
ಮಡಿಕೇರಿ ಮೇ 11 NEWS DESK : ಜಿಲ್ಲೆಗೆ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅವರು ಅಧಿಕಾರ ಸ್ವೀಕರಿಸಿದ್ದಾರೆ. 2014 ನೇ ಬ್ಯಾಚಿನ ಕೆಎಎಸ್ ಅಧಿಕಾರಿಯಾದ ಸಹನಾ ಎಸ್.ಹಾದಿಮನಿ ಅವರು ಈ ಹಿಂದೆ 6 ವರ್ಷಗಳ ಕಾಲ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಭೂ ಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಅದಕ್ಕೂ ಮೊದಲು ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಆಡಳಿತ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ.












