ಮಡಿಕೇರಿ NEWS DESK ಮೇ 8 : ಹೃದಯಾಘಾತದಿಂದ ಖಾಸಗಿ ಬಸ್ ಚಾಲಕರೊಬ್ಬರು ಮೃತಪಟ್ಟಿರುವ ಘಟನೆ ಮಡಿಕೇರಿ ಸಮೀಪದ ತಾಳತ್ತಮನೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಬೆಂಗಳೂರು ಮೂಲದ ಶಿವಕುಮಾರ್ (50) ಎಂಬುವವರೇ ಮೃತ ದುರ್ದೈವಿ. ಇಂದು ಮುಂಜಾನೆ 4.45 ರ ಸುಮಾರಿಗೆ ಬಸ್ ಮಡಿಕೇರಿಯಿಂದ ಸುಳ್ಯ ಕಡೆಗೆ ಪ್ರಯಾಣ ಬೆಳೆಸಿತ್ತು. ಈ ಸಂದರ್ಭ ತಾಳತ್ತಮನೆ ಬಳಿ ಚಾಲಕ ಶಿವಕುಮಾರ್ ಗೆ ಹೃದಯಾಘಾತವಾಗಿದೆ. ನಿಯಂತ್ರಣ ಕಳೆದುಕೊಂಡ ಬಸ್ ಬಲ ಬದಿಯ ಬರೆಗೆ ವಾಲಿಕೊಂಡಿದೆ. ಬಸ್ ನಲ್ಲಿದ್ದ ಸುಮಾರು 20 ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಆದರೆ ಚಾಲಕ ಶಿವಕುಮಾರ್ ಹೃದಯಾಘಾತವಾದ ಸ್ವಲ್ಪ ಹೊತ್ತಿನಲ್ಲೇ ಮೃತಪಟ್ಟರು ಎಂದು ತಿಳಿದು ಬಂದಿದೆ. ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.








