Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಿಟ್ಟೂರು ಕಾರ್ಮಾಡಿನಲ್ಲಿ ವನ್ಯಜೀವಿ ಸಪ್ತಾಹ: ಪ್ಲಾಸ್ಟಿಕ್ ತ್ಯಾಜ್ಯ ತೆರವು, ಪರಿಸರ ಜಾಗೃತಿ*
  • *ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*
  • *ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*
  • *ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*
  • *ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ : ಕೇಂದ್ರ ಪುರಸ್ಕೃತ ಯೋಜನೆ ಸಕಾಲದಲ್ಲಿ ಪ್ರಗತಿ ಸಾಧಿಸಿ : ಸಂಸದ ಯದುವೀರ್ ಒಡೆಯರ್
  • *ಕಾವೇರಿ ತೀರ್ಥೋದ್ಭವ : ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮನವಿ*
  • *ಗಾಂಧಿ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ*
  • *ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*
  • *ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*
  • *ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
ಇತ್ತೀಚಿನ ಸುದ್ದಿಗಳು ಕರ್ನಾಟಕ

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮೈಸೂರು, ಮೇ 9 NEWS DESK : ಮೈಸೂರಿನ ಪಾರಂಪರಿಕ ಕಟ್ಟಡಗಳಾಗಿರುವ ದೇವರಾಜ ಮಾರುಕಟ್ಟೆ ಮತ್ತು ಲ್ಯಾನ್ಸ್‌ಡೌನ್‌ ಕಟ್ಟಡದ ಸಂರಕ್ಷಣೆ ಹಾಗೂ ನವೀಕರಣಕ್ಕೆ ಅನುದಾನವನ್ನು ಶೀಘ್ರ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಮನವಿ ಮಾಡಿದ್ದಾರೆ. ಮೈಸೂರಿನ ಪಾರಂಪರಿಕ ಕಟ್ಟಡಗಳನ್ನು ಸಂರಕ್ಷಣೆ ಮಾಡುವುದೇ ನಮ್ಮ ಮುಖ್ಯ ಧ್ಯೇಯ. ಈ ಸಂಬಂಧ ಮುಖ್ಯಮಂತ್ರಿಗೆ ಪತ್ರ ಬರೆಯಲಾಗಿದೆ ಎಂದು ಸಂಸದರು ಹೇಳಿದ್ದಾರೆ. ಮೈಸೂರಿನ ಐತಿಹಾಸಿಕ ಕಟ್ಟಡಗಳಾದ ದೇವರಾಜ ಮಾರುಕಟ್ಟೆ ಮತ್ತು ಲ್ಯಾನ್ಸ್‌ಡೌನ್ ಕಟ್ಟಡದ ಸಂರಕ್ಷಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ 4 ಮೇ 2026 ರಂದು ನೀಡಿದ ತೀರ್ಪು ಅತ್ಯಂತ ಮಹತ್ವದ್ದಾಗಿದೆ ಎಂದು ವಿವರಿಸಿದ್ದಾರೆ. :: ಸುಪ್ರೀಂ ಕೋರ್ಟ್‌ ತೀರ್ಪು ಮನವರಿಕೆ :: ಕಟ್ಟಡ ಕೆಡವಿ ಪುನರ್‌ ನಿರ್ಮಾಣದ ಪ್ರಸ್ತಾವನೆಯನ್ನು ತಿರಸ್ಕರಿಸಿದೆ. 19ನೇ ಶತಮಾನದ ಈ ಐತಿಹಾಸಿಕ ಕಟ್ಟಡವನ್ನು ಸಂರಕ್ಷಿಸಿ, ನವೀಕರಿಸಲು ಆದೇಶಿಸಿದೆ ಎಂದು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದಿದ್ದಾರೆ. :: ತಜ್ಞರ ಸಮಿತಿ ಶಿಫಾರಸು ಮೇರೆಗೆ ಶೇ. 70 ದುರಸ್ತಿ ಸಾಧ್ಯ :: 
ಐಐಟಿ ರೂರ್ಕಿ ಸಲ್ಲಿಸಿದ ವಿವರವಾದ ತಾಂತ್ರಿಕ ಅಧ್ಯಯನ ವರದಿ ಆಧರಿಸಿ ಸುಪ್ರೀಂ ಕೋರ್ಟ್‌ ಈ ತೀರ್ಪು ನೀಡಿದೆ. ಸುಮಾರು 70% ದುರಸ್ತಿ ಮಾಡಬಹುದಾಗಿದೆ. ಹಾಲಿ ಇರುವ ಅಡಿಪಾಯ ಸಂರಕ್ಷಣೆ ಮತ್ತು ನವೀಕರಣ ಸಾಧ್ಯವಾಗಲಿದೆ ಎಂದು ಯದುವೀರ್‌ ವಿವರಿಸಿದ್ದಾರೆ. “ನಾಗರಿಕ ವಾಸ್ತುಶಿಲ್ಪ ಸಮೂಹ”ಗಳು ಮೈಸೂರಿನ ಅವಿಭಾಜ್ಯ ಅಂಗವಾಗಿದೆ. ಮೈಸೂರು-ಕೊಡಗು ಕ್ಷೇತ್ರವನ್ನು ಪ್ರತಿನಿಧಿಸುವ ಸಂಸತ್ ಸದಸ್ಯನಾಗಿ, ಮೈಸೂರಿನ ಶ್ರೀಮಂತ ಸಾಂಸ್ಕೃತಿಕ ಪರಂಪರೆ ಮತ್ತು ಪ್ರವಾಸೋದ್ಯಮ ಸಂರಕ್ಷಿಸಲು ಬದ್ಧನಾಗಿದ್ದೇನೆ. ನ್ಯಾಯಾಂಗ ಆದೇಶವನ್ನು ಪಾಲಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ಸಂಸದರು ಹೇಳಿದ್ದಾರೆ. :: ಯೋಜನೆ ತಕ್ಷಣವೇ ಆರಂಭಿಸಲು ಸೂಚನೆ ::  ಈ ನಿಟ್ಟಿನಲ್ಲಿ ಐಐಟಿ ರೂರ್ಕಿ ಮತ್ತು ಇಂಟಾಚ್ ತಜ್ಞರ ಸಮಿತಿ ನೀಡಿರುವ ಶಿಫಾರಸಿನ ಅನ್ವಯ ದೇವರಾಜ ಮಾರುಕಟ್ಟೆ ಮತ್ತು ಲ್ಯಾನ್ಸ್‌ಡೌನ್ ನವೀಕರಣಕ್ಕೆ ಅನುದಾನ ಬಿಡುಗಡೆ ಮಾಡಬೇಕು ಎಂದು ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ. ಮೈಸೂರು ನಗರ ನಿಗಮ (ಎಂಸಿಸಿ) ಮತ್ತು ಮೈಸೂರು ಅಭಿವೃದ್ಧಿ ಪ್ರಾಧಿಕಾರಗಳು (ಎಂಡಿಎ) ಈ ಯೋಜನೆಯನ್ನು ತಕ್ಷಣವೇ ಪ್ರಾರಂಭಿಸಬೇಕು ಎಂದು ಸೂಚನೆ ನೀಡಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ರಾಜ್ಯ ಸರ್ಕಾರದಿಂದ ಹಂಚಿಕೆಯಾದ ಹಣವನ್ನು ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಮಾತ್ರ ಬಳಸಲಾಗುತ್ತಿದೆಯೇ ಎಂದು ಖಚಿತಪಡಿಸಿಕೊಳ್ಳಬೇಕಾಗಿದೆ ಎಂದಿದ್ದಾರೆ. :: ಈ ಹಿಂದೆ ಬಜೆಟ್‌ನಲ್ಲಿಯೂ ಘೋಷಿಸಲಾಗಿತ್ತು :: 2024–25ರ ಬಜೆಟ್‌ನಲ್ಲಿ ದೇವರಾಜ ಮಾರುಕಟ್ಟೆಯ ನವೀಕರಣಕ್ಕೆ ₹95 ಕೋಟಿ ಮತ್ತು ಲ್ಯಾನ್ಸ್‌ಡೌನ್ ಕಟ್ಟಡಕ್ಕೆ ₹35 ಕೋಟಿ ಅನುದಾನ ಘೋಷಿಸಲಾಗಿತ್ತು ಎಂಬುದನ್ನು ನೆನಪಿಸಿಕೊಳ್ಳಬೇಕಾಗಿದೆ ಎಂದು ಯದುವೀರ್‌ ಒಡೆಯರ್‌ ಮನವಿ ಪತ್ರದಲ್ಲಿ ತಿಳಿಸಿದ್ದಾರೆ. ದೇವರಾಜ ಮಾರುಕಟ್ಟೆ ಮತ್ತು ಲ್ಯಾನ್ಸ್‌ಡೌನ್‌ ಕೇವಲ ಕಟ್ಟಡಗಳಲ್ಲ, ಇವು ಮೈಸೂರಿನ ಜೀವಂತ ಸಾಂಸ್ಕೃತಿಕ ಮತ್ತು ವಾಣಿಜ್ಯ ಪರಂಪರೆಯನ್ನು ಪ್ರತಿನಿಧಿಸುತ್ತವೆ, ಮೈಸೂರಿನವರೇ ಆದ ಸಿಎಂ ಸಿದ್ದರಾಮಯ್ಯ ಅವರು ಇವುಗಳ ಸಂರಕ್ಷಣೆ ಮತ್ತು ನವೀಕರಣಕ್ಕೆ ಆದ್ಯತೆ ನೀಡಿ, ಅನುದಾನ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳುವ ಭರವಸೆ ಇದೆ ಎಂದು ಸಂಸದ ಯದುವೀರ್‌ ಒಡರಯರ್‌ ಸ್ಪಷ್ಟಪಡಿಸಿದ್ದಾರೆ.

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ನಿಟ್ಟೂರು ಕಾರ್ಮಾಡಿನಲ್ಲಿ ವನ್ಯಜೀವಿ ಸಪ್ತಾಹ: ಪ್ಲಾಸ್ಟಿಕ್ ತ್ಯಾಜ್ಯ ತೆರವು, ಪರಿಸರ ಜಾಗೃತಿ*

ಅಕ್ಟೋಬರ್ 9, 2026

*ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

ಅಕ್ಟೋಬರ್ 8, 2026

*ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

ಅಕ್ಟೋಬರ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.8 NEWS DESK : ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಅಕ್ಟೋಬರ್, 14 ರಂದು ಬೆಳಗ್ಗೆ 11…

*ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ : ಕೇಂದ್ರ ಪುರಸ್ಕೃತ ಯೋಜನೆ ಸಕಾಲದಲ್ಲಿ ಪ್ರಗತಿ ಸಾಧಿಸಿ : ಸಂಸದ ಯದುವೀರ್ ಒಡೆಯರ್

ಅಕ್ಟೋಬರ್ 8, 2026

*ಕಾವೇರಿ ತೀರ್ಥೋದ್ಭವ : ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮನವಿ*

ಅಕ್ಟೋಬರ್ 8, 2026

*ಗಾಂಧಿ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ*

ಅಕ್ಟೋಬರ್ 8, 2026

*ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*

ಅಕ್ಟೋಬರ್ 8, 2026

*ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*

ಅಕ್ಟೋಬರ್ 8, 2026

*ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*

ಅಕ್ಟೋಬರ್ 8, 2026

*ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*

ಅಕ್ಟೋಬರ್ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.