
ಮಡಿಕೇರಿ ಮೇ 9 NEWS DESK : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮೇ, 12 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆವರೆಗೆ ಮಿನಿ “ಉದ್ಯೋಗಮೇಳ’ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ ಪಿರಾಮಲ್ ಪೈನಾನ್ಸ್ ಲಿಮಿಟೆಡ್ ಮೈಸೂರು, ಕಲ್ಯಾಣಿ ಮೋಟಾರ್ಸ್ ಕಾರ್ ಶೋ ರೂಮ್, ಮಡಿಕೇರಿ, ಇನ್ಸ್ಟಂಟ್ ಐಟಿ ಟೆಕ್ನಾಲಜಿ ಮೈಸೂರು, ಹ್ಯೂಂಡಾಯಿ ಕಾರ್ ಶೋ ರೂಮ್, ಮಡಿಕೇರಿ, ಇವೊಲೋಬ್ಯಾಕ್ ರೆಸಾರ್ಟ್, ಮಡಿಕೇರಿ, ಮುತ್ತೂಟ್ ಮನಿ ಪೈನಾನ್ಸ್, ಮೈಸೂರು ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಮೇಳದಲ್ಲಿ ಖಾಸಗಿ ಕಂಪೆನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿಯಿರುವ ಹುದ್ದೆಗಳನ್ನು ಮಿನಿ ಉದ್ಯೋಗಮೇಳದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಉದ್ಯೋಗಮೇಳದಲ್ಲಿ ಎಸ್ಎಸ್ಎಲ್ಸಿ, ಪಿಯುಸಿ., ಐಟಿಐ, ಡಿಪ್ಲೋಮ, ಪದವಿ ಹಾಗೂ ಸ್ನಾತಕೋತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ (ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗಮೇಳಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಜಾಬ್ ಕೋಆರ್ಡಿನೇಟರ್ 8296020826 ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಅವರು ತಿಳಿಸಿದ್ದಾರೆ.








