಜಿಲ್ಲೆಯ ಹಿರಿಯ ಪತ್ರಕರ್ತರು, ಸಾಹಿತಿಗಳು, ಕನ್ನಡ ಸಾಹಿತ್ಯ ಪರಿಷತ್ತಿನ ವಿರಾಜಪೇಟೆ ತಾಲೂಕಿನ ಮಾಜಿ ಅಧ್ಯಕ್ಷರು, ವಿರಾಜಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರೂ ಆಗಿದ್ದ ಡಾಕ್. ಜೆ.ಸೋಮಣ್ಣರವರನ್ನು ಭಾಗಮಂಡಲದ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಎಲ್ಲಾ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಕನ್ನಡ ಕಟ್ಟುವಲ್ಲಿ ಸೇವೆ ಸಲ್ಲಿಸಿದ ಕೆ.ಜಿ ದಿವಾಕರ್ ಅವರನ್ನು, ಕೃಷಿಕರು, ಕಲಾವಿದರು ಕನ್ನಡ ಸಾಹಿತ್ಯ ಪರಿಷತ್ತಿನ ಕುಶಾಲನಗರ ತಾಲೂಕಿನ ನಿರ್ದೇಶಕರು ಆದ ಎಂಎನ್ ಕಾಳಪ್ಪ ರವರನ್ನು ಅವರ ಕನ್ನಡ ಸೇವೆಗಾಗಿ ಗುರುತಿಸಿ ಸನ್ಮಾನಿಸಲಾಯಿತು. ಕನ್ನಡ ಸೇವೆ ಎಲ್ಲಿ ಗುರುತಿಸಿಕೊಂಡಿರುವ ಸಾಧಕರನ್ನು ಗ್ರಾಹಕ ನ್ಯಾಯಾಲಯದ ಮಾಜಿ ಅಧ್ಯಕ್ಷರು ಪ್ರಸ್ತುತ ಕೊಡಗು ಜಿಲ್ಲಾಧಿಕಾರಿಗಳ ಕಾನೂನು ಸಲಹೆಗಾರರು ಆದ ಈ ಲೋಕೇಶ್ ಕುಮಾರ್ ರವರು ಸನ್ಮಾನಿಸಿದರು. ಸನ್ಮಾನಿಸಿದ ನಂತರ ಮಾತನಾಡಿದ ಅವರು ಕನ್ನಡ ಸಾಹಿತ್ಯ ಪರಿಷತ್ತು ಹತ್ತು ಹಲವು ಕನ್ನಡದ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದೆ.17ನೇ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನನ್ನ ಊರಾದ ಸುಂಟಿಕೊಪ್ಪದಲ್ಲಿ ನಡೆಸುತ್ತಿದೆ ಇಡೀ ಸುಂಟಿಕೊಪ್ಪ ಊರು ಸಮ್ಮೇಳನದಲ್ಲಿ ಭಾಗಿಯಾಗಿ ಸಮ್ಮೇಳನವನ್ನು ಅತ್ಯಂತ ಯಶಸ್ವಿಯಾಗಿ ನಡೆಸಿಕೊಡುತ್ತದೆ ಎಂದರು. ಸನ್ಮಾನ ಸ್ವೀಕರಿಸಿದ ಎಲ್ಲ ಗೌರವಾನ್ವಿತರು ಮಾತನಾಡುತ್ತ ತಾವು ಕನ್ನಡ ಸೇವೆಯಲ್ಲಿ ದುಡಿದ ಪರಿಯನ್ನು ವಿವರಿಸಿದರು ಸಾಹಿತ್ಯ ಪರಿಷತ್ತು ಸಾಹಿತ್ಯದ ಜೊತೆಗೆ ವಿದ್ಯಾರ್ಥಿಗಳಿಗೆ ಕನ್ನಡ ನಾಡು ನುಡಿ ಆಚಾರ ವಿಚಾರಗಳ ಪರಿಚಯ ಮಾಡಿಕೊಡುತ್ತಿರುವುದು ಶ್ಲಾಘನಿಯ ಎಂದರು. 17ನೇ ಕೊಡಗು ಜಿಲ್ಲಾ ಕನ್ನಡಸಾಹಿತ್ಯ ಸಮ್ಮೇಳನದ ಲಾಂಛನವನ್ನು ಈ ಕಾರ್ಯಕ್ರಮದಲ್ಲಿ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಬಿಡುಗಡೆಗೊಳಿಸಿದರು. ವೇದಿಕೆಯಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಎಸ್.ಐ ಮುನೀರ್ ಅಹ್ಮದ್, ಪಿ ರೇವತಿ ರಮೇಶ್, ಗೌರವಕೋಶಾಧಿಕಾರಿ ಎಸ್.ಎಸ್ ಸಂಪತ್ ಕುಮಾರ್ ಉಪಸ್ಥಿತರಿದ್ದರು ಕಾರ್ಯಕ್ರಮದಲ್ಲಿ ಮಡಿಕೇರಿ ತಾಲೂಕು ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್,ಸೋಮವಾರಪೇಟೆ ತಾಲೂಕು ಅಧ್ಯಕ್ಷರಾದ ಎಸ್.ಡಿ ವಿಜೇತ್, ಕುಶಾಲನಗರ ತಾಲೂಕು ಅಧ್ಯಕ್ಷರಾದ ಕೆ.ಎಸ್ ನಾಗೇಶ್, ವಿರಾಜಪೇಟೆ ತಾಲೂಕು ಅಧ್ಯಕ್ಷರಾದ ಡಿ.ರಾಜೇಶ್ ಪದ್ಮನಾಭ ಸುಂಟಿಕೊಪ್ಪ ಹೋಬಳಿ ಅಧ್ಯಕ್ಷರಾದ ಪಿ ಎಫ್ ಸಭಾಸ್ಟಿನ್, ಜಿಲ್ಲಾ ಸಂಘಟನಾ ಕಾರ್ಯದರ್ಶಿಗಳಾದ ಬಿ ಎಂ ವಾಸು ರೈ, ಕೆ ಎನ್ ದೇವರಾಜ್, ಜಿಲ್ಲಾ ಸಹಕಾರ್ಯದರ್ಶಿಗಳಾದ ಎ.ವಿ ಮಂಜುನಾಥ್, ಜಲಜಾ ಶೇಖರ್, ಕುಶಾಲನಗರ ತಾಲೂಕು ಗೌರವಕೋಶಾಧಿಕಾರಿ ಕೆ ವಿ ಉಮೇಶ್ ನಿರ್ದೇಶಕ ಟಿ.ಜಿ ಪ್ರೇಮ್ ಕುಮಾರ್, ಮಡಿಕೇರಿ ತಾಲೂಕು ಗೌರವ ಕೋಶಾಧಿಕಾರಿ ಸಿದ್ದರಾಜು ಬೆಳ್ಳಯ್ಯ ಸೋಮವಾರಪೇಟೆ ತಾಲೂಕು ಗೌರವ ಕಾರ್ಯದರ್ಶಿ ಎ.ಪಿ ವೀರರಾಜು, ನಿರ್ದೇಶಕ ಜೋಕಿಂವಾಸ್, ಮಡಿಕೇರಿ ತಾಲೂಕು ಕಸ ಪ್ಪ ಮಾಜಿ ಅಧ್ಯಕ್ಷರಾದ ಕೆ.ಟಿ.ಬೇಬಿ ಮ್ಯಾಥ್ಯು, ಮಡಿಕೇರಿ ತಾಲೂಕು ಗೌರವ ಕಾರ್ಯದರ್ಶಿಗಳಾದ ಲಕ್ಷ್ಮಣ್, ಸದಸ್ಯರುಗಳಾದ ಹರೀಶ್ ಸರಳಾಯ, ಹೆಚ್. ಎಲ್ ದಿವಾಕರ್,ಮನು ಅಚ್ಚಮ್ಮಯ್ಯ, ಅಜಯ್ ಮತ್ತು ಪರಿಷತ್ತಿನ ಸಿಬ್ಬಂದಿ ರೇಣುಕಾ, ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಪ್ರತಿಮಾ ಹರೀಶ್ ರೈ, ಸಾಹಿತಿಗಳಾದ ಗೌರಮ್ಮ ಮಾದಮಯ್ಯ ಉಪಸ್ಥಿತರಿದ್ದರು. ಸಾಹಿತ್ಯ ಪರಿಷತ್ತಿನ ಸದಸ್ಯರುಗಳಿಂದ ನಾಡಗೀತೆ, ಗೌರವ ಕಾರ್ಯದರ್ಶಿ ಎಸ್ .ಐ.ಮುನೀರ್ ಅಹಮದ್ ನಿರೂಪಿಸಿದರು. ರೇವತಿ ರಮೇಶ್ ಸ್ವಾಗತಿಸಿದರು. ಗೌರವಕೋಶಾಧಿಕಾರಿ ಎಸ್ ಎಸ್ ಸಂಪತ್ ಕುಮಾರ್ ವಂದಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ತತ್ವಪದ ವಿಮರ್ಶಾ ಲೇಖನ ಸ್ಪರ್ಧೆ*

ಮೇ 6, 2026

*ರೂ.20 ಲಕ್ಷ ವೆಚ್ಚದ ಹಸಿ ಕಸ ವಿಲೇವಾರಿ ಘಟಕಕ್ಕೆ ಶಾಸಕ ಮಂತರ್ ಗೌಡ ಚಾಲನೆ*

ಮೇ 6, 2026

*ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್” ರಾಷ್ಟ್ರೀಯ ಕಾರ್ಯಕ್ರಮ ನಿರ್ದೇಶಕರಾಗಿ ಬಿ.ಎನ್.ಪ್ರಕಾಶ್ ನೇಮಕ*

ಮೇ 6, 2026

*ಕನ್ನಡ ಸಾಹಿತ್ಯ ಪರಿಷತ್ತು ಕನ್ನಡದ ಅಸ್ಮಿತೆಯನ್ನು ಉಳಿಸಿ ಬೆಳೆಸಿಕೊಂಡು ಬಂದಿದೆ : ಬಿ.ಬಿ.ಶಿವಪ್ಪ*

ಮೇ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 6 NEWS DESK : ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಿರಂತರವಾಗಿ…

*ರೂ.20 ಲಕ್ಷ ವೆಚ್ಚದ ಹಸಿ ಕಸ ವಿಲೇವಾರಿ ಘಟಕಕ್ಕೆ ಶಾಸಕ ಮಂತರ್ ಗೌಡ ಚಾಲನೆ*

ಮೇ 6, 2026

*ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್” ರಾಷ್ಟ್ರೀಯ ಕಾರ್ಯಕ್ರಮ ನಿರ್ದೇಶಕರಾಗಿ ಬಿ.ಎನ್.ಪ್ರಕಾಶ್ ನೇಮಕ*

ಮೇ 6, 2026

*ಗೋಣಿಕೊಪ್ಪ : ರಕ್ತದಾನ ಶ್ರೇಷ್ಠತೆಯ ಬಗ್ಗೆ ಜಾಗೃತಿ ಮೂಡಿಸಬೇಕು : ಕುಲ್ಲಚಂಡ ಪ್ರಮೋದ್ ಗಣಪತಿ*

ಮೇ 6, 2026

*ರಾಜ್ಯ ಸರಕಾರದ ಸರ್ವಾಧಿಕಾರಿ ಧೋರಣೆ : ಪೊಲೀಸರ ಕ್ರಮಕ್ಕೆ ಸೋಮವಾರಪೇಟೆ ಬಿಜೆಪಿ ಅಸಮಾಧಾನ*

ಮೇ 6, 2026

*ದುಬಾರೆ : 7.3 ಕೋಟಿ ರೂ. ವೆಚ್ಚದ ತೂಗು ಸೇತುವೆ ನಿರ್ಮಾಣಕ್ಕೆ ಶಂಕುಸ್ಥಾಪನೆ : ವನ್ಯಜೀವಿಗಳ ಸಂತಾನ ನಿಯಂತ್ರಣಕ್ಕೆ ತಜ್ಞರೊಂದಿಗೆ ಚರ್ಚೆ : ಅರಣ್ಯ ಸಚಿವ ಈಶ್ವರ ಖಂಡ್ರೆ*

ಮೇ 6, 2026

*ಕೊಡಗು ಹೆಗ್ಗಡೆ ಸಮಾಜದ ಕ್ರೀಡಾ ಹಬ್ಬಕ್ಕೆ ಸಂಭ್ರಮದ ತೆರೆ*

ಮೇ 5, 2026

*ಶಂಸುಲ್ ಉಲಮಾ ಕಾಲೇಜು ವಿದ್ಯಾರ್ಥಿಗಳ ಸಾಧನೆ : ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗಣ್ಯರ ಕರೆ*

ಮೇ 5, 2026

*5ನೇ ದಿನವೂ ಮುಂದುವರೆದ ವಸತಿ ರಹಿತರ ಧರಣಿ*

ಮೇ 5, 2026

*ಕೊಡಗು : ಪತ್ರಿಕಾ ಪ್ರವಾಸ ವಾಹನಕ್ಕೆ ಚಾಲನೆ*

ಮೇ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.